ಬೆಂಗಳೂರು : ಯಲಹಂಕ ರೈಲ್ವೆ ಗಾಲಿ ಕಾರ್ಖಾನೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಒಂದು ಕ್ಷಣ ಬೆಚ್ಚಿ ಬಿದ್ದಿದ್ದಾರೆ. ಯಲಹಂಕ ರೈಲ್ವೆ ಕಾರ್ಖಾನೆಯೊಳಗೆ ಚಿರತೆ ಕಾಣಿಸಿಕೊಂಡಿದ್ದು, ಮಾಹಿತಿ ಅರಿತ ಯಲಹಂಕ ವಲಯ ಅರಣಾಧ್ಯಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಐವರು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಾರ್ಖಾನೆಯ ಒಳಗೆ ಯಾವುದೇ ಸಿಬ್ಬಂದಿಗೆ ಪ್ರವೇಶ ನೀಡದೆ ನಿರ್ಬಂಧ ವಿಧಿಸಲಾಗಿದೆ. ಚಿರತೆ ಓಡಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾದ ಆಧಾರದ ಮೇಲೆ ಆರ್‌ಪಿಎಫ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಓದಿ: ಹಿಜಾಬ್ ಸಂಘರ್ಷದ ನಡುವೆ ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ