ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, 40 ಪರ್ಸೆಂಟ್ ಸರ್ಕಾರ ಎಂದು ಸ್ವತಃ ಗುತ್ತಿಗೆದಾರ ಸಂಘ ಆರೋಪ ಮಾಡಿದೆ. ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಎಲ್ಓಪಿ 5 ರಿಂದ 10 ಪರ್ಸಂಟ್ ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಗುತ್ತಿಗೆದಾರರು ತಮ್ಮ ನೋವು ಹೇಳಿಕೊಂಡಿದ್ದಾರೆ. ಸಾವಿರಾರು ಕೋಟಿ ಹಗರಣ ನಡೆದಿದೆ. ಇದರ ನ್ಯಾಯಾಂಗ ತನಿಖೆ ಆಗಬೇಕು. ಹೈಕೋರ್ಟ್ ನ್ಯಾಯಮೂರ್ತಿಗಳ ನಿಗಾದಲ್ಲಿ ಎಸ್ಐಟಿ ರಚನೆ ಮಾಡಿ ತನಿಖೆ ನಡೆಸಲಿ ಎಂದಿದ್ದಾರೆ.
ಬಿಜೆಪಿ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಗುತ್ತಿಗೆದಾರರ ಸಂಘ ಪ್ರಧಾನಿ ಕಚೇರಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ. 40%, 50% ವರೆಗೂ ಭ್ರಷ್ಟಾಚಾರ ಮಿತಿಮೀರಿ ಹೋಗಿದೆ. ಹಾಡಹಗಲೇ ಭ್ರಷ್ಟಾಚಾರ ನಡೆಯುತ್ತಿರುವುದು ಸಾಬೀತಾಗಿದೆ. ನಮ್ಮ ಪಕ್ಷದಿಂದ ಒತ್ತಾಯ ಮಾಡ್ತಾಯಿದ್ದೇವೆ. ಸಾವಿರಾರು ಕೋಟಿ ಹಗರಣವನ್ನ ಬಯಲಿಗೆಳೆಯಬೇಕು. ಇದಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಬೇಕು. ಹೈಕೋರ್ಟ್, ಸುಪ್ರೀಂ ಕೋರ್ಟ್ ನಿಗಾದಲ್ಲಿ ತನಿಖೆಯಾಗಬೇಕು. ಯಾರೇ ಶಾಮೀಲಾಗಿದ್ದರೂ, ಕಾನೂನು ರೀತಿ ಕ್ರಮಕೈಗೊಳ್ಳಬೇಕು ಎಂದರು.