ETV Bharat / state

Legislative council election.. ರಾಜ್ಯ ಕೈ ನಾಯಕರನ್ನು ಭೇಟಿಯಾಗುತ್ತಿದ್ದಾರೆ ಪರಿಷತ್ ಟಿಕೆಟ್ ಆಕಾಂಕ್ಷಿಗಳು

ವಿಧಾನ ಪರಿಷತ್ ಚುನಾವಣೆ(Legislative council election) ಹಿನ್ನೆಲೆ ಟಿಕೆಟ್​ ಆಕಾಂಕ್ಷಿಗಳು ಕಾಂಗ್ರೆಸ್​​ನ ಹಲವು ನಾಯಕರನ್ನು(congress leaders)ಭೇಟಿ ಮಾಡಿ ಸಮಾಲೋಚನೆ ನಡೆಸುತ್ತಿದ್ದಾರೆ.

parishad ticket aspirants meets congress leaders
ಪರಿಷತ್ ಟಿಕೆಟ್ ಆಕಾಂಕ್ಷಿಗಳು
author img

By

Published : Nov 18, 2021, 5:09 PM IST

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ (Legislative council election) ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್​​ನ ಹಲವು ಆಕಾಂಕ್ಷಿಗಳು ರಾಜ್ಯ ನಾಯಕರನ್ನು ಭೇಟಿಯಾಗಿ ಗಮನ ಸೆಳೆಯುವ ಯತ್ನ ಆರಂಭಿಸಿದ್ದಾರೆ.

ಡಿ.10ರಂದು ವಿಧಾನ ಪರಿಷತ್​​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್​​ನ 13 ಸದಸ್ಯರು ತಮ್ಮ ಅಧಿಕಾರಾವಧಿ ಪೂರ್ಣಗೊಳಿಸುತ್ತಿದ್ದಾರೆ. ಈ ಸ್ಥಾನಕ್ಕೆ ಮತ್ತೆ ಸ್ಪರ್ಧಿಸಲು ಕೆಲವರು ಹಿಂದೇಟು ಹಾಕಿದರೆ, ಮತ್ತೆ ಕೆಲವರು ವಯಸ್ಸಿನ ಕಾರಣ ನೀಡಿ ನಿರಾಸಕ್ತಿ ತೋರಿಸುತ್ತಿದ್ದಾರೆ. ಇದರಿಂದ ಈಗಾಗಲೇ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಹಾಗೂ ಬೇರೆಯವರಿಗಾಗಿ ಪಕ್ಷದ ಅಭ್ಯರ್ಥಿಯಾಗದೇ ಕಣದಿಂದ ಹಿಂದೆ ಸರಿದಿರುವ ಹಲವು ಅಭ್ಯರ್ಥಿಗಳು ತಮಗೆ ಅವಕಾಶ ನೀಡುವಂತೆ ಕೋರುತ್ತಿದ್ದಾರೆ.

ತಹಶೀಲ್ದಾರ್ ಪರ ಲಾಬಿ

ಇತ್ತೀಚೆಗೆ ಹಾನಗಲ್ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿರುವ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಶ್ರೀನಿವಾಸ್ ಮಾನೆ ಅವರಿಂದ ತೆರವಾಗುವ ಕ್ಷೇತ್ರಕ್ಕೆ ಮಾಜಿ ಸಚಿವ ಮನೋಹರ್ ತಹಶೀಲ್ದಾರ್​ಗೆ ಟಿಕೆಟ್ ನೀಡುವಂತೆ ಪಕ್ಷದ ನಾಯಕರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಮನೋಹರ್ ಕಳೆದ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತೀವ್ರ ಆಸಕ್ತಿ ತೋರಿಸಿದ್ದರು. ಆದರೆ ಅವರಿಗೆ ಸ್ಪರ್ಧೆಗೆ ಅವಕಾಶ ನಿರಾಕರಿಸಲಾಗಿತ್ತು. ಆ ಸಂದರ್ಭ ಮುಂಬರುವ ದಿನಗಳಲ್ಲಿ ಬೇರೆ ಅವಕಾಶ ನೀಡುವ ಭರವಸೆ ನೀಡಲಾಗಿತ್ತು. ಇದರಂತೆ ಈಗ ವಿಧಾನ ಪರಿಷತ್​ ಸ್ಪರ್ಧೆಗೆ ಅವಕಾಶ ನೀಡುವಂತೆ ಮನೋಹರ್ ತಹಶೀಲ್ದಾರ್ ಕೇಳಿಕೊಳ್ಳುತ್ತಿದ್ದಾರೆ. ಇಂದು ಇವರ ಪರ ಪಕ್ಷದ ನಾಯಕರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಸಮಾಲೋಚಿಸಿದ್ದಾರೆ.

ಮಾಜಿ ಸಚಿವರಾದ ಎ ಎಂ ಹಿಂಡಸಗೇರಿ, ಕೆ ಬಿ ಕೋಳಿವಾಡ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಗುರುವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಇದೇ ಸಂದರ್ಭ ಅವರು ಕಳೆದ ವಿಧಾನಸಭೆ ಉಪಚುನಾವಣೆ ವೇಳೆ ಹಾನಗಲ್​​ನಲ್ಲಿ ಶ್ರೀನಿವಾಸ್ ಮಾನೆ ಗೆಲುವಿಗೆ ಮನೋಹರ್ ತಹಶೀಲ್ದಾರ್ ಸಾಕಷ್ಟು ಶ್ರಮಿಸಿದ್ದಾರೆ. ಅವರಿಗೆ ಪರಿಷತ್ ಸ್ಪರ್ಧೆಗೆ ಅವಕಾಶ ಮಾಡಿಕೊಡುವಂತೆ ಕೋರಿದ್ದಾರೆ. ಡಿಕೆಶಿ ಸಹ ಇದಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂಬ ಮಾಹಿತಿ ಇದೆ.

ಮಾಜಿ ಸಚಿವ ಡಿ ಸುಧಾಕರ್ ಸಮಾಲೋಚನೆ:

ಮಾಜಿ ಸಚಿವ ಡಿ. ಸುಧಾಕರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(KPCC president D K Shivkumar)ಅವರನ್ನು ಬೆಂಗಳೂರಿನಲ್ಲಿ ಗುರುವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಚಿತ್ರದುರ್ಗದ ಚಳ್ಳಕೆರೆ ಹಾಗೂ ಹಿರಿಯೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಚಳ್ಳಕೆರೆಯಿಂದ 2004, ಚಿತ್ರದುರ್ಗದಿಂದ 2008, 2013ರಲ್ಲಿ ಸತತ ಗೆಲುವು ಸಾಧಿಸಿದ್ದರು. 2013ರಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ಗೆದ್ದಿದ್ದ ಅವರು 2018ರಲ್ಲಿ ಬಿಜೆಪಿಯ ಕೆ. ಪೂರ್ಣಿಮಾ ವಿರುದ್ಧ ಸೋತಿದ್ದರು. ಇದೀಗ ಚಿತ್ರದುರ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಘು ಆಚಾರ್ ಸ್ಥಾನ ತೆರವಾಗುತ್ತಿದೆ. ತಮಗೆ ಅವಕಾಶ ನೀಡುವಂತೆ ಕೋರಿದ್ದಾರೆ ಎಂಬ ಮಾಹಿತಿ ಇದೆ. ಆದರೆ ರಘು ಆಚಾರ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಿಂದೇಟು ಹಾಕಿದರೆ ಆಗ ತಮಗೆ ಅವಕಾಶ ನೀಡುವ ಭರವಸೆಯನ್ನು ಡಿಕೆಶಿ ನೀಡಿದ್ದಾರೆ. ರಘು ಆಚಾರ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಒಟ್ಟಾರೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಕೆಳಮನೆ ಸೇರಲಾಗದ ಹಲವು ನಾಯಕರು ಮೇಲ್ಮನೆ ಮೂಲಕ ತಮ್ಮ ರಾಜಕೀಯ ಭವಿಷ್ಯವನ್ನು ಉಳಿಸಿಕೊಳ್ಳುವ ಯತ್ನ ನಡೆಸಿದ್ದಾರೆ. ಇದಕ್ಕೆ ಪಕ್ಷ ಯಾವ ವಿಧದಲ್ಲಿ ಪೂರಕ ಅವಕಾಶ ಒದಗಿಸಿಕೊಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.