ಬೆಂಗಳೂರು: ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ,ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಗೂಗಲ್ ಸಂಸ್ಥೆ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
-
#ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ,ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ.
— H D Kumaraswamy (@hd_kumaraswamy) June 3, 2021 " class="align-text-top noRightClick twitterSection" data="
3/4
">#ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ,ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ.
— H D Kumaraswamy (@hd_kumaraswamy) June 3, 2021
3/4#ಗೂಗಲ್ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ,ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ.
— H D Kumaraswamy (@hd_kumaraswamy) June 3, 2021
3/4
ಈ ಕುರಿತು ಟ್ವೀಟ್ ಮಾಡಿರುವ ಅವರು, ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? 'Ugliest language in India' ಎಂಬ ಹುಡುಕಾಟಕ್ಕೆ ಕನ್ನಡ ಎಂದು ಉತ್ತರ ನೀಡುತ್ತಿದ್ದ ವೆಬ್ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್ಗೆ ಅಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
-
ಭಾಷೆ ವಿಚಾರದಲ್ಲಿ @GoogleIndia @Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? 'Ugliest language in India' ಎಂಬ ಹುಡುಕಾಟಕ್ಕೆ #Kannada ಎಂದು ಉತ್ತರ ನೀಡುತ್ತಿದ್ದ ವೆಬ್ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ?
— H D Kumaraswamy (@hd_kumaraswamy) June 3, 2021 " class="align-text-top noRightClick twitterSection" data="
1/4
">ಭಾಷೆ ವಿಚಾರದಲ್ಲಿ @GoogleIndia @Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? 'Ugliest language in India' ಎಂಬ ಹುಡುಕಾಟಕ್ಕೆ #Kannada ಎಂದು ಉತ್ತರ ನೀಡುತ್ತಿದ್ದ ವೆಬ್ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ?
— H D Kumaraswamy (@hd_kumaraswamy) June 3, 2021
1/4ಭಾಷೆ ವಿಚಾರದಲ್ಲಿ @GoogleIndia @Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? 'Ugliest language in India' ಎಂಬ ಹುಡುಕಾಟಕ್ಕೆ #Kannada ಎಂದು ಉತ್ತರ ನೀಡುತ್ತಿದ್ದ ವೆಬ್ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ?
— H D Kumaraswamy (@hd_kumaraswamy) June 3, 2021
1/4
ಈ ಕುರಿತು ಮಾತನಾಡಿರುವ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ ತಂದಾಗ, ಅವರು ಇದು ಅತ್ಯಂತ ಖಂಡನೀಯ ಸಂಗತಿ. ಗೂಗಲ್ ಆಗಲಿ, ಬೇರೆ ಯಾರೇ ಆಗಲಿ ಕನ್ನಡ ಭಾಷೆ ಬಗ್ಗೆ ಗೌರವವಿಲ್ಲದೇ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.
ಕನ್ನಡ ಭಾಷೆ ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ. ಭಾರತದ ಶಾಸ್ತ್ರೀಯ ಭಾಷೆ ಎಂಬ ಹೆಗ್ಗಳಿಕೆ ಪಡೆದಿರುವ ಭಾಷೆಯ ಬಗ್ಗೆ ಕೀಳಾಗಿ ಮಾತನಾಡಿದರೂ ಅದನ್ನು ಸಹಿಸಲಾಗುವುದಿಲ್ಲ. ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರೊಂದಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದರು.
ಓದಿ: ಕನ್ನಡ ಭಾಷಾ ಸೊಗಡಿಗೆ 'ಕೊಳಕು' ಬಣ್ಣ ಹಚ್ಚಿದ google ಸರ್ಚ್ ಎಂಜಿನ್: ಕನ್ನಡಿಗರ ಕಿಚ್ಚಿಗೆ ಬೆದರಿದ ಗೂಗಲ್!