ETV Bharat / state

ಶೀಘ್ರದಲ್ಲೇ ಬೆಂಗಳೂರಿನಲ್ಲಿ ಚಿರತೆ ಪಡೆ ಕಾರ್ಯಾರಂಭ: ಸಚಿವ ಈಶ್ವರ ಖಂಡ್ರೆ - Leopard Force

Minister Eshwar Khandre on leopard task force: ಬೆಂಗಳೂರು ಹೊರವಲಯದಲ್ಲಿ ಚಿರತೆ ಕಾರ್ಯ ಪಡೆಯು ಮುಂದಿನ 2 ದಿನಗಳ ಒಳಗಾಗಿ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.

Minister Eshwar Khandre
ಸಚಿವ ಈಶ್ವರ ಖಂಡ್ರೆ
author img

By ETV Bharat Karnataka Team

Published : Nov 24, 2023, 7:04 AM IST

ಬೆಂಗಳೂರು: ನಗರದ ಹೊರವಲಯದಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಮುಂದಿನ ಎರಡು ದಿನಗಳ ಒಳಗಾಗಿ ಕಾರ್ಯಾರಂಭಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ಹೇಳಿದರು.

ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಮೂಡಿಗೆರೆಯಲ್ಲಿ ಕಾಡಾನೆ ನಿಗ್ರಹ ದಳದ ಕಾರ್ತಿಕ್ ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಆನೆ ದಾಳಿ ಸಾವಿನ ಕುರಿತು ವರದಿಗೆ ಸೂಚನೆ: ಕಳೆದ 2 ವರ್ಷಗಳಲ್ಲಿ ರಾಜ್ಯದಲ್ಲಿ ಸಂಭವಿಸಿರುವ ಆನೆ ದಾಳಿ ಸಾವಿನ ಎಲ್ಲ ಪ್ರಕರಣಗಳ ಕುರಿತಂತೆ ಪರಾಮರ್ಶಿಸಿ, ಯಾವ ಭಾಗದಲ್ಲಿ ಹೆಚ್ಚು ಸಾವು ಸಂಭವಿಸುತ್ತಿದೆ?, ಇದಕ್ಕೆ ಕಾರಣವೇನು? ಎಂಬ ಬಗ್ಗೆ ತಿಳಿದು ಪರಿಹಾರೋಪಾಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಬಳಿಕ, ಆನೆಗಳು ಯಾವ ಯಾವ ಋತುವಿನಲ್ಲಿ ಯಾವ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತವೆ ಎಂಬ ಬಗ್ಗೆಯೂ ಅಧ್ಯಯನ ನಡೆಸಿ, ಸ್ಥಳೀಯರಿಗೆ ಮುಂಚಿತವಾಗಿಯೇ ಜಾಗೃತಿ ಮೂಡಿಸಲು ಮತ್ತು ಮಾಹಿತಿ ನೀಡಲು ನಿರ್ದೇಶನ ನೀಡಿದರು.

ಅರಣ್ಯದಂಚಿನ ಶಾಲಾ ಕಾಲೇಜುಗಳಿಗೆ ಅರಣ್ಯಾಧಿಕಾರಿಗಳು ಮತ್ತು ವನ್ಯಜೀವಿ ತಜ್ಞರು ತೆರಳಿ ವಿದ್ಯಾರ್ಥಿಗಳಿಗೆ ಆನೆಗಳು ಮತ್ತು ಕಾಡು ಪ್ರಾಣಿಗಳ ಸ್ವಭಾವದ ಬಗ್ಗೆ ಹಾಗೂ ಕಾಡು ಪ್ರಾಣಿಗಳು ನಾಡಿಗೆ ಬಂದಾಗ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಬಗ್ಗೆಯೂ ತಿಳಿ ಹೇಳಲು ತಿಳಿಸಿದರು.

ರೈಲ್ವೆ ಬ್ಯಾರಿಕೇಡ್, ಆನೆ ನಿಗ್ರಹ ಕಂದಕ ಮತ್ತು ಸೌರ ಬೇಲಿಗಳನ್ನು ಅಳವಡಿಸುವ ಕುರಿತಂತೆಯೂ ಹೆಚ್ಚಿನ ಮುತುವರ್ಜಿ ವಹಿಸಬೇಕು. ವಿಳಂಬ ಮಾಡಿದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಎಲ್ಲ ಉನ್ನತ ಅಧಿಕಾರಿಗಳು ವಾರದಲ್ಲಿ ಕನಿಷ್ಠ ಎರಡು ದಿನ ಕಾಡಾನೆ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಅವಲೋಕಿಸಬೇಕು ಮತ್ತು ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಲಾಗಿದ್ದು, ಹಿರಿಯ ಐ.ಎಫ್.ಎಸ್ ಅಧಿಕಾರಿಗಳನ್ನು ವಿವಿಧ ಜಿಲ್ಲೆಗೆ ನೋಡಲ್ ಅಧಿಕಾರಿಗಳಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಈ ಅಧಿಕಾರಿಗಳು ನಿಯೋಜಿತ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಾನವ ವನ್ಯಜೀವಿ ಸಂಘರ್ಷ ಕುರಿತಂತೆ ಪರಿಶೀಲನಾ ಸಭೆ ನಡೆಸಿ, ಜಿಲೆಯಲ್ಲಿ ಬಾಕಿ ಇರುವ ವಿವಿಧ ಪರಿಹಾರ ಧನ ಪಾವತಿಸುವ ಪ್ರಕರಣಗಳ ಕುರಿತೂ ಚರ್ಚಿಸಿ ಇತ್ಯರ್ಥಪಡಿಸಬೇಕು ಎಂದರು.

ಇದನ್ನೂ ಓದಿ: ಮೈಸೂರು : ತೋಟದ ತಂತಿ ಬೇಲಿಗೆ ಸಿಲುಕಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ

ಆನೆಗಳು ನಾಡಿಗೆ ಬರುತ್ತಿರುವುದಕ್ಕೆ ಕಾಡಿನಲ್ಲಿ ನೀರು ಮತ್ತು ಆಹಾರದ ಕೊರತೆಯೇ ಕಾರಣ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಆನೆಗಳಿಗೆ ಕಾಡಂಚಿನ ನಡುತೋಪುಗಳಲ್ಲಿ, ಪರಿಭಾವಿತ ಅರಣ್ಯದಲ್ಲಿ ಸೊಪ್ಪು, ಹಣ್ಣು, ಎಲೆ, ತೊಗಟೆ, ಬಿದುರು ಇತ್ಯಾದಿ ಸಿಗುವಂತೆ ಕ್ರಮ ವಹಿಸಲು ಹಾಗೂ ಅರಣ್ಯದೊಳಗೆ ಬೇಸಿಗೆಯಲ್ಲೂ ನೀರು ಲಭ್ಯವಾಗುವಂತೆ ನೋಡಿಕೊಳ್ಳಲು ನಿರ್ದೇಶಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.