ETV Bharat / state

ಬಿಜೆಪಿ ನಾಯಕರು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿಎಂ ಸಿದ್ದರಾಮಯ್ಯ

author img

By ETV Bharat Karnataka Team

Published : Dec 13, 2023, 7:03 PM IST

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಆರೋಪಗಳಿಗೆ ಬಿಜೆಪಿ ನಾಯಕರು ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

Etv Bharatlet-bjp-leaders-answer-the-allegations-made-by-yatnal-says-cm-siddaramaiah
ಬಿಜೆಪಿ ನಾಯಕರು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: "ನಮ್ಮ ಸರ್ಕಾರದ ವಿರುದ್ಧ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ ಸದನದ ಒಳಗೆ ಮತ್ತು ಹೊರಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರಾದ ಅವರ ಮಗ ಬಿ.ವೈ.ವಿಜಯೇಂದ್ರ, ಇನ್ನೊಬ್ಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ .ಅಶೋಕ್ ಅವರ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಬಿಜೆಪಿ ನಾಯಕರು ಈ ಪ್ರತಿಭಟನಾ ಸಭೆಯಲ್ಲಿ ಉತ್ತರಿಸಲಿ" ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ಬಿ.ಎಸ್. ಯಡಿಯೂರಪ್ಪನವರು ಹೈಕಮಾಂಡ್​ಗೆ ಎರಡು ಸಾವಿರ ಕೋಟಿ ರೂಪಾಯಿ ಕಾಣಿಕೆ ನೀಡಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹಿಂದೆ ಆರೋಪಿಸಿದ್ದ ಬಸವನಗೌಡ ಪಾಟೀಲ್ ಯತ್ನಾಳ್, ನಿನ್ನೆ ಹೊಸ ಬಾಂಬು ಸಿಡಿಸಿದ್ದಾರೆ. ಕೇಂದ್ರದ ಬಿಜೆಪಿ ನಾಯಕರನ್ನು ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡಿ ತಮ್ಮ ಮಗನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಏನಿದು ಬ್ಲಾಕ್ ಮೇಲ್?. ಈ ಬಗ್ಗೆ ಯಡಿಯೂರಪ್ಪ ಇಂದಿನ ಸಾರ್ವಜನಿಕ ಸಭೆಯಲ್ಲಿ ವಿವರ ನೀಡಲಿ" ಎಂದು ಒತ್ತಾಯಿಸಿದ್ದಾರೆ.

ಹಣ ಸಂದಾಯ ಮಾಡುವುದು ಶಿಕ್ಷಾರ್ಹ ಅಪರಾಧ: "ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಿಜೆಪಿ ನಾಯಕ ವಿ.ಸೋಮಣ್ಣ ಅವರನ್ನು ಮೈಸೂರಿನ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮಾಡಿ ಸೋಲಿಸಿದ್ದಾರೆ ಎಂದು ಇಲ್ಲಿಯ ವರೆಗೆ ಆರೋಪಿಸುತ್ತಾ ಬಂದಿರುವ ಯತ್ನಾಳ್ ಅವರು, ಈಗ ಬಸವರಾಜ ಬೊಮ್ಮಾಯಿ ಅವರನ್ನೂ ಸೋಲಿಸಲು ಬಿ ವೈ ವಿಜಯೇಂದ್ರ ಹಣ ಕೊಟ್ಟು ಕಳಿಸಿದ್ದರು ಎಂದು ಗುರುತರವಾದ ಇನ್ನೊಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಆತ್ಮವಿಶ್ವಾಸದಿಂದ ಮಾತನಾಡಿರುವ ಯತ್ನಾಳ್, ಬೊಮ್ಮಾಯಿ ಅವರನ್ನು ದೇವರ ಮೇಲೆ ಆಣೆಗೆ ಕರೆದಿದ್ದನ್ನು ನೋಡಿದರೆ ಆರೋಪದಲ್ಲಿ ಸತ್ಯಾಂಶ ಇದ್ದ ಹಾಗಿದೆ. ಚುನಾವಣೆಯ ಕಾಲದಲ್ಲಿ ಈ ರೀತಿಯ ಹಣ ಸಂದಾಯ ಮಾಡುವುದು ಕಾನೂನಿನ ದೃಷ್ಟಿಯಿಂದಲೂ ಶಿಕ್ಷಾರ್ಹ ಅಪರಾಧವಾಗಿದೆ" ಎಂದು ಹೇಳಿದ್ದಾರೆ.

"ಉತ್ತರ ಕರ್ನಾಟಕಕ್ಕೆ ನಮ್ಮ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ದೂರುತ್ತಿರುವ ಬಿಜೆಪಿ ನಾಯಕರು, ನಿನ್ನೆ ಸದನದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಪಕ್ಷ ಮತ್ತು ಸರ್ಕಾರದ ವಿರುದ್ಧವೇ ಮಾಡಿರುವ ಆರೋಪಗಳನ್ನು ಕೇಳಿದ್ದರೆಂದು ನಂಬಿದ್ದೇನೆ. ರಾಜ್ಯ ಬಿಜೆಪಿಯಲ್ಲಿ ಉತ್ತರ ಕರ್ನಾಟಕದ ನಾಯಕರನ್ನು ನಿರಂತರವಾಗಿ ತುಳಿಯಲಾಗುತ್ತಿದೆ. ಬಿಜೆಪಿಯಲ್ಲಿನ ದಕ್ಷಿಣದ ಕೆಲವು ನಾಯಕರು ತಮ್ಮಲ್ಲಿರುವ ಹಣದ ಬಲದಿಂದ ಅಧಿಕಾರದ ಸ್ಥಾನಗಳನ್ನು ಪಡೆಯುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಆರ್ .ಅಶೋಕ್ ಅವರ ಬಗ್ಗೆಯೂ ಅನುಮಾನ ಹುಟ್ಟಿಸುವಂತೆ ಮಾಡಿದ್ದಾರೆ" ಎಂದಿದ್ದಾರೆ.

ಯತ್ನಾಳ್ ಆರೋಪಕ್ಕೆ ಉತ್ತರಿಸಬೇಕಾಗಿರುವುದು ಬಿಜೆಪಿ ನಾಯಕರ ಕರ್ತವ್ಯ: "ಬಸವನಗೌಡ ಪಾಟೀಲ್ ಯತ್ನಾಳ್ ಅವರು ನಿರಂತರವಾಗಿ ತಮ್ಮ ಪಕ್ಷದವರ ವಿರುದ್ಧವೇ ಮಾಡಿಕೊಂಡು ಬಂದಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿದೆ. ಇದಕ್ಕೆ ಉತ್ತರ ನೀಡಬೇಕಾಗಿರುವುದು ರಾಜ್ಯ ಬಿಜೆಪಿ ನಾಯಕರ ಕರ್ತವ್ಯವಾಗಿದೆ. ಇದನ್ನು ತಿಳಿದುಕೊಳ್ಳುವ ಹಕ್ಕು ರಾಜ್ಯದ ಜನತೆಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ರಾಜ್ಯದ ಬಿಜೆಪಿ ನಾಯಕರಿಗೆ ಇಲ್ಲ" ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಮಾರ್ದನಿಸಿದ ಪ್ರತಾಪ್​ ಸಿಂಹ ಪಾಸ್​ ವಿಷಯ: ಬಿಜೆಪಿ - ಕಾಂಗ್ರೆಸ್ ಮಧ್ಯೆ ವಾಕ್ಸಮರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.