ETV Bharat / state

ಅಂತಾರಾಜ್ಯ ಜಲ ವಿವಾದ; ಕಾನೂನು ಹೋರಾಟ ಮುಂದುವರೆಯಲಿದೆ... ಬೊಮ್ಮಾಯಿ ಸ್ಪಷ್ಟನೆ - ಬೆಂಗಳೂರು ಲೇಟೆಸ್ಟ್ ನ್ಯೂಸ್

ಅಂತಾರಾಜ್ಯ ಜಲ ವಿವಾದಗಳಲ್ಲಿ ರಾಜ್ಯ ಸರ್ಕಾರ ಕಾನೂನು ಹೋರಾಟ ಮುಂದುವರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೊಮ್ಮಾಯಿ
ಬೊಮ್ಮಾಯಿ
author img

By

Published : Aug 25, 2021, 10:38 PM IST

Updated : Aug 25, 2021, 10:52 PM IST

ಬೆಂಗಳೂರು: ಕೃಷ್ಣಾ, ಕಾವೇರಿ ಸೇರಿದಂತೆ ಅಂತಾರಾಜ್ಯ ಜಲ ವಿವಾದಗಳಲ್ಲಿ ರಾಜ್ಯ ಸರ್ಕಾರದ ನಿಲುವು ಕಾನೂನಾತ್ಮಕ ಮತ್ತು ನ್ಯಾಯ ಸಮ್ಮತವಾಗಿದ್ದು, ನಮ್ಮ ಕಾನೂನು ಹೋರಾಟ ಮುಂದುವರೆಯಲಿದೆ. ಬರುವ ದಿನಗಳಲ್ಲಿ ಈ ಜಟಿಲ ಸಮಸ್ಯೆಗಳು ಪರಿಹಾರಗೊಳ್ಳುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾನೂನು ಹೋರಾಟ ಮುಂದುವರೆಯಲಿದೆ... ಬೊಮ್ಮಾಯಿ ಸ್ಪಷ್ಟನೆ

ತೆಲಂಗಾಣದ ನಿರ್ಧಾರದಿಂದ ರಾಜ್ಯಕ್ಕೆ ಅನುಕೂಲ

ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆ ವಿವಾದ ಸುಪ್ರೀಂ ಕೋರ್ಟ್​ನಲ್ಲಿದೆ. ತೆಲಂಗಾಣ ತನ್ನ ಐಎ ಅನ್ನು ವಾಪಸ್ ಪಡೆದಿರುವುದರಿಂದ ರಾಜ್ಯಕ್ಕೆ ಅನುಕೂಲವಾಗಲಿದೆ ಎಂದರು.

ಬ್ರಿಜೇಶ್ ಕುಮಾರ್ ಮಿಶ್ರಾ ನ್ಯಾಯಾಧಿಕರಣ ನೀಡಿದ ತೀರ್ಪಿನ ನೋಟಿಫಿಕೇಶನ್ ಹೊರಡಿಸಬೇಕು ಎಂದು ರಾಜ್ಯ ಮತ್ತು ಮಹಾರಾಷ್ಟ್ರ ಬೇಡಿಕೆ ಇರಿಸಿ ಬಹಳ ವರ್ಷ ಕಳೆದಿವೆ. ಇದನ್ನು ಸುಪ್ರೀಂಕೋರ್ಟ್​​ಗೆ ಮನವರಿಕೆ ಮಾಡಿಕೊಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮಾಹಿತಿ ನೀಡಿದರು.

ಎತ್ತಿನಹೊಳೆ ಯೋಜನೆ ಬಗ್ಗೆ ಎರಡು ಗಂಟೆಗಳ ಸುದೀರ್ಘ ಚರ್ಚೆ

ಎತ್ತಿನಹೊಳೆ ಯೋಜನೆ ಬಗ್ಗೆ ಹಲವಾರು ಆಯಾಮಗಳಲ್ಲಿ ಚರ್ಚೆ ನಡೆಸಲಾಯಿತು. ಯೋಜನೆ ಸಂಬಂಧ ಸಂಪೂರ್ಣವಾದ ಮಾಹಿತಿಯನ್ನು ಪಡೆಯುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ. ಮೇಕೆದಾಟು ಯೋಜನೆ ಕುರಿತು ಎರಡು ಗಂಟೆಗಳ ಕಾಲ ಚರ್ಚೆ ನಡೆಸಲಾಗಿದೆ. ತಮಿಳುನಾಡಿನ ಯೋಜನೆಗೆ ಅನುಮತಿ ಕೊಟ್ಟು ನಮ್ಮ ರಾಜ್ಯದ ಮೇಕೆದಾಟು ಯೋಜನೆಗೆ ಅನುಮತಿ ನೀಡದೇ ಇದ್ದಲ್ಲಿ ಅನ್ಯಾಯವಾಗಲಿದೆ ಎಂದು ಹೇಳಿದ್ದೇನೆ.

ಅದನ್ನು ಬರವಣಿಗೆಯಲ್ಲಿ ಕೊಡಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳು ಅಂತಾರಾಜ್ಯ ಜಲ ಸಮಸ್ಯೆಯಲ್ಲಿ ಸಿಕ್ಕಿಹಾಕಿಕೊಂಡಿರುವುದರಿಂದ ಸಮಸ್ಯೆಗಳನ್ನು ಬಗೆಹರಿಸಲು ಚರ್ಚಿಸಿದ್ದೇವೆ ಎಂದು ವಿವರಿಸಿದರು.

ನಾಳೆ ಕಾನೂನು ತಜ್ಞರ ಜತೆ ಸಭೆ

ಕಾವೇರಿ ಮತ್ತು ಎತ್ತಿನಹೊಳೆ ಯೋಜನೆ ಕುರಿತು ಚರ್ಚೆಗೆ ಮತ್ತೆ ಬರುತ್ತೇನೆ. ಕಾನೂನು ತಜ್ಞರ ಜೊತೆ ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಯ ನೋಟಿಫಿಕೇಶನ್ ಕುರಿತು, ಮಹಾದಾಯಿ ಮತ್ತು ಮೇಕೆದಾಟು ವಿಚಾರದಲ್ಲಿ ಸುಪ್ರೀಂಕೋರ್ಟ್​​ನಲ್ಲಿ ನಾವೇನು ಮಾಡಬೇಕು ಎನ್ನುವ ಕುರಿತು ನಾಳೆ ನಮ್ಮ ಕಾನೂನು ತಜ್ಞರ ಜೊತೆ ಚರ್ಚಿಸುತ್ತೇವೆ. ನಾವು ನಮ್ಮ ಕಾನೂನು ರೀತಿಯ ಹೋರಾಟ ಮಾಡೇ ಮಾಡುತ್ತೇವೆ ಎಂದು ಇದೇ ವೇಳೆ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಜಲಜೀವನ್ ಮಿಷನ್ ಅಡಿ ಹಣಕಾಸಿನ ನೆರವು

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವ ಬಗ್ಗೆ ಕೆಲವು ನಿಯಮ ಬದಲಾವಣೆ ಮಾಡಿದ್ದೇವೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರಲಿದ್ದು, ಅಜೆಂಡಾದಲ್ಲಿ ರಾಷ್ಟ್ರೀಯ ಯೋಜನೆ ವಿಷಯ ಇರಲಿದೆ. ಯೋಜನೆಗೆ ಸಂಬಂಧಪಟ್ಟ ಎಲ್ಲ ಕ್ಲಿಯರೆನ್ಸ್ ಸಿಕ್ಕಿದೆ . ಜಲಜೀವನ್ ಮಿಷನ್ ಯೋಜನೆಯಲ್ಲಿ ಹಣ ನೀಡುವಂತೆ ಕೇಳಿದ್ದೇನೆ. ಎಲ್ಲದಕ್ಕೂ ಪ್ರಸ್ತಾವನೆ ಕಳಿಸುವಂತೆ ಕೇಂದ್ರ ಸಚಿವರು ತಿಳಿಸಿದ್ದಾರೆ. ನಮ್ಮ ಪ್ರಸ್ತಾವನೆ ಆಧಾರದಲ್ಲಿ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಲಿದೆ ಎನ್ನುವ ವಿಶ್ವಾಸವೂ ಇದೆ ಎಂದರು.

ರೈತರ ಆದಾಯ ದ್ವಿಗುಣಗೊಳಿಸುವ ಚರ್ಚೆ

ಕರ್ನಾಟಕದಲ್ಲಿ ಕೃಷಿ ಪದ್ಧತಿ ಮತ್ತು ಕೃಷಿ ಅಭಿವೃದ್ಧಿಯನ್ನು ಯಾವ ರೀತಿ ಮಾಡಬೇಕು ಎನ್ನುವ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತು ಕೇಂದ್ರ ಕೃಷಿ ಸಚಿವರ ಜೊತೆ ಚರ್ಚೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯ ಎರಡು ಸೇರಿ ಹೇಗೆ ರೈತರ ಆದಾಯ ದ್ವಿಗುಣಗೊಳಿಸಬಹುದು ಎನ್ನುವ ಕುರಿತು ಚರ್ಚೆ ನಡೆಸಿದ್ದೇವೆ. ಕೇಂದ್ರ ಸರ್ಕಾರದ ಹೊಸ ಕೃಷಿ ಯೋಜನೆಯನ್ನು ಕರ್ನಾಟಕದಲ್ಲಿ ಅಳವಡಿಸುವ ಕುರಿತು ಮಾತುಕತೆ ನಡೆಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.

ಇದನ್ನೂ ಓದಿ: ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು : ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹ

ಸೆಪ್ಟೆಂಬರ್ 5ಕ್ಕೆ ಕೃಷಿ ಸಚಿವರು ಬೆಂಗಳೂರಿಗೆ

ಸೆಪ್ಟೆಂಬರ್ 5ರಂದು ಬೆಂಗಳೂರಿಗೆ ಕೇಂದ್ರ ಕೃಷಿ ಸಚಿವರು ಬರಲಿದ್ದಾರೆ ನಮ್ಮ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವ ಹೊಸ ಯೋಜನೆಯನ್ನು ಅವರು ಉದ್ಘಾಟನೆ ಮಾಡಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ಕೃಷಿ ಇಲಾಖೆ ಕೈಗೊಂಡಿರುವ ಹಲವಾರು ಕ್ರಮಗಳ ಬಗ್ಗೆ ಅವರ ಜೊತೆ ಚರ್ಚಿಸಲಾಗುತ್ತದೆ ಎಂದಿದ್ದಾರೆ.

Last Updated : Aug 25, 2021, 10:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.