ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಈ ನಡುವೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಪರೀಕ್ಷಾ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಈವರೆಗೆ ಸಾಂಕೇತಿಕವಾಗಿ ಪ್ರತಿಭಟನೆಯನ್ನ ಮಾಡಿದ್ದೇವೆ, ನಮ್ಮ ಬೇಡಿಕೆ ಈಡೇರದಿದಲ್ಲಿ ಮೌಲ್ಯಮಾಪನ ಬಹಿಷ್ಕರಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.
ಉಪನಾಸ್ಯಕರ ಬೇಡಿಕೆಗಳೇನು?
- ಕುಮಾರ್ ನಾಯಕ ವರದಿ ಜಾರಿಗೆ ತರುವಂತೆ ಆಗ್ರಹ
- ಉಪನಾಸ್ಯಕರ ವೇತನ ತಾರತಮ್ಯ ಹೋಗಲಾಡಿಸಬೇಕು
- ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಅನುಪಾತ ಕಡಿಮೆಗೊಳಿಸಬೇಕು
- ಮೌಲ್ಯಮಾಪನದ ಬಳಿಕ ಚೆಕ್ ಮೂಲಕ ಮೊತ್ತ ನೀಡಬೇಕು
- ಅನುದಾನಿತ ಕಾಲೇಜು ಉಪನ್ಯಾಸಕರ ವೇತನ ತಾರತಮ್ಯ ನಿವಾರಿಸಬೇಕು
ಈ ಹಿಂದೆ ನಾಲ್ಕು ಬಾರಿ ಪ್ರತಿಭಟನೆ ಮಾಡಿದ್ದ ಉಪನಾಸ್ಯಕರು, ಪಿಯು ಪರೀಕ್ಷೆ ವೇಳೆ ಕಪ್ಪು ಪಟ್ಟಿ ಧರಿಸಿ ಮೇಲ್ವಿಚಾರಣೆಗೆ ಹಾಜರಾಗಿದ್ದರು. ಇಂದು ಕೂಡ ಅದೇ ಮಾರ್ಗವನ್ನು ಅನುಸರಿಸಿದ್ದಾರೆ.