ಬೆಂಗಳೂರು: ರಿಜ್ವಾನ್ ಹರ್ಷದ್ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ವಿಧಾನ ಪರಿಷತ್ ಸ್ಥಾನದ ಚುನಾವಣೆಗೆ ಟಿಕೆಟ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಡಿಸಿಎಂ ಲಕ್ಷ್ಮಣ ಸವದಿ ಭೇಟಿ ನೀಡಿದರು. ಫೆಬ್ರವರಿ 17ರಂದು ಖಾಲಿ ಇರುವ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಟಿಕೆಟ್ ನೀಡುವ ಮೂಲಕ ಖಾಲಿ ಇರುವ ಎಂಎಲ್ಸಿ ಸ್ಥಾನಕ್ಕೆ ತಮ್ಮನ್ನು ಆಯ್ಕೆ ಮಾಡುವಂತೆ ಸಿಎಂ ಬಿಎಸ್ವೈಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಈ ಸ್ಥಾನಕ್ಕೆ ಅನರ್ಹ ಶಾಸಕ ಆರ್.ಶಂಕರ್ ಪಟ್ಟು ಹಿಡಿದಿದ್ದು, ಆ ಸ್ಥಾನ ಎಲ್ಲಿ ಕೈತಪ್ಪಲಿದೆಯೋ ಎಂದು ಸಿಎಂ ಬಿಎಸ್ವೈಗೆ ಸವದಿ ಒತ್ತಡ ಹಾಕಿ ಟಿಕೆಟ್ ಪಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸಿಎಂ ಭೇಟಿಯಾಗಿ ಪರಿಷತ್ ಟಿಕೆಟ್ಗೆ ಮನವಿ ಮಾಡಿದ ಸವದಿ - ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ
ರಿಜ್ವಾನ್ ಹರ್ಷದ್ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ವಿಧಾನ ಪರಿಷತ್ ಸ್ಥಾನದ ಚುನಾವಣೆಗೆ ಟಿಕೆಟ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.