ಬೆಂಗಳೂರು : ಉತ್ತರಪ್ರದೇಶದಲ್ಲಿ ರೈತರ ಹತ್ಯೆ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ರಾಜ್ಯ ಕಾಂಗ್ರೆಸ್ ಪಂಜಿನ ಮೆರವಣಿಗೆ ನಡೆಸಿತು.
ಕೆಪಿಸಿಸಿ ಕಚೇರಿಯಿಂದ ಇಂಡಿಯನ್ ಎಕ್ಸ್‌ಪ್ರೆಸ್ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು. ಬಿಜೆಪಿ ವಿರುದ್ಧ ಧಿಕ್ಕಾರ ಕೂಗುತ್ತಾ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಆಕ್ರೋಶ ಹೊರ ಹಾಕಿದರು.
ಇಂಡಿಯನ್ ಎಕ್ಸ್‌ಪ್ರೆಸ್ ವೃತ್ತದಲ್ಲಿ ಪಂಜಿನ ಮೆರವಣಿಗೆಯನ್ನು ಪೊಲೀಸರು ಅಡ್ಡಗಟ್ಟಿದರು. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ನೂಕಾಟ, ತಳ್ಳಾಟ ನಡೆಯಿತು.
ಇಂಡಿಯನ್ ಎಕ್ಸ್‌ಪ್ರೆಸ್ ವೃತ್ತದಿಂದ ರಾಜಭವನಕ್ಕೆ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ರಾಮಲಿಂಗರೆಡ್ಡಿ, ರಿಜ್ವಾನ್ ಅರ್ಷದ್ ಸೇರಿ ಕೆಲವರನ್ನು ಒಳಗೊಂಡ ನಿಯೋಗ ಬಸ್ನಲ್ಲಿ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ಪಂಜಿನ ಮೆರವಣಿಗೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಧೃವನಾರಾಯಣ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ರಿಜ್ವಾನ್ ಅರ್ಷದ್, ಪ್ರಸಾದ್ ಅಬ್ಬಯ್ಯ, ಎಂಎಲ್ಸಿ ಬಿ. ಕೆ ಹರಿಪ್ರಸಾದ್, ನಾರಾಯಣಸ್ವಾಮಿ, ಯು. ಬಿ ವೆಂಕಟೇಶ್ ಸೇರಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಓದಿ: ಮೌಢ್ಯಕ್ಕೆ ಸೆಡ್ಡು.. ಅ.7ರಂದು ಚಾಮರಾಜನಗರಕ್ಕೆ ಸಿಎಂ.. ಸಮಾಜವಾದಿ ಮೂಲದ ಬೊಮ್ಮಾಯಿಗೆ ಸಿದ್ದು ಮಾದರಿ..