ETV Bharat / state

ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಆಪ್ ಆಗ್ರಹ

ಬಿಎಸ್​ವೈ ಡಿನೋಟಿಫಿಕೇಶನ್ ಕರ್ಮಕಾಂಡ ಬಗೆದಷ್ಟು ಹೊರ ಬರುತ್ತಿದೆ. ಹಾಗಾಗಿ ಯಡಿಯೂರಪ್ಪಗೆ ನೈತಿಕತೆ ಇದ್ದರೆ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ನಿಷ್ಪಕ್ಷಪಾತ ತನಿಖೆ ಎದುರಿಸಲಿ ಎಂದು ಆಪ್ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

AAP
AAP
author img

By

Published : Jan 6, 2021, 5:11 PM IST

ಬೆಂಗಳೂರು: ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ ಸೇರಿದಂತೆ ದೇವರಬೀಸನಹಳ್ಳಿ ಹಾಗೂ ಬೆಳ್ಳಂದೂರು ಸುತ್ತಮುತ್ತಲ ಗ್ರಾಮಗಳಲ್ಲಿ 4.34 ಎಕರೆ ಭೂಮಿಯನ್ನು ಸಿಎಂ ಯಡಿಯೂರಪ್ಪ ಡಿನೋಟಿಫೈ ಮಾಡಿದ್ದಾರೆ. ಅವರ ಡಿನೋಟಿಫಿಕೇಶನ್ ಕರ್ಮಕಾಂಡ ಬಗೆದಷ್ಟು ಹೊರ ಬರುತ್ತಿದೆ. ಹಾಗಾಗಿ ಯಡಿಯೂರಪ್ಪಗೆ ನೈತಿಕತೆ ಇದ್ದರೆ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ನಿಷ್ಪಕ್ಷಪಾತ ತನಿಖೆ ಎದುರಿಸಲಿ ಎಂದು ಆಪ್ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಸಿಎಂ ಬಿಎಸ್​ವೈ ರಾಜೀನಾಮೆ ನೀಡಲಿ: ಆಪ್ ಆಗ್ರಹ

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆನ್ನಿಗಾನಹಳ್ಳಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ತಾಂತ್ರಿಕ ಕಾರಣಗಳನ್ನು ನೀಡಿ ವಜಾಗೊಳಿಸಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಯಡಿಯೂರಪ್ಪ ಅವರಿಗೆ ಅನುಕೂಲ ಮಾಡಿಕೊಡಲು ಕಾನೂನು ವಿಭಾಗ ಮೇಲ್ಮನವಿ ಸಲ್ಲಿಸದೆ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ. ಯಡಿಯೂರಪ್ಪನವರ ಅನೇಕ ಹಗರಣಗಳು ಹೊರ ಬರದಂತೆ ಹೀಗೆಯೇ ತಡೆದಿರುವ ಅನುಮಾಗಳಿವೆ ಎಂದರು.
ಡಿಸೆಂಬರ್ 22 ಮತ್ತು ಜನವರಿ 5ರಂದು, ಕೇವಲ 15 ದಿನಗಳ ಅಂತರದಲ್ಲಿ ಹೈಕೋರ್ಟ್​ನಿಂದ ಛೀಮಾರಿ ಹಾಕಿಸಿಕೊಂಡಿರುವ ಮುಖ್ಯಮಂತ್ರಿಯೊಬ್ಬರು ಈ ರೀತಿ ಗುರುತರ ಆರೋಪ ಎದುರಿಸುತ್ತಿದ್ದಾರೆ. ಆದ ಕಾರಣ ಈ ಪ್ರಕರಣದ ತನಿಖೆಯನ್ನು ವಿಶೇಷ ಪೊಲೀಸ್ ಹಾಗೂ ನ್ಯಾಯಾಂಗ ತಂಡ ರಚಿಸಿ ಅದರ ನಿಗಾವಣೆಯಲ್ಲಿಡಬೇಕು. ಅಧಿಕಾರ ಕೇಂದ್ರದ ಉನ್ನತ ಸ್ಥಾನದಲ್ಲಿರುವ ಯಡಿಯೂರಪ್ಪ ಅವರು ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲು ಅಸಾಧ್ಯ ಎಂದರು.

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಮಾತನಾಡಿ, ಮಠದಹಳ್ಳಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹತ್ತಿರದ ಸಂಬಂಧಿಗಳ ಹೆಸರಿನಲ್ಲಿ ಡಿನೋಟಿಫಿಕೇಶನ್ ಆಗಿರುವುದು ಬೆಳಕಿಗೆ ಬಂದಿದೆ. ಇದೆಲ್ಲವನ್ನು ಗಮನಿಸಿದರೆ ಮೂರು ಪಕ್ಷಗಳು ಭೂ ಹಗರಣದಲ್ಲಿ ತೊಡಗಿವೆ. ಹಾಗಾಗಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸದೆ ಮೂರು ಪಕ್ಷಗಳು ಜನರಿಗೆ ಮೋಸ ಮಾಡುತ್ತಿವೆ ಎಂದು ದೂರಿದರು.

ಮುಖ್ಯಮಂತ್ರಿಗಳಾಗಿದ್ದ ವೇಳೆ ಜೈಲು ಸೇರಿದ್ದ ಭಾರತದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪನವರು ಕರ್ನಾಟಕದ ಹೆಸರಿಗೆ ಮಸಿ ಬಳಿದಿದ್ದರು. ಕರ್ನಾಟಕದ ಹೆಸರನ್ನು ಮತ್ತೊಮ್ಮೆ ಕುಲಗೆಡಿಸದೆ, ಕನ್ನಡಿಗರಿಗೆ ಅವಮಾನ ಮಾಡಿ ಜೈಲಿಗೆ ಹೋಗುವ ಮೊದಲೇ ಒಳ್ಳೆಯ ನಿರ್ಧಾರ ಮಾಡಿ ಎಂದು ಸಲಹೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.