ETV Bharat / state

Liquor price: ಮದ್ಯದ ದರ ಹೆಚ್ಚಳ ಮಾಡಿಲ್ಲ, ಅಂತಹ ಪ್ರಸ್ತಾಪ ನಮ್ಮ ಇಲಾಖೆ ಮುಂದಿಲ್ಲ- ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ್

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಲ್ಲಿ ಶೇಕಡಾ 20ರಷ್ಟು ಮದ್ಯದ ಬೆಲೆ ಏರಿಕೆಯಾಗಿದೆ. ಈ ಬಗ್ಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಸ್ಪಷ್ಟನೆ ಇಲ್ಲಿದೆ.

Excise Minister RB Timmapur
ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ್
author img

By

Published : Jun 16, 2023, 3:41 PM IST

Updated : Jun 16, 2023, 7:45 PM IST

ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ್

ಬೆಂಗಳೂರು: ಸರ್ಕಾರ ಮದ್ಯದ ದರ ಹೆಚ್ಚಳ ಮಾಡಿಲ್ಲ. ಯಾವುದೇ ಅಧಿಕೃತ ಆದೇಶವೂ ಆಗಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮದ್ಯದ ದರ ಹೆಚ್ಚಳ ಮಾಡುವ ಬಗ್ಗೆ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಬಂದಿಲ್ಲ. ಮದ್ಯದ ದರ ಹೆಚ್ಚಳ ಮಾಡಿದರೆ ಮಾಹಿತಿ ನೀಡುತ್ತೇನೆ ಎಂದರು.

ಅಬಕಾರಿ ಇಲಾಖೆಯಿಂದ ಯಾವುದೇ ದರ ಏರಿಕೆ ಮಾಡಿಲ್ಲ. ನನಗೆ ಮಾಹಿತಿಯೂ ಇಲ್ಲ. ದರ ಏರಿಕೆ ಇದುವರೆಗೂ ಆಗಿಲ್ಲ. ಪರಿಶೀಲನೆ ಮಾಡಿ ಹೇಳುತ್ತೇನೆ ಎಂದು ಹೇಳಿದರು. ಕಳೆದ ಒಂದು ವಾರದಿಂದ ಬಿಯರ್ ದರ 20 ರೂ. ಜಾಸ್ತಿ ಆಗಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೇಕಾದರೆ ನಾವು ರಿಯಾಲಿಟಿ ಚೆಕ್ ಮಾಡುತ್ತೇವೆ. ದರ ಏರಿಕೆ ಮಾಡಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಈಗಾಗಲೇ ಸರ್ಕಾರ ಮುಂದಿನ ವರ್ಷಕ್ಕೆ ಆದಾಯ ಟಾರ್ಗೆಟ್​ ಮಾಡಿಕೊಂಡಿದ್ದು, ಅದನ್ನು ಗಳಿಸಲು ಸರ್ಕಾರ ಹಲವು ದಾರಿಗಳನ್ನು ಕಂಡುಕೊಳ್ಳುತ್ತಿದೆ. ಸರ್ಕಾರದ ಈ ದರ ಹೆಚ್ಚಳದ ಬಗ್ಗೆ ಮದ್ಯಪ್ರಿಯರು ಹಾಗೂ ಮದ್ಯದ ಸಂಘಗಳು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದೀಗ ಅಬಕಾರಿ ಇಲಾಖೆ ಸಚಿವ ಆರ್.ಬಿ. ತಿಮ್ಮಾಪೂರ್​ ಅವರು ತಮ್ಮ ಸರ್ಕಾರ ಮದ್ಯದ ಬೆಲೆಯನ್ನು ಹೆಚ್ಚಳ ಮಾಡಿಲ್ಲ ಎನ್ನುವ ಸ್ಪಷ್ಟನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಎಣ್ಣೆ ಪ್ರಿಯರಿಗೆ ಸರ್ಕಾರದ ಶಾಕ್​... ಶೇ. 20ರಷ್ಟು ಮದ್ಯದ ಬೆಲೆ ದಿಢೀರ್​ ಏರಿಕೆ

Last Updated : Jun 16, 2023, 7:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.