ಮಹಾದೇವಪುರ(ಬೆಂಗಳೂರು): ಕ್ಷೇತ್ರದ ಬೆಳ್ಳಂದೂರು ವಾರ್ಡ್ನ ವಿವಿಧ ಭಾಗಗಳಲ್ಲಿ 15 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಲಿಂಬಾವಳಿ ಗುದ್ದಲಿ ಪೂಜೆ ನೆರವೇರಿಸಿದರು.
ಗುದ್ದಲಿ ಪೂಜೆ ಬಳಿಕ ಮಾತನಾಡಿದ ಅವರು, ಮಳೆಗಾಲದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಧಿಕಾರಿಗಳು ಸಮಸ್ಯೆಗಳ ಪರಿಹಾರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.
ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡು ತ್ವರಿತಗತಿಯಲ್ಲಿ ಪೂರ್ಣ ಗೊಳಿಸಿವಂತೆ ಗುತ್ತಿಗೆದಾರರಿಗೆ ಇದೇ ವೇಳೆ ಅವರು ಸೂಚಿಸಿದರು.
ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕಾಮಗಾರಿಗಳ ಕಾರ್ಯ ಮಾಡಲಾಗುತ್ತಿದ್ದು, ಅವಶ್ಯಕತೆ ಇದ್ದರೆ ಮತ್ತಷ್ಟು ಅನುದಾನ ಒದಗಿಸುವುದಾಗ ತಿಳಿಸಿದರು.
ಕುಡಿಯುವ ನೀರಿನ ಪೂರೈಕೆ ಸಂಬಂಧ ಕಾವೇರಿ ಪೈಪ್ ಲೈನ್ ಅಳವಡಿಸಿ ಶಾಶ್ವತವಾಗಿ ನೀರು ಕಲ್ಪಿಸಲಾಗುವುದು ಎಂದು ಹೇಳಿದರು.