ETV Bharat / state

ಕಾಂಗ್ರೆಸ್​ನವರು ಲಿಂಗಾಯತರಿಗೆ ಯಾವ ಹುದ್ದೆ ಕೊಡ್ತಾರೆ ನೋಡೋಣ: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ - ಈಟಿವಿ ಭಾರತ್ ಕನ್ನಡ ಸುದ್ದಿ

ಜನರು ಕಾಂಗ್ರೆಸ್​ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್​ ಪಕ್ಷ ಜನರ ಮತ್ತು ರಾಜ್ಯದ ಅಭಿವೃದ್ಧಿ ಮಾಡಲಿ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ
ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ
author img

By

Published : May 17, 2023, 3:49 PM IST

Updated : May 17, 2023, 4:01 PM IST

ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್​ನವರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆ ನೋಡೊಣ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಆರ್ ಟಿ ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರ ಮತ್ತು ರಾಜ್ಯದ ಅಭಿವೃದ್ಧಿ ಮಾಡಲಿ. ಅವರಿಗೆ ಇಲ್ಲಿಯವರೆಗೂ ಮುಖ್ಯಮಂತ್ರಿ ಆಯ್ಕೆ ಮಾಡಲು ಆಗುತ್ತಿಲ್ಲ. ಬೇಗ ಮುಖ್ಯಮಂತ್ರಿ ಆಯ್ಕೆ ಮಾಡಲಿ ಎಂದರು.

ಪೂರ್ಣ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಮಾಡದೇ ಇರುವುದು ಪಕ್ಷದಲ್ಲಿನ ಹೊಂದಾಣಿಕೆ ಸರಿ ಇಲ್ಲ ಎನ್ನುವುದನ್ನು ತೋರಿಸುತ್ತದೆ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ.‌ ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ತಮ್ಮ ರಾಜಕೀಯ ಬಿಟ್ಟು ಆದಷ್ಟು ಬೇಗ ಮುಖ್ಯಮಂತ್ರಿ ಆಯ್ಕೆ ಮಾಡಿ, ಸರ್ಕಾರ ರಚಿಸಿ ಜನರ ಸೇವೆ ಮಾಡಲಿ ಎಂದರು.

ಲಿಂಗಾಯತರಿಗೆ ಯಾವ ಹುದ್ದೆ ನೀಡುತ್ತಾರೆ ನೋಡೋಣ: ಲಿಂಗಾಯತ ಸಮುದಾಯದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಬಹಳ ಮಾತನಾಡಿದ್ದಾರೆ. ಅವರು ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಯಾವ ಯಾವ ಹುದ್ದೆಗಳನ್ನು ಕೊಡುತ್ತಾರೆ ಕಾದು ನೋಡೋಣ ಎಂದು ಹೇಳಿದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಪ್ರಮಾಣ ವಚನ ಸ್ವೀಕಾರ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಗುರುವಾರ (ಮೇ 18) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಬುಧವಾರ ತಿಳಿಸಿವೆ. ಗುರುವಾರ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯುತ್ತದೆ ಎಂದು ಎಐಸಿಸಿಯ ಹಿರಿಯ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಕ್ಷದ ವರಿಷ್ಠ ಮಲ್ಲಿಕಾರ್ಜುನ ಖರ್ಗೆ ನಿರ್ಧಾರ : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ನಡುವೆ ನೂತನ ಮುಖ್ಯಮಂತ್ರಿ ಜತೆಗೆ ಉಪಮುಖ್ಯಮಂತ್ರಿ ಕೂಡ ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಪಕ್ಷದ ವರಿಷ್ಠ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವ ನಿರ್ಧಾರ ಕೈಗೊಂಡಿದ್ದಾರೆ ಎಂಬುದು ತಿಳಿದು ಬಂದಿದೆ.

ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಸಮಾಲೋಚನೆಗಾಗಿ ದೆಹಲಿಯಲ್ಲಿದ್ದು, ಶೀಘ್ರದಲ್ಲೇ ಬೆಂಗಳೂರಿಗೆ ಮರಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಡಿಕೆಶಿ ನೂತನ ಉಪಮುಖ್ಯಮಂತ್ರಿಯಾಗಬಹುದು, ಮತ್ತೊಬ್ಬರು ಉಪಮುಖ್ಯಮಂತ್ರಿಯಾಗಬಹುದು ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಬೆಂಬಲಿಗರಿಂದ ಸಂಭ್ರಮಾಚರಣೆ: ಇನ್ನೊಂದೆಡೆ ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಆಯ್ಕೆ ಆಗುವುದು ಬಹುತೇಕ ಖಚಿತವಾದ ಬೆನ್ನಲ್ಲೇ ಅವರ ಬೆಂಬಲಿಗರು, ಅಭಿಮಾನಿಗಳು ಬೆಂಗಳೂರಿನಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಸೇರಿದ ​ಕಾರ್ಯಕರ್ತರು ಬಡವರ ಬಂಧು ಸಿದ್ದರಾಮಯ್ಯ, ಅನ್ನರಾಮಯ್ಯಗೆ ಜೈ ಎಂದು ಘೋಷಣೆ ಕೂಗುವ ಮೂಲಕ ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಹುತೇಕ ಖಚಿತ.. ಅಭಿಮಾನಿಗಳು, ಬೆಂಬಲಿಗರಿಂದ ಸಂಭ್ರಮಾಚರಣೆ

Last Updated : May 17, 2023, 4:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.