ETV Bharat / state

ಸ್ಯಾನಿಟರಿ ನ್ಯಾಪ್​​​ಕಿನ್ ಬರ್ನ್ ಯಂತ್ರ ಕಡ್ಡಾಯಗೊಳಿಸುವಂತೆ ಸಿಎಂಗೆ ಪತ್ರ - ಸಾಮಾಜಿಕ ಕಾರ್ಯಕರ್ತ ಎಸ್. ಅಮರೇಶ್

ಮಹಿಳೆಯರು ಬಳಸುವ ಸ್ಯಾನಿಟರಿ ಪ್ಯಾಡ್​ಗಳನ್ನು ಕಸದೊಂದಿಗೆ ಎಸೆಯುವುದರಿಂದ ಸಾಕಷ್ಟು ಪರಿಸರ, ಸಾರ್ವಜನಿಕರ ಆರೋಗ್ಯಕ್ಕೆ ಹಾನಿಯಾಗುತ್ತಿದೆ. ಇದರಿಂದಾಗಿ ಸ್ಯಾನಿಟರಿ ನ್ಯಾಪ್​​​ಕಿನ್ ಬರ್ನ್ ಯಂತ್ರವನ್ನು ಕಡ್ಡಾಯಗೊಳಿಸುವಂತೆ ಸಿಎಂಗೆ ಸಾಮಾಜಿಕ ಕಾರ್ಯಕರ್ತ ಎಸ್. ಅಮರೇಶ್ ಪತ್ರ ಬರೆದಿದ್ದಾರೆ.

ಎಸ್. ಅಮರೇಶ್
ಎಸ್. ಅಮರೇಶ್
author img

By

Published : Jan 24, 2020, 2:02 PM IST

ಬೆಂಗಳೂರು: ಮಹಿಳೆಯರು ಬಳಸುವ ಸ್ಯಾನಿಟರಿ ಪ್ಯಾಡ್​ಗಳನ್ನು ಕಸದೊಂದಿಗೆ ಎಸೆಯುವುದರಿಂದ ಸಾಕಷ್ಟು ಪರಿಸರ, ಸಾರ್ವಜನಿಕರ ಆರೋಗ್ಯಕ್ಕೆ ಹಾನಿಯಾಗುತ್ತಿದೆ. ಇದರಿಂದಾಗಿ ಸ್ಯಾನಿಟರಿ ನ್ಯಾಪ್​​​ಕಿನ್ ಬರ್ನ್ ಯಂತ್ರವನ್ನು ಕಡ್ಡಾಯಗೊಳಿಸುವಂತೆ ಸಿಎಂಗೆ ಸಾಮಾಜಿಕ ಕಾರ್ಯಕರ್ತ ಎಸ್. ಅಮರೇಶ್ ಪತ್ರ ಬರೆದಿದ್ದಾರೆ.

ಸ್ಯಾನಿಟರಿ ನ್ಯಾಪ್​​​ಕಿನ್ ಬರ್ನ್ ಯಂತ್ರ ಕಡ್ಡಾಯಗೊಳಿಸುವಂತೆ ಎಸ್. ಅಮರೇಶ್ ಮನವಿ

ಸಾರ್ವಜನಿಕ ಕಟ್ಟಡಗಳಲ್ಲಿ ಶೌಚಾಲಯಕ್ಕೆ ಸ್ಯಾನಿಟರಿ ನ್ಯಾಪ್​​​ಕಿನ್ ಎಸೆಯುವುದರಿಂದ ತ್ಯಾಜ್ಯದ ನೀರಿನ ಒಳಚರಂಡಿಗಳು ಕಟ್ಟಿಕೊಳ್ಳುತ್ತವೆ. ಇದರಿಂದಾಗಿ ಪರಿಸರ, ಸಾರ್ವಜನಿಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಮಹಿಳಾ ಕಾಲೇಜು , ಐಟಿ ಬಿಟಿ ಕಂಪನಿ, ಗಾರ್ಮೆಂಟ್ಸ್, ಪಿಜಿ ಹಾಗೂ ಕಾರ್ಖಾನೆಗಳಲ್ಲಿ ಸ್ಯಾನಿಟರಿ ನ್ಯಾಪ್​​​ಕಿನ್ ಬರ್ನ್ ಯಂತ್ರಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಕ್ರಮ ಜಾರಿ ಮಾಡಿ ಎಂದು ಮನವಿ ಮಾಡಲಾಗಿದೆ. ನ್ಯಾಪ್​​​ಕಿನ್ ಬರ್ನ್ ಯಂತ್ರದೊಳಗೆ ಸ್ಯಾನಿಟರಿ ಪ್ಯಾಡ್​ಗಳನ್ನು ಹಾಕಿದಾಗ ಇವು ಸುಟ್ಟು ಭಸ್ಮವಾಗುತ್ತವೆ. ಇದರಿಂದ ವಾಯು ಮಾಲಿನ್ಯವಾಗುವುದಿಲ್ಲ, ವಾಸನೆಯೂ ಬರುವುದಿಲ್ಲ. ಇದು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಇದನ್ನು ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Letter
ಸಿಎಂಗೆ ಪತ್ರ ಬರೆದ ಎಸ್. ಅಮರೇಶ್

ಈ ಬಗ್ಗೆ ಮಾತನಾಡಿದ ಅಮರೇಶ್, ಇತರೆ ಕಸದೊಂದಿಗೆ ಸ್ಯಾನಿಟರಿ ವೇಸ್ಟ್ ಕೂಡಾ ಮಿಶ್ರವಾಗುತ್ತಿದೆ‌. ಇದನ್ನು ವಿಂಗಡಿಸಲಾಗುತ್ತಿಲ್ಲ. ಹೀಗಾಗಿ ಮಹಿಳೆಯರು ಉದ್ಯೋಗ ಮಾಡುವ ಜಾಗದಲ್ಲಿ, ಶಾಲಾ ಕಾಲೇಜುಗಳಲ್ಲಿ ಪರಿಹಾರ ಕಂಡುಕೊಳ್ಳಲು ಈ ಬರ್ನ್ ಯಂತ್ರ ಬಳಸುವಂತೆ ಮಾಡಲು ಮನವಿ ಮಾಡಲಾಗಿದೆ ಎಂದರು.

Intro:ಸ್ಯಾನಿಟರಿ ಪ್ಯಾಡ್ ಸುಡುವ ಯಂತ್ರವನ್ನು ಕಡ್ಡಾಯಗೊಳಿಸಲು ಸಿಎಂಗೆ ಮನವಿ

ಬೆಂಗಳೂರು: ಮಹಿಳೆಯರು ಬಳಸುವ ಸ್ಯಾನಿಟರಿ ಪ್ಯಾಡ್ ಗಳನ್ನು ಕಸದೊಂದಿಗೆ ಎಸೆಯುವುದರಿಂದ ಸಾಕಷ್ಟು ಪರಿಸರ ಹಾನಿಯಾಗುತ್ತಿದೆ. ಅಲ್ಲದೆ ಸಾರ್ವಜನಿಕ ಆರೋಗ್ಯಕ್ಕೆ ಹಾನಿಯಾಗುತ್ತಿದೆ. ಇನ್ನು ಸಾರ್ವಜನಿಕ ಕಟ್ಟಡಗಳಲ್ಲಿ ಶೌಚಾಲಯಕ್ಕೆ ಎಸೆಯುವುದರಿಂದ ತ್ಯಾಜ್ಯ ನೀರು ಹರಿಯುವ ಒಳಚರಂಡಿಗಳು ಕಟ್ಟಿಕೊಳ್ಳುತ್ತವೆ..

ಇದರಿಂದಾಗಿ ಸ್ಯಾನಿಟರಿ ಪ್ಯಾಡ್ ಗಳನ್ನು ಸುಡುವ ಇನ್ಸಿನರೇಟರ್ ಯಂತ್ರವನ್ನು ಕಡ್ಡಾಯಗೊಳಿಸುವಂತೆ ಸಿಎಂ ಗೆ ಮನವಿ ಮಾಡಲಾಗಿದೆ. ಮುಂದಿನ ಬಜೆಟ್ ನಲ್ಲಿ ಅಗತ್ಯ ಹಣ ತೆಗೆದಿರಿಸುವಂತೆ ಮನವಿ ಮಾಡಿ, ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ವತಿಯಿಂದ ಸಾಮಾಜಿಕ ಕಾರ್ಯಕರ್ತ ಎಸ್ ಅಮರೇಶ್ ಪತ್ರ ಬರೆದಿದ್ದಾರೆ.
ಮಹಿಳೆಯರೇ ಹೆಚ್ಚಾಗಿ ಇರುವ ಮಹಿಳಾ ಕಾಲೇಜು ಗಳು, ಐಟಿಬಿಟಿ ಕಂಪನಿ, ಗಾರ್ಮೆಂಟ್ಸ್, ಪಿಜಿ ಗಳು, ಹಾಗೂ ಕಾರ್ಖಾನೆಗಳಲ್ಲಿ ಇನ್ಸಿನರೇಟರ್ (incinerators) ಯಂತ್ರಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಕ್ರಮ ಜಾರಿ ಮಾಡಲು ಮನವಿ ಮಾಡಲಾಗಿದೆ.

ಈ ಯಂತ್ರದೊಳಗೆ ಸ್ಯಾನಿಟರಿ ಪ್ಯಾಡ್ ಗಳನ್ನು ಹಾಕಿದಾಗ, ಇವು ಸುಟ್ಟು ಭಸ್ಮವಾಗುತ್ತವೆ. ಇದರಿಂದ ವಾಯುಮಾಲಿನ್ಯವಾಗುವುದಿಲ್ಲ. ವಾಸನೆಯೂ ಬರುವುದಿಲ್ಲ. ಅತ್ಯಾಧುನಿಕ ಇನ್ಸಿನರೇಟರ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಇವುಗಳನ್ನು ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅಮರೇಶ್, ಇತರೆ ಕಸದೊಂದಿಗೆ ಸ್ಯಾನಿಟರಿ ವೇಸ್ಟ್ ಕೂಡಾ ಮಿಶ್ರವಾಗುತ್ತಿದೆ‌. ಇದನ್ನು ವಿಂಗಡಿಸಲಾಗುತ್ತಿಲ್ಲ. ಹೀಗಾಗಿ ಮಹಿಳೆಯರು ಉದ್ಯೋಗ ಮಾಡುವ ಜಾಗದಲ್ಲಿ, ಶಾಲಾ ಕಾಲೇಜುಗಳಲ್ಲಿ ಪರಿಹಾರ ಕಂಡುಕೊಳ್ಳಲು ಈ ಇನ್ಸಿನೇಟರ್ ಬಳಸುವಂತೆ ಮಾಡಲು ಮನವಿ ಮಾಡಲಾಗಿದೆ ಎಂದರು.

ಸೌಮ್ಯಶ್ರೀ
Kn_bng_02_sanitary_waste_7202707
Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.