ETV Bharat / state

ಸಾಹಿತಿಗಳಿಗೆ ಜೀವ ಬೆದರಿಕೆ ಹಿನ್ನೆಲೆ: ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ

Life threat to senior writers: ಸಾಹಿತಿಗಳಿಗೆ ಜೀವ ಬೆದರಿಕೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಭರವಸೆ ನೀಡಿದ್ದಾರೆ

Life threat to senior writers
ಸಾಹಿತಿಗಳಿಗೆ ಜೀವ ಬೆದರಿಕೆ ಹಿನ್ನೆಲೆ: ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ
author img

By ETV Bharat Karnataka Team

Published : Aug 24, 2023, 9:03 AM IST

ಬೆಂಗಳೂರು: ರಾಜ್ಯದ ಹಲವಾರು ಲೇಖಕರು, ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ತಮ್ಮನ್ನು ಭೇಟಿ ಮಾಡಿದ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಈ ಭರವಸೆ ಕೊಟ್ಟಿದ್ದಾರೆ. ಹಿರಿಯ ಸಾಹಿತಿ ಡಾ.ಕೆ. ಮರುಳಸಿದ್ದಪ್ಪ ಅವರು ಮಾತನಾಡಿ, ಹಲವಾರು ಸಾಹಿತಿಗಳಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು ಆತಂಕ, ಮುಜುಗರದಿಂದ ಬದುಕುವ ಪರಿಸ್ಥಿತಿ ಉಂಟಾಗಿದೆ ಎಂದು ಹಲವು ಪ್ರಕರಣಗಳ ಬಗ್ಗೆ ಉದಾಹರಣೆ ನೀಡಿದರು.

ಕುಂ.ವೀರಭದ್ರಪ್ಪ, ಡಾ.ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್ ಅವರಿಗೆ ಅತಿ ಹೆಚ್ಚು ಬೆದರಿಕೆಗಳು ಬಂದಿವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದ, ವಾತಾವರಣ ಸೃಷ್ಟಿಯಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ, ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಅವರಿಗೆ ಒದಗಿದ ಗತಿ ಎದುರಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಬೆದರಿಕೆ ಪತ್ರಗಳ ಬಗ್ಗೆ ಒಂದು ತಂಡ ರಚಿಸಿದ್ದು, ಇನ್ನಷ್ಟು ಪರಿಣಾಮಕಾರಿ ಆಗಿರುವ, ವೃತ್ತಿಪರವಾಗಿರುವ ಖಡಕ್ ಅಧಿಕಾರಿಗಳ ಪೊಲೀಸ್ ತಂಡವನ್ನು ರಚಿಸಬೇಕು ಎಂದು ಸಿಎಂ ತಿಳಿಸಿದರು.

ಇದೇ ವೇಳೆ ರಾಜ್ಯಕ್ಕೆ ಸೂಕ್ತವಾದ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ. ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಖಾಸಗಿ ವಲಯದಲ್ಲಿ ಹೆಚ್ವಿನ ಉದ್ಯೋಗಾವಕಾಶ ಗಳಿರುವುದರಿಂದ ಹೆಚ್ಚಿನವರು ಆಂಗ್ಲ ಮಾಧ್ಯಮಕ್ಕೆ ಮೊರೆ ಹೋಗುತ್ತಾರೆ. ಇದಕ್ಕೆ ಒಂದು ಮಧ್ಯಮ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಮರುಳಸಿದ್ದಪ್ಪ ತಿಳಿಸಿದರು.

ಸಾಹಿತಿಗಳಿಗೆ ರಕ್ಷಣೆ ಒದಗಿಸಲು ಸರ್ಕಾರ ಬದ್ಧ- ಸಚಿವ ಜಿ.ಪರಮೇಶ್ವರ್: ''ಸಾಹಿತಿಗಳಿಗೆ ಬೆದರಿಕೆ ಪತ್ರ ಬರುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ನಿಟ್ಟಿನಲ್ಲಿ ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧವಾಗಿದೆ'' ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದರು. ವಿಧಾನಸೌಧದಲ್ಲಿ ಆ.22ರಂದು ಸುದ್ದಿಗಾರರ ಜೊತೆ ಮಾತನಾಡಿದ್ದ ಅವರು, ''ಈಗಾಗಲೇ ಇಬ್ಬರಿಗೆ ರಕ್ಷಣೆ ನೀಡಲಾಗಿದೆ. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗುತ್ತದೆ. ಹಿರಿಯ ಅಧಿಕಾರಿಗಳೇ ಈ ಕುರಿತು ತನಿಖೆ ಕೈಗೊಳ್ಳುತ್ತಾರೆ ಎಂದು ಅವರು, ಸಾಹಿತಿಗಳು ಅಭಿಪ್ರಾಯ ತಿಳಿಸಿದ್ದಾರೆ.‌ ಸೈದ್ಧಾಂತಿಕ ವ್ಯತ್ಯಾಸಗಳಿಂದಾಗಿಯೇ ಗೌರಿ ಲಂಕೇಶ್ ಮತ್ತು ಎಂ.ಎಂ. ಕಲ್ಬುರ್ಗಿ ಅವರ ಹತ್ಯೆ ಪ್ರಕರಣಗಳು ನಡೆದಿವೆ ಎಂದು ಹೇಳಿದ್ದರು.

ಇದನ್ನೂ ಓದಿ: 'ಪ್ರತಿ ತಿಂಗಳು 35 ಸಾವಿರ ಲಂಚ ಕೊಡಬೇಕಾ?"..ಅಬಕಾರಿ ಇಲಾಖೆಗೆ ಪ್ರಶ್ನೆ ಮಾಡಿ ಬೆವರಿಳಿಸಿದ ಸಂಸದ ಪ್ರಜ್ವಲ್ ರೇವಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.