ETV Bharat / state

ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಪಾರ್ಥಿವ ಶರೀರ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ - Leelavati death

ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು, ಅಭಿಮಾನಿಗಳು ಹಾಗೂ ಗಣ್ಯರು ದರ್ಶನ ಪಡೆಯುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ರವೀಂದ್ರ ಕಲಾಕ್ಷೇತ್ರಕ್ಕೆ ಭೇಟಿ ನೀಡಿ, ಅಂತಿಮ ದರ್ಶನ ಪಡೆದರು.

Leelavati mortal kept at Rabindra Kalakshetra
ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಪಾರ್ಥೀವ ಶರೀರದ ದರ್ಶನಕ್ಕೆ ಅವಕಾಶ
author img

By ETV Bharat Karnataka Team

Published : Dec 9, 2023, 10:46 AM IST

Updated : Dec 9, 2023, 4:35 PM IST

ಅಂತಿಮ ದರ್ಶನ ಪಡೆದ ಗಣ್ಯರು

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಹುಕಾಲ ಛಾಪು ಮೂಡಿಸಿದ್ದ ಹಿರಿಯ ನಟಿ ಲೀಲಾವತಿ ಅವರು ನಿನ್ನೆ ಸಂಜೆ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು. ನೆಲಮಂಗಲದ ಅಂಬೇಡ್ಕರ್​ ಮೈದಾನದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂಬೇಡ್ಕರ್​​ ಮೈದಾನದಿಂದ ‌ಲೀಲಾವತಿ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ನಟಿಯರಾದ ಸುಧಾರಾಣಿ, ಮಾಳವಿಕಾ ಸೇರಿದಂತೆ ಇನ್ನಿತರರು ಅಂತಿಮ ದರ್ಶನ ಪಡೆದುಕೊಂಡರು.

ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಪಾರ್ಥಿವ ಶರೀರ......

ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ: ರವೀಂದ್ರ ಕಲಾಕ್ಷೇತ್ರದಲ್ಲಿ ‌ಸಾರ್ವಜನಿಕರು, ಗಣ್ಯರು, ಅಭಿಮಾನಿಗಳು ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. 11 ಗಂಟೆಯಿಂದ ಇಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಸರಿ ಸುಮಾರು 2 ಗಂಟೆಯವರೆಗೆ ಲೀಲಾವತಿ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಪಡೆದುಕೊಳ್ಳಬಹುದಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ​ ಕೈಗೊಳ್ಳಲಾಗಿದೆ.

ನಾಲ್ಕುವರೆ ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚಿದ್ದ ಹಿರಿಯ ನಟಿ ಲೀಲಾವತಿ ಅವರು ಬರೋಬ್ಬರಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಅಮೋಘ ಅಭಿನಯಕ್ಕೆ ಅಪಾರ ಸಂಖ್ಯೆಯ ಸಿನಿಪ್ರೇಮಿಗಳು ಮನಸೋತಿದ್ದರು. ಆದರೆ ಕೆಲ ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು ಲೀಲಾವತಿ ಅವ ನಿವಾಸಕ್ಕೆ ಆಗಮಿಸಿ, ಆರೋಗ್ಯ ವಿಚಾರಿಸಿದ್ದರು. ಆದ್ರೆ ಶುಕ್ರವಾರ ಸಂಜೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್​ ಮೈದಾನದಲ್ಲಿ ನಟಿ ಲೀಲಾವತಿ ಪಾರ್ಥಿವ ಶರೀರ: ಸಾರ್ವಜನಿಕರಿಂದ ಅಂತಿಮ ದರ್ಶನ

ರವೀಂದ್ರ ಕಲಾಕ್ಷೇತ್ರಕ್ಕೂ ಮುನ್ನ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ನಟಿ ಪಾರ್ಥಿವ ಶರೀರ ಇರಿಸಲಾಗಿತ್ತು. ಮುಂಜಾನೆ 5:30 ರಿಂದ 10:30ರ ವರೆಗೂ ಸಾರ್ವಜನಿಕರು ಆಗಮಿಸಿ ನಟಿಯ ಅಂತಿಮ ದರ್ಶನ ಪಡೆದರು. ಬಳಿಕ ಅಲ್ಲಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಯಿತು. ರವೀಂದ್ರ ಕಲಾಕ್ಷೇತ್ರದ ಬಯಲು ರಂಗಮಂದಿರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 2:30 ರವರೆಗೆ ದರ್ಶನಕ್ಕೆ ಅವಕಾಶವಿದೆ.

ನಂತರ, ಸೋಲದೇವನಹಳ್ಳಿಯಲ್ಲಿರುವ ಲೀಲಾವತಿಯವರ ತೋಟದಲ್ಲೇ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮಾಹಿತಿ ನೀಡಿದ್ದಾರೆ. ಅಂತಿಮ ದರ್ಶನದ ಸ್ಥಳದಲ್ಲಿ ಕುಟುಂಬಸ್ಥರು ಹಾಜರಿದ್ದಾರೆ. ಈಗಾಗಲೇ ಚಿತ್ರರಂಗದ ಹಲವರು ನಟಿಯ ಅಂತಿಮ ದರ್ಶನ ಪಡೆದಿದ್ದಾರೆ. ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು, ಸಾರ್ವಜನಿಕರು ಬರುತ್ತಿದ್ದಾರೆ.

ಇದನ್ನೂ ಓದಿ: ಕಲಾಪುತ್ರಿ ಲೀಲಾವತಿ ಅಸ್ತಂಗತ; ನಾಲ್ಕೂವರೆ ದಶಕಗಳ ಸಿನಿ ಬದುಕಿನ ಕಥೆ ಹೇಳುವ ಅಪರೂಪದ ಫೋಟೋಗಳು

Last Updated : Dec 9, 2023, 4:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.