ETV Bharat / state

ರಾಷ್ಟ್ರೀಯ ಪಕ್ಷಗಳಿಗೆ ನಾಯಕತ್ವದ ಬಿಕ್ಕಟ್ಟು; ಜೆಡಿಎಸ್​ಗಿಲ್ಲ ಈ ತಲೆನೋವು

author img

By

Published : Aug 4, 2022, 7:01 PM IST

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್​ಗೆ ನಾಯಕತ್ವದ ಬಿಕ್ಕಟ್ಟು ಎದುರಾಗಿದೆ. ಆದ್ರೆ ಈ ತೊಂದರೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್​ಗೆ ಇಲ್ಲ. ಈ ಪಕ್ಷ ಹೆಚ್​ಡಿಡಿ ಮತ್ತು ಹೆಚ್​ಡಿಕೆ ಅವರ ಸಂಪೂರ್ಣ ಹಿಡಿತದಲ್ಲಿದೆ.

ರಾಷ್ಟ್ರೀಯ ಪಕ್ಷಗಳಿಗೆ ನಾಯಕತ್ವದ ಬಿಕ್ಕಟ್ಟು
ರಾಷ್ಟ್ರೀಯ ಪಕ್ಷಗಳಿಗೆ ನಾಯಕತ್ವದ ಬಿಕ್ಕಟ್ಟು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಎಂಟು ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ಅಖಾಡಕ್ಕೆ ಧುಮುಕಿವೆ. ಆದರೆ ರಾಷ್ಟ್ರೀಯ ಪಕ್ಷಗಳಲ್ಲಿನ ನಾಯಕತ್ವ ಗೊಂದಲ ಮಾತ್ರ ಮುಂದುವರೆದಿದೆ. ಪ್ರಮುಖ ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾದಳ ಮಾತ್ರ ಈ ವಿಚಾರದಲ್ಲಿ ಸ್ಪಷ್ಟ ನಿಲುವು ಹೊಂದಿದೆ.

ರಾಜ್ಯ ವಿಧಾನಸಭಾ ಚುನಾವಣಾ ಕಣಕ್ಕೆ ರಂಗು ಬರಲು ಶುರುವಾಗಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್‌, ಪ್ರಾದೇಶಿಕ ಪಕ್ಷ ಜೆಡಿಎಸ್ ತಮ್ಮದೇ ಆದ ರೀತಿಯಲ್ಲಿ ಚುನಾವಣಾ ಪ್ರಚಾರಕ್ಕೆ ಧುಮುಕಿ ಸಿದ್ಧತೆ ಆರಂಭಿಸಿವೆ. ಈ ಬಾರಿ ನಾವೇ ಅಧಿಕಾರಕ್ಕೆ ಬರಲಿದ್ದೇವೆ, ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಮೂರೂ ಪಕ್ಷಗಳ ನಾಯಕರು ಹೇಳಿಕೆ ನೀಡುತ್ತಿದ್ದಾರೆ.

1. ರಾಷ್ಟ್ರೀಯ ಪಕ್ಷಗಳಲ್ಲಿ ನಾಯಕತ್ವ ಬಿಕ್ಕಟ್ಟು: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಮತ್ತು ಅಧಿಕೃತ ಪ್ರತಿಪಕ್ಷವಾಗಿರುವ ಕಾಂಗ್ರೆಸ್‌ ಎರಡೂ ಕೂಡ ರಾಷ್ಟ್ರೀಯ ಪಕ್ಷಗಳೇ. ಈ ಎರಡೂ ಪಕ್ಷಗಳಲ್ಲಿಯೂ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಸ್ಪಷ್ಟ ನಿಲುವಿಲ್ಲ. ನಾಯಕತ್ವದ ವಿಚಾರದಲ್ಲಿ ಒಮ್ಮತವಿಲ್ಲದೇ ಇರುವುದು ಸ್ಪಷ್ಟ. ಎರಡೂ ಪಕ್ಷಗಳ ಹೈಕಮಾಂಡ್ ನಾಯಕರು ಕೂಡ ಈ ಗೊಂದಲಕ್ಕೆ ಪರಿಹಾರ ನೀಡುವಲ್ಲಿ ವಿಫಲರಾಗಿದ್ದಾರೆ. ಚುನಾವಣೆಯಲ್ಲಿ ಹಿನ್ನಡೆಯಾಗಬಹುದು ಎನ್ನುವ ಕಾರಣಕ್ಕೆ ಹೈಕಮಾಂಡ್ ಸಾಮೂಹಿಕ ನಾಯಕತ್ವದ ಜಪವನ್ನೇ ಬೋಧನೆ ಮಾಡುತ್ತಿದೆ.

2. ಬಿಜೆಪಿಯಲ್ಲಿ ಗೊಂದಲ: ಸದ್ಯ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಯಡಿಯೂರಪ್ಪ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದ್ದು, ಎರಡು ವರ್ಷಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚುನಾವಣಾ ರಾಜಕೀಯಕ್ಕೂ ಗುಡ್ ಬೈ ಹೇಳಿದ್ದಾರೆ. ಆದರೆ ಯಡಿಯೂರಪ್ಪ ನಂತರ ಯಾರು ಎನ್ನುವ ಪ್ರಶ್ನೆಗೆ ಬಿಜೆಪಿಯಲ್ಲಿ ಉತ್ತರವಿಲ್ಲ. ಯಡಿಯೂರಪ್ಪ ಸೂಚಿತ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಯ್ಕೆಯಾಗಿ ರಾಜ್ಯಭಾರ ಮಾಡುತ್ತಿದ್ದರೂ, ಮುಂದಿನ ಚುನಾವಣೆಯಲ್ಲಿ ಬೊಮ್ಮಾಯಿ ನಾಯಕತ್ವ ಎನ್ನುವ ವಿಚಾರದಲ್ಲಿ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಗೊಂದಲವಿದೆ.

ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ದಾವಣಗೆರೆಯಲ್ಲಿ ಒಮ್ಮೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸಲಾಗುತ್ತದೆ ಎಂದಿದ್ದರು. ರಾಜ್ಯ ನಾಯಕರು ಅದಕ್ಕೆ ಬೇರೆ ಬೇರೆಯದ್ದೇ ವ್ಯಾಖ್ಯಾನ ನೀಡಿದ್ದಾರೆ. ಬೊಮ್ಮಾಯಿ ನಾಯಕತ್ವ ಒಪ್ಪುವ ಮನಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ನಾಯಕರಿಲ್ಲ. ಆರ್​. ಅಶೋಕ್, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಪ್ರಹ್ಲಾದ್ ಜೋಶಿ, ಬಸನಗೌಡ ಪಾಟೀಲ್‌ ಯತ್ನಾಳ್ ಹೀಗೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತಿದೆ.

3. ಕಾಂಗ್ರೆಸ್​ನಲ್ಲಿ ಬಣ ರಾಜಕೀಯ: ಪಕ್ಷದಲ್ಲಿನ ಈ ಗೊಂದಲ ನೋಡಿಯೇ ಹೈಕಮಾಂ‌ಡ್ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾರ ಹೆಸರನ್ನು ಘೋಷಿಸುವ ಗೋಜಿಗೆ ಹೋಗಿಲ್ಲ. ಅದರ ಬದಲು ಯಡಿಯೂರಪ್ಪ ಮಾರ್ಗದರ್ಶನದಲ್ಲಿ, ಬೊಮ್ಮಾಯಿ, ಕಟೀಲ್ ನೇತೃತ್ವದಲ್ಲಿ ಸಾಮೂಹಿಕ ನಾಯಕತ್ವದಡಿ ಚುನಾವಣೆಗೆ ಹೋಗಲಿದ್ದೇವೆ ಎನ್ನುವ ಹೇಳಿಕೆ ಕೊಟ್ಟು ಹೈಕಮಾಂಡ್ ಕೈ ತೊಳೆದುಕೊಂಡಿದೆ. ಕಾಂಗ್ರೆಸ್‌ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಇಲ್ಲಿಯೂ ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ ಮೇಲ್ನೋಟಕ್ಕೆ ಮಾತ್ರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಪೈಪೋಟಿ ಕಾಣಿಸುತ್ತಿದೆ. ಬಹಿರಂಗವಾಗಿ ಈ ಇಬ್ಬರು ನಾಯಕರು ಮುಖ್ಯಮಂತ್ರಿ ಸ್ಥಾನದ ಅಪೇಕ್ಷೆ ವ್ಯಕ್ತಪಡಿಸುತ್ತಿರುವುದರಿಂದ ಕಾಂಗ್ರೆಸ್​ನಲ್ಲಿ ಬಣ ರಾಜಕೀಯ ಅರಂಭವಾಗಿದೆ.

4. ಜನ ಬೆಂಬಲದ ಪ್ರದರ್ಶನ: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ತಮ್ಮ ತಮ್ಮ ಬಣಗಳ ಮೂಲಕ ಶಕ್ತಿ ಪ್ರದರ್ಶನ ಮಾಡಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ತಾವೇ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. 2023 ಕ್ಕೆ ಶತಾಯಗತಾಯ ಕಾಂಗ್ರೆಸ್​ನನ್ನು ಅಧಿಕಾರಕ್ಕೆ ತಂದು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಹೊರಟಿದ್ದಾರೆ. ಇತ್ತೀಚೆಗಷ್ಟೇ ಮೇಕೆದಾಟು ಪಾದಯಾತ್ರೆ ಮಾಡಿ ರಾಷ್ಟ್ರಮಟ್ಟದಲ್ಲಿ ದೊಡ್ಡ ಹೆಸರು ಮಾಡಿದ್ದರು, ಜನರ ಬೆಂಬಲ ಸಹ ಗಳಿಸಿದ್ದರು. ಇದೀಗ ಸಿದ್ದರಾಮಯ್ಯ ಅಮೃತ ಮಹೋತ್ಸವ ಆಚರಿಸಿಕೊಳ್ಳುವ ಮೂಲಕ ಡಿಕೆಶಿಗೆ ಸಿಕ್ಕ ಯಶಸ್ಸನ್ನು ಮೀರಿಸುವ ಜನ ಬೆಂಬಲ ಪ್ರದರ್ಶನ ಮಾಡಿದ್ದಾರೆ.

5. ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ: ರಾಹುಲ್ ಗಾಂಧಿಯನ್ನು ಕರೆಸಿಕೊಂಡು ಹಾಡಿ ಹೊಗಳಿಸಿಕೊಂಡಿರುವುದು ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಮಾಡಿಕೊಳ್ಳುವ ಪೂರ್ವ ತಯಾರಿಯ ಭಾಗ ಎನ್ನಲಾಗಿದೆ. ವೇದಿಕೆ ಮೇಲೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪರಸ್ಪರ ತಬ್ಬಿಕೊಂಡು ಹಾಡಿ ಹೊಗಳಿಕೊಂಡರೂ, ಸ್ಪರ್ಧಿಗಳು ಎನ್ನುವುದು ಗುಟ್ಟಾಗೇನು ಉಳಿದಿಲ್ಲ. ಉಭಯ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಕಿಸಾನ್​ ಕಾಂಗ್ರೆಸ್​ ಒತ್ತಾಯ

ಇವರ ಜೊತೆ ಎಂ.ಪಿ.ಪಾಟೀಲ್, ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿದಂತೆ ಮತ್ತಷ್ಟು ನಾಯಕರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಆದರೆ, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಯತ್ನ ನಡೆಸುತ್ತಿರುವುದರಿಂದ ಈ ಎಲ್ಲಾ ನಾಯಕರು ಮೌನವಾಗಿದ್ದಾರೆ. ಇದೆಲ್ಲಾ ಹೈಕಮಾಂಡ್ ಗಮನಕ್ಕೆ ಇದ್ದರೂ ಮುಖ್ಯಮಂತ್ರಿ ಅಭ್ಯರ್ಥಿ ವಿವಾದದಲ್ಲಿನ ಗೊಂದಲಕ್ಕೆ ತೆರೆ ಎಳೆದಿಲ್ಲ. ಯಾರನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರಕಟಿಸಿದರೂ ಪಕ್ಷದಲ್ಲಿ ಬಣ ರಾಜಕೀಯ ಆರಂಭಗೊಂಡು ಚುನಾವಣೆಯಲ್ಲಿ ಹಿನ್ನಡೆಯಾಗಲಿದೆ ಎನ್ನುವ ಕಾರಣಕ್ಕೆ ನಾಯಕತ್ವದ ಗೊಂದಲವನ್ನು ಉಳಿಸಿಕೊಂಡೇ ಚುನಾವಣೆಗೆ ತಯಾರಿ ಆರಂಭಿಸಿದೆ.

6. ಜೆಡಿಎಸ್​ಗಿಲ್ಲ ಬಿಕ್ಕಟ್ಟು: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿರುವ ನಾಯಕತ್ವ ಗೊಂದಲ, ಮುಖ್ಯಮಂತ್ರಿ ಅಭ್ಯರ್ಥಿ ಗೊಂದಲ ಜೆಡಿಎಸ್​ನಲ್ಲಿ ಇಲ್ಲ. ದೇವೇಗೌಡರ ಕುಟುಂಬದ ಸಂಪೂರ್ಣ ಹಿಡಿತದಲ್ಲಿ ಪಕ್ಷವಿದ್ದು, ಸ್ವತಂತ್ರವಾಗಿಯಾಗಲಿ, ಹೊಂದಾಣಿಕೆ ಮೂಲಕವಾಗಲಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುವ ಸ್ಪಷ್ಟತೆ ಇದೆ. ಈ ವಿಚಾರದಲ್ಲಿ ಪಕ್ಷದಲ್ಲಿ ಯಾರಲ್ಲಿಯೂ ಅಸಮಧಾನವಿಲ್ಲ. ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಯಾವುದೇ ಗೊಂದಲವೂ ಇಲ್ಲ. ನಾಯಕತ್ವ ಕೂಡ ಕುಮಾರಸ್ವಾಮಿ ಅವರದ್ದೇ ಆಗಿರಲಿದೆ.

ಜೆಡಿಎಸ್​ನಲ್ಲಿ ಹೈಕಮಾಂಡ್ ಪದ್ಮನಾಭನಗರದಲ್ಲೇ ಇದೆ. ಯಾರೋ ದೆಹಲಿ ನಾಯಕರು ಇಲ್ಲಿಗೆ ಬಂದು ಪಂಚಾಯಿತಿ ಮಾಡಬೇಕಿಲ್ಲ. ದೇವೇಗೌಡರು ಹೇಳಿದ ಮಾತೆ ಅಂತಿಮ. ಹಾಗಾಗಿ ದೇವೇಗೌಡರ ಮಾರ್ಗದರ್ಶನದಲ್ಲಿ, ಕುಮಾರಸ್ವಾಮಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಈ ಕಾರಣದಿಂದಾಗಿ ರಾಷ್ಟ್ರೀಯ ಪಕ್ಷಗಳಿಗಿರುವ ನಾಯಕತ್ವ ಬಿಕ್ಕಟ್ಟು ಜೆಡಿಎಸ್​ಗೆ ಇಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.