ETV Bharat / state

ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಂಕಲ್ಪ ಮಾಡೋಣ: ತೇಜಸ್ವಿನಿ ಅನಂತಕುಮಾರ್‌

author img

By

Published : Sep 17, 2020, 2:17 PM IST

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಂಕಲ್ಪ ಮಾಡೋಣ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಕರೆ ನೀಡಿದರು.

Tejaswini Ananthakumar
ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಂಕಲ್ಪ ಮಾಡೋಣ: ತೇಜಸ್ವಿನಿ ಅನಂತಕುಮಾರ್‌

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಕಷ್ಟದ ಸಂದರ್ಭದಲ್ಲೂ ಜನರ ಜೊತೆ ಇದ್ದು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಂಕಲ್ಪ ಕೈಗೊಳ್ಳೋಣ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಕರೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಸಪ್ತಾಹದ ಅಂಗವಾಗಿ ಜಯನಗರದಲ್ಲಿ ಆಯೋಜಿಸಲಾಗಿದ್ದ ಕೃತಕ ಕೈ ಹಾಗೂ ಕಾಲು ಜೋಡಣಾ ಉಪಕರಣಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶ ಕಂಡಿರುವ ಅಪ್ರತಿಮ ನಾಯಕ ಹಾಗೂ ಸೇವಾ ಧುರೀಣರು ನಮ್ಮ ಪ್ರಧಾನಿ ನರೇಂದ್ರ ಮೋದಿ. ಅನಂತಕುಮಾರ್‌ ಅವರ ಜೊತೆ ಅವರಿಗಿದ್ದ ಒಡನಾಟ ಬಹಳ ಆತ್ಮೀಯವಾದದ್ದು. ನಮ್ಮ ಸೇವಾ ಕಾರ್ಯಚಟುವಟಿಕೆಗಳಿಗೆ ನರೇಂದ್ರ ಮೋದಿ ಅವರ ಬೆಂಬಲ ಇದೆ ಎಂದು ನೆನಪಿಸಿಕೊಂಡರು.

ಕೊರೊನಾ ಸಂಕಷ್ಟದ ಕಾಲದಲ್ಲಿ, ಅಕ್ಕ ಪಕ್ಕದ ರಾಷ್ಟ್ರಗಳ ಸಮಸ್ಯೆಗಳ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕೋಟ್ಯಂತರ ಜನರ ಹಸಿವನ್ನು ನೀಗಿಸುವ ಕೆಲಸ ಮಾಡಿದ್ದಾರೆ. ಅವರ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ನಾವು ನಮ್ಮ ಅಕ್ಕ ಪಕ್ಕದ ಕೆಲವು ಜನರಿಗಾದರೂ ಸಹಾಯ ಮಾಡುವ ಸಂಕಲ್ಪವನ್ನು ಮಾಡುವ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಕರೆ ನೀಡಿದರು.

ಈ ದಿನ ಸುಮಾರು 70 ಜನರಿಗೆ ಕೃತಕ ಕೈ ಮತ್ತು ಕಾಲುಗಳನ್ನು ನೀಡಲಾಗುತ್ತಿದೆ ಹಾಗೂ 70 ಗಿಡಗಳನ್ನು ನಡೆಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.