ಮರಾಠಾ ಅಭಿವೃದ್ಧಿ ನಿಗಮಕ್ಕೆ ವಿರೋಧ ಹಿನ್ನೆಲೆ ನಾಳೆ ಕರ್ನಾಟಕ ಬಂದ್ ಕರೆ ಹಿನ್ನೆಲೆ ಧಾರವಾಡ ವಾಣಿಜ್ಯೋದ್ಯಮ ಸಂಘದಿಂದ ಬೆಂಬಲ ನೀಡದಿರಲು ನಿರ್ಧರಿಸಿದೆ. ಈ ಕುರಿತು ಸಂಘದ ಕಾರ್ಯಕಾರಿಣಿ ಸದಸ್ಯ ಉದಯ ಯೆಂಡಿಗೇರಿ ಹೇಳಿಕೆ ನೀಡಿದ್ದಾರೆ.
ಡಿ.05ರ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಪ್ರತಿಕ್ರಿಯೆ ಹೇಗಿದೆ ಗೊತ್ತಾ? - december 5 Karnataka bandh
18:55 December 04
ಧಾರವಾಡ: ವಾಣಿಜ್ಯೋದ್ಯಮ ಸಂಘದಿಂದ ಬೆಂಬಲ ನೀಡದಿರಲು ನಿರ್ಧಾರ
18:50 December 04
ಕೊಪ್ಪಳ: ಬಂದ್‌ಗೆ ಸಹಕರಿಸುವಂತೆ ಕನ್ನಡಪರ ಸಂಘಟನೆಗಳ ಮನವಿ
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 05 ರಂದು ನಡೆಯುತ್ತಿರುವ ಬಂದ್‌ಗೆ ಸಹಕರಿಸುವಂತೆ ಕನ್ನಡ ಪರ ಸಂಘಟನೆಗಳು ಮನವಿ ಮಾಡುತ್ತಿವೆ. ಆಟೋದಲ್ಲಿ ಸಂಚರಿಸಿ ಮೈಕ್ ಮೂಲಕ ಅನೌನ್ಸ್ ಮಾಡಿ ಮನವಿ ಮಾಡಲಾಗುತ್ತಿದೆ. ನಾಳೆ ಬಂದ್‌ಗೆ ಕರೆ ನೀಡಲಾಗಿದ್ದು ವಾಹನಗಳ ಚಾಲಕರು, ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಆಟೋ, ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಿ ಬಂದ್‌ಗೆ ಸಹಕರಿಸುವಂತೆ ಕನ್ನಡಪರ ಸಂಘಟನೆಗಳು ಆಟೋ ಮೂಲಕ ಪ್ರಚಾರ ನಡೆಸಿವೆ.
16:13 December 04
ಹಾಸನದಲ್ಲಿ ಬಂದ್ ಹೀಗಿರಲಿದೆ
ಮರಾಠ ಪ್ರಾಧಿಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ಬಂದ್‌ಗೆ ಕರೆಕೊಟ್ಟಿರುವ ಕನ್ನಡ ಪರ ಸಂಘಟನೆಗಳು ಹಾಸನದಲ್ಲಿಯೂ ಬಂದ್ ಯಶಸ್ವಿ ಮಾಡಲು ಸಜ್ಜಾಗುತ್ತಿವೆ. ಈಗಾಗಲೇ ರಾಜ್ಯ ಕನ್ನಡಪರ ನಾಯಕರುಗಳ ಜೊತೆ ಚರ್ಚೆ ಮಾಡಿದ್ದು ನಾಳೆ ಸಂಪೂರ್ಣ ಬಂದ್ ಯಶಸ್ವಿಯಾಗುವ ಲಕ್ಷಣಗಳು ಕಾಣುತ್ತಿವೆ. ಜಿಲ್ಲೆಯಲ್ಲಿರುವ 70 ಸಂಘಗಳು ಬೆಂಬಲ ಸೂಚಿಸಿರುವುದರಿಂದ ನಾಳೆ ಜಿಲ್ಲೆ ಸಂಪೂರ್ಣ ಬಂದ್ ಆಗಲಿವೆ ಎನ್ನುವ ವಾತಾವರಣ ಕಾಣುತ್ತಿದೆ. ಇನ್ನು ಹಿಂದೂ ಸಂಘಟನೆ, ಮುಸ್ಲಿಂ ಸಂಘಟನೆ ಸೇರಿದಂತೆ ಆಟೋ, ಹೋಟೆಲ್ ಮಾಲೀಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ ಸೇರಿದಂತೆ ಹಲವು ಸಂಘಟನೆಗಳು ಸಹಕಾರ ನೀಡಿವೆ.
16:07 December 04
ಗಡಿ ಜಿಲ್ಲೆ ಕಲಬುರಗಿಯಲ್ಲಿ ಬೆಂಬಲ
ಮರಾಠಿ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ನಾಳಿನ ಕರ್ನಾಟಕ ಬಂದ್‌ಗೆ ಕಲಬುರಗಿಯಲ್ಲಿಯೂ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಹೈದರಾಬಾದ್ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ಸೇರಿದಂತೆ ಇತರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಆದರೆ, ವಾಟಾಳ್ ನಾಗರಾಜ್ ಕಲಬುರಗಿಗೆ ಬಾರದೇ ಇರೋದಕ್ಕೆ ಕನ್ನಡಪರ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೂ ಕನ್ನಡಿಗರ ಸ್ವಾಭಿಮಾನಕ್ಕಾಗಿ ಬಂದ್ ಆಚರಿಸ್ತೇವೆ ಎಂದು ಕನ್ನಡಪರ ಸಂಘಟನೆಗಳ ಮುಖಂಡ ಮಂಜುನಾಥ ನಾಲವಾರಕರ್ ತಿಳಿಸಿದ್ದಾರೆ.
15:51 December 04
ಕೋಟೆ ನಗರಿಯಲ್ಲಿ ಮಿಶ್ರ ಪ್ರತಿಕ್ರಿಯೆ
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಡಿ.05ರ ಕರ್ನಾಟಕ ಬಂದ್‌ಗೆ ಕೋಟೆ ನಗರಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿವೆ. ನಾಳೆ ಬೆಳಗ್ಗೆ 6 ಗಂಟೆಗೆ ವಾಟಾಳ್ ನಾಗರಾಜ್ ಸಂಘಟನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡಲು ಈಗಾಗಲೇ ಸಿದ್ಧತೆ ಮಾಡಿಕೊಂಡಿವೆ. ನಗರದ ಪ್ರಮುಖ ವೃತ್ತಗಳಲ್ಲಿ ಬಂದ್ ಕಾವು ಜಾಸ್ತಿಯಾಗಲಿದೆ ಎನ್ನುತ್ತಿದ್ದಾರೆ ಕರವೇ ಮುಖಂಡರು. ನಾಳೆಯ ದಿನ ಹೋಟೆಲ್ ಮಾಲೀಕರು, ಆಟೋ ರಿಕ್ಷಾ ಮಾಲೀಕರು, ವಿವಿಧ ಪ್ರಗತಿಪರ ಸಂಘಟನೆಗಳು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿವೆ.
15:12 December 04
ಬೆಂಗಳೂರಿನಲ್ಲಿ ಬಂದ್‌ಗೆ ವಿರೋಧ
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರುದ್ಧ ಕನ್ನಡ ಪರ ಸಂಘಟನೆಗಳು ಡಿ.05 ರಂದು (ಶನಿವಾರ) ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದು, ಇದಕ್ಕೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿವೆ. ಹಲವು ಕನ್ನಡ ಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರೆ, ಕೆಲವು ಸಂಘಟನೆಗಳು ಇದರಿಂದ ಅಂತರ ಕಾಯ್ದುಕೊಳ್ಳುವ ಮೂಲಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿವೆ. ಯಾವ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಬಂದ್ ನಡೆಸಲಾಗುತ್ತಿದೆ ಅನ್ನೋದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು: ನಾಳೆ ನಡೆಯುತ್ತಿರುವ ಕನ್ನಡ ಬಂದ್‌ಗೆ ವಿರೋಧ ವ್ಯಕ್ತವಾಗಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂದ್ ಮಾಡುತ್ತಿದ್ದಾರೆ. ಆದ್ರೆ ನಾಳೆ ನಡೆಯುತ್ತಿರುವ ಬಂದ್ ವಿರೋಧಿ ಹೋರಾಟ ಸಮಿತಿ ಖಂಡಿಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಬಂದ್ ವಿರೋಧಿಸಿ ಪ್ರತಿಭಟನೆ ಮಾಡಲಾಯಿತು.
ಬಂದ್ ಬೇಡವೇ ಬೇಡ. ಬಂದ್ ಮಾಡುತ್ತಿರೋದು ಸರಿ ಇಲ್ಲ ಅಂತ ಬಂದ್ ಹೋರಾಟ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಮರಾಠಿ ಅಭಿವೃದ್ಧಿ ಪ್ರಾಧಿಕಾರ ವಿರುದ್ಧ ಸಿಎಂ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲಿ, ಪ್ರತಿಭಟನೆ ಮಾಡಲಿ ಅದನ್ನ ಬಿಟ್ಟು ಕರ್ನಾಟಕ ಬಂದ್ ಮಾಡುವುದು ಸರಿ ಇಲ್ಲ. ಕೊರೊನಾದಿಂದ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಸರ್ಕಾರದ ಖಾಜಾನೆಯಲ್ಲಿ ದುಡ್ಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಬಂದ್ ಮಾಡಿದರೆ ಜನರಿಗೆ ಹೊರೆಯಾಗುತ್ತದೆ. ಬಂದ್ ಮಾಡೋದು ಬೇಡ ಅಂತ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಪಿ ಮೂರ್ತಿ ಹೇಳಿದರು.