ETV Bharat / state

ಲಿಂಗಾಯತ ಪಂಚಮಸಾಲಿ ಮೀಸಲಾತಿ ಕುರಿತು ಶೀಘ್ರ ನಿರ್ಧಾರ: ಸಿಎಂ ಭರವಸೆ

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸಂಬಂಧಿಸಿ ಉತ್ತಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಸ್ವಾಮೀಜಿಗಳನ್ನು ಭೇಟಿ ಮಾಡಿದ ಸಿಎಂ ಸ್ವಾಮೀಜಿಗಳನ್ನು ಭೇಟಿ ಮಾಡಿದ ಸಿಎಂ
ಸ್ವಾಮೀಜಿಗಳನ್ನು ಭೇಟಿ ಮಾಡಿದ ಸಿಎಂ
author img

By

Published : Nov 26, 2020, 10:23 PM IST

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರದ 2 ಎ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಹಕ್ಕೊತ್ತಾಯಕ್ಕೆ ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ನಿಯೋಗಕ್ಕೆ ಸಕಾರಾತ್ಮಕ ಭರವಸೆ ನೀಡಿದರು.

ಸ್ವಾಮೀಜಿಗಳನ್ನು ಭೇಟಿ ಮಾಡಿದ ಸಿಎಂ
ಸ್ವಾಮೀಜಿಗಳಿಂದ ಸಿಎಂ ಭೇಟಿ

ಪಂಚಮಸಾಲಿ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಜಗದ್ಗುರು ಅಕ್ಟೊಬರ್ 28ರಂದು ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ಐತಿಹಾಸಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಮುಖ್ಯಮಂತ್ರಿಗಳು ಫೋನ್ ಮೂಲಕ ಉಪವಾಸ ಕೈಬಿಡುವಂತೆ ಸಂಪರ್ಕಿಸಿದಾಗ, ನವಂಬರ್ 28ರ ಒಳಗಾಗಿ ಸರ್ಕಾರ ಸ್ಪಂದಿಸಬೇಕು ಎಂಬ ಕಾಲಮಿತಿ ನೀಡಿದ್ದು, ಅದಕ್ಕೆ ಸಿಎಂ ಒಪ್ಪಿದ ಮೇಲೆ ಶ್ರೀಗಳು ಸತ್ಯಾಗ್ರಹ ಅಂತ್ಯಗೊಳಿಸಿದ್ದರು. ಅದರಂತೆ ಇಂದು ಭೇಟಿ ಮಾಡಿದಾಗ ಮುಖ್ಯಮಂತ್ರಿಗಳು ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಈ ಸಂದರ್ಭದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಜ್ಯ ಯುವ ಘಟಕದ ಅಧ್ಯಕ್ಷ ಸೋಮಶೇಖರ್ ಹಲ್ಯಾಳ್​ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.