ETV Bharat / state

ಹೆಚ್ಚುವರಿ ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ: ತುಷಾರ್ ಗಿರಿನಾಥ್ - ಬಿಬಿಎಂಪಿ

ಬೆಂಗಳೂರು ನಗರದಲ್ಲಿ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಸರ್ವೆ ಮಾಡಲು ಹೆಚ್ಚುವರಿ ಭೂಮಾಪಕರ ಅವಶ್ಯಕತೆಯಿದ್ದು, ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ ಬರೆಯುವಂತೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.

tushar girinath
ತುಷಾರ್ ಗಿರಿನಾಥ್
author img

By ETV Bharat Karnataka Team

Published : Dec 16, 2023, 7:47 AM IST

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತರು

ಬೆಂಗಳೂರು : ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೆ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ ಬರೆಯಲು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪಾಲಿಕೆ ಅಧಿಕಾರಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ಶುಕ್ರವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಸರ್ವೆ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆಯಿದ್ದು, ಕಂದಾಯ ಇಲಾಖೆಯ ಅಡಿ ಬರುವ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಗೆ ಪತ್ರ ಬರೆದು ಹೆಚ್ಚು ಭೂಮಾಪಕರನ್ನು ನಿಯೋಜನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ನಗರದಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಸರ್ವೆ ನಡೆಸಿ ಮಾರ್ಕ್ ಮಾಡಿ, ತಹಶೀಲ್ದಾರ್ ಅವರಿಂದ ಆದೇಶಗಳನ್ನು ಜಾರಿ ಮಾಡಿರುವಂತಹ ಒತ್ತುವರಿಗಳನ್ನು ಕೂಡಲೇ ತೆರವುಗೊಳಿಸಬೇಕು. ಉಚ್ಛನ್ಯಾಯಾಲಯದಲ್ಲಿ ತಡೆಯಾಜ್ಞೆಯಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿಕೊಂಡು ತೆರವು ಕಾರ್ಯಾಚರಣೆ ನಡೆಸಲು ಹೇಳಿದರು.

ನಿಗದಿತ ಸಮಯದಲ್ಲಿ ಕೆರೆ ಹಾಗೂ ರಾಜಕಾಲುವೆ ಒತ್ತುವರಿಗಳನ್ನು ಗುರುತಿಸಲು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ. ಒತ್ತುವರಿಗಳನ್ನು ಗುರುತಿಸಿದ ನಂತರ ತಹಶೀಲ್ದಾರ್​ಗಳು ಒತ್ತುವರಿದಾರರಿಗೆ ಆದೇಶಗಳನ್ನು ನೀಡಿದ ಬಳಿಕ ಪಾಲಿಕೆ ಹಾಗೂ ಕಂದಾಯ ಇಲಾಖೆಯು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಿದೆ ಎಂದರು.

ನಗರದಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆ ಪ್ರಕ್ರಿಯೆ ಸಕ್ರಿಯವಾಗಿ ನಡೆಯುತ್ತಿದ್ದು, ಕಳೆದ 15 ದಿನಗಳಲ್ಲಿ ಮಹದೇವಪುರ ವ್ಯಾಪ್ತಿಯಲ್ಲಿ ಬರುವ ಎಬಿಕೆ, ಗುಂಜೂರು, ಕರಿಯಮ್ಮನ ಅಗ್ರಹಾರ, ಬೆಳ್ಳತ್ತೂರಿನಲ್ಲಿ ಹಾಗೂ ಕೆ.ಆರ್ ಪುರದ ಸರ್ವೆ ಸಂಖ್ಯೆ 69ರಲ್ಲಿ ಇರುವ 3 ಅಂತಸ್ತಿನ ಕಟ್ಟಡದಲ್ಲಿ ಬರುವ 10 ಮಳಿಗೆಗಳು ಸೇರಿದಂತೆ 62 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಇನ್ನು ಯಲಹಂಕ ವಲಯ ವ್ಯಾಪ್ತಿಯಲ್ಲಿ 8 ಒತ್ತುವರಿಗಳು ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ 5 ಒತ್ತುವರಿಗಳು ಸೇರಿದಂತೆ ಒತ್ತು 25 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು, 159 ಕೆರೆಗಳಲ್ಲಿ ಒತ್ತುವರಿಯಾಗಿದೆ ಎಂಬುದನ್ನು ಗುರುತಿಸಲಾಗಿದೆ. ಅದರಂತೆ 140 ಕೆರೆಗಳಲ್ಲಿ ಒತ್ತುವರಿಯಾಗಿರುವ ಬಗ್ಗೆ ತಹಶೀಲ್ದಾರರಿಗೆ ಪತ್ರಗಳನ್ನು ಬರೆಯಲಾಗಿದೆ. ಈ ಪೈಕಿ 40 ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, 100 ಕೆರೆಗಳಲ್ಲಿ ಸರ್ವೆ ಕಾರ್ಯ ನಡೆಸಬೇಕಿದೆ. ಉಳಿದ ಕೆರೆಗಳ ಸರ್ವೆ ಕಾರ್ಯ ತ್ವರಿತವಾಗಿ ನಡೆಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ : ಪಾಲಿಕೆ ವ್ಯಾಪ್ತಿಯ ಮರ ತೆರವುಗೊಳಿಸುವಲ್ಲಿ ಮಾರ್ಗಸೂಚಿ ಪಾಲನೆ; ಹೈಕೋರ್ಟ್​ಗೆ ಬಿಬಿಎಂಪಿ ಮಾಹಿತಿ

ನಗರದಲ್ಲಿ ಹೊಸ ಒತ್ತುವರಿಗಳು ಸೇರಿದಂತೆ 3,176 ಒತ್ತುವರಿಗಳನ್ನು ಗುರುತಿಸಲಾಗಿದ್ದು, 2,322 ಒತ್ತುವರಿಗಳನ್ನು ಇದುವರೆಗೆ ತೆರವುಗೊಳಿಸಲಾಗಿದೆ. ಇನ್ನು 854 ಒತ್ತುವರಿಗಳನ್ನು ತೆರವುಗೊಳಿಸಬೇಕಾಗಿದ್ದು, ಈ ಪೈಕಿ 155 ಒತ್ತುವರಿ ಪ್ರಕರಣಗಳು ನ್ಯಾಯಾಲಯದಲ್ಲಿದೆ. 487 ಒತ್ತುವರಿಗಳಿಗೆ ಆದೇಶಗಳನ್ನು ಜಾರಿಗೊಳಿಸುವ ಹಂತದಲ್ಲಿದೆ. 162 ಒತ್ತುವರಿಗಳಿಗೆ ತಹಶೀಲ್ದಾರ್​​ ರಿಂದ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕಿದೆ ಎಂದು ರಾಜಕಾಲುವೆ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ. ಕೆ ಹರೀಶ್ ಕುಮಾರ್, ಬಿಎಂಟಿಎಫ್ ಸೂಪರಿಂಡೆಂಟ್ ಆಫ್ ಪೊಲೀಸ್ ಡಾ. ವಿ ಜೆ ಶೋಭಾ ರಾಣಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.