ಬೆಂಗಳೂರು: ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸಿ ಈಗ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಸಂಜನಾ ಅವರನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಲಾಗಿದೆ ಎಂದು ಆರೋಪಿಸಿ ಮೌಲ್ವಿಯೊಬ್ಬರ ವಿರುದ್ಧ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ನಶೆ ಲೋಕದಲ್ಲಿ ತೇಲಾಡಿದ ನಟಿಗೆ ಹೆಚ್ಚಾಯ್ತು ಚಿಂತೆ : ಒಂಟಿಯಾದ ರಾಗಿಣಿ
ವಕೀಲ ಅಮೃತೇಶ್ ಎನ್ನುವವರು ಬೆಂಗಳೂರಿನ ಟ್ಯಾನರಿ ರಸ್ತೆಯ ದಾರುಲ್ ಉಲಮ್ ಶಾವಲಿಲುಲ್ಲಾ ಎಂಬ ಮೌಲ್ವಿ ವಿರುದ್ಧ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಕಾಟನ್‌ಪೇಟೆ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾಾರೆ. ನಟಿ ಸಂಜನಾ ಅವರನ್ನು 09 ಅಕ್ಟೋಬರ್ 2018 ರಂದು ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಿಸಲಾಗಿದ್ದು ಮಹಿರಾ ಎಂದು ಮರುನಾಮಕರಣ ಮಾಡಲಾಗಿರುವ ಪ್ರಮಾಣಪತ್ರವನ್ನು ನೀಡಲಾಗಿದೆ. ಆದರೆ ನಟಿಯನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ದೂರಿನಡಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಕಾರ್ಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿರುವ ಡಾ. ಅಜೀಜ್ ಎಂಬುವವರನ್ನು ಸಂಜನಾ ಮದುವೆಯಾಗಿದ್ದಾರೆ ಎನ್ನಲಾದ ಫೋಟೋ ಕೆಲವು ದಿನಗಳ ಹಿಂದೆ ವೈರಲ್ ಆಗಿತ್ತು. ಇದೀಗ ಸಂಜನಾ ಅವರನ್ನು ಬಲವಂತವಾಗಿ ಮತಾಂತರಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.