ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಯುವತಿ ತನಿಖಾಧಿಕಾರಿಗಳ ಮುಂದೆ ತದ್ವಿರುದ್ಧ ಹೇಳಿಕೆ ನೀಡಿಲ್ಲ. ಇದೀಗ ಬರುತ್ತಿರುವ ಸುದ್ದಿ ಕಪೋಲಕಲ್ಪಿತ ಎಂದು ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್ ಸ್ಪಷ್ಟಪಡಿಸಿದ್ದಾರೆ.
ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಯುವತಿ ತನಿಖಾಧಿಕಾರಿಗಳ ಮುಂದೆ ತದ್ವಿರುದ್ಧ ಹೇಳಿಕೆ ನೀಡಿಲ್ಲ. ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಗಳಿಗೆ ಆಕೆ ಬದ್ಧವಾಗಿದ್ದಾಳೆ. ಪ್ರಕರಣದಲ್ಲಿ ಆರೋಪಿ ಪರ ವಕೀಲರು ತುಂಬಾ ಪ್ರಭಾವ ಶಾಲಿಗಳಾಗಿದ್ದು, ಮಾಧ್ಯಮಗಳ ಮುಖಾಂತರ ಕಪೋಲಕಲ್ಪಿತ ಸುದ್ದಿ ಹರಿಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಏ.11ರಂದು ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಗೆ ಪ್ರಕರಣ ಸಂಬಂಧ ಏನಾದರೂ ವಾಟ್ಸಾಪ್ ಚಾಟ್, ಸ್ಕ್ರೀನ್ ಶಾಟ್ ಸೇರಿದಂತೆ ಅಗತ್ಯ ಸಾಕ್ಷ್ಯಾಧಾರವಿದ್ದರೆ ಸಲ್ಲಿಸಿ ಎಂದು ನೋಟಿಸ್ ಕೊಟ್ಟಿದ್ದರು. ಅದರಂತೆ ನಮ್ಮ ಕಕ್ಷಿದಾರರು ಇಂದು ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ ದಾಖಲಾತಿ ಸಲ್ಲಿಸಿ ತನಿಖೆಗೆ ಸಹಕರಿಸಿದ್ದಾರೆ.
ಸೆ.164 ರಡಿ ನ್ಯಾಯಾಲಯದಲ್ಲಿ ಮತ್ತೊಮ್ಮೆ ಯುವತಿ ಹೇಳಿಕೆ ನೀಡುವುದಿಲ್ಲ. ಈ ಹಿಂದೆ ಕೋರ್ಟ್ನಲ್ಲಿ ನೀಡಿದ ಹೇಳಿಕೆಗೆ ಯುವತಿ ಬದ್ಧವಾಗಿದ್ದಾಳೆ ಎಂದು ವಕೀಲರು ತಿಳಿಸಿದ್ದಾರೆ.
ಇದನ್ನೂ ಓದಿ: ಸಿಡಿ ಸಂತ್ರಸ್ತೆಯನ್ನೇ ಹನಿಟ್ರ್ಯಾಪ್ ಮಾಡಿದ್ದಾರಂತೆ.. ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್!