ETV Bharat / state

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ :  ಮೊದಲ ದಿನ ಐದು ಮಂದಿ ನಾಮಪತ್ರ ಸಲ್ಲಿಕೆ - undefined

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ 63 ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೊದಲ ದಿನ ಐದು ಮಂದಿ ನಾಮಪತ್ರ ಸಲ್ಲಿಕೆ
author img

By

Published : May 10, 2019, 10:45 AM IST

ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬಿದ್ದಿದ್ದು, ಮೊದಲ‌ ದಿನ ಸುಮಾರು ಐದು ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ‌ ದಿನವೇ ಸುಮಾರು ಐದು ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ರಾಜ್ಯ ಚುನಾಚಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ತಿಳಿಸಿದ್ದಾರೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೇ 17ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದ್ದು, ಮೇ 29ರಂದು ಮತದಾನ ನಡೆಯಲಿದೆ. ಮರು ಮತದಾನ ಇದ್ದರೆ ಮೇ 31ರಂದು ನಡೆಸಲಾಗುವುದು. ಮೇ 31ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿಯ ಎರಡು ವಾರ್ಡ್, ತುಮಕೂರು ಪಾಲಿಕೆಯ ಒಂದು ವಾರ್ಡ್, ಬೆಳಗಾವಿ ಜಿಲ್ಲೆಯ ಎರಡು ಪುರಸಭೆ, ಬೆಂಗಳೂರಿನ ಹೆಬ್ಬಗೋಡಿ ನಗರಸಭೆ ಉಪಚುನಾವಣೆಗೂ ಅಧಿಸೂಚನೆ ಪ್ರಕಟವಾಗಿದೆ.

ರಾಜ್ಯದಲ್ಲಿ 2019ರ ಮಾರ್ಚ್ ತಿಂಗಳಿನಿಂದ ಜುಲೈ ತಿಂಗಳವರೆಗೆ ಅವಧಿ ಮುಕ್ತಾಯವಾಗುವ 103 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಾಗಿತ್ತು. ಆದರೆ, ಬೆಂಗಳೂರು, ಕಲಬುರಗಿ, ಧಾರವಾಡದಲ್ಲಿನ ಹೈಕೋರ್ಟ್ ಪೀಠದಲ್ಲಿ ವಾರ್ಡ್‌ವಾರು ಮೀಸಲಾತಿ ಮತ್ತು ವಾರ್ಡ್‌ಗಳ ಪುನರ್ ರಚನೆ ಸಂಬಂಧ 39 ನಗರ ಸ್ಥಳೀಯ ಸಂಸ್ಥೆಗಳ ವ್ಯಾಜ್ಯಗಳಿವೆ. ಅಲ್ಲದೆ ಕುಂದಗೋಳ ವಿಧಾನಸಭಾ ಉಪ ಚುನಾವಣೆ ಇರುವ ಕಾರಣ ಕುಂದಗೋಳ ಪಟ್ಟಣ ಪಂಚಾಯತ್ ಹೊರತು ಪಡಿಸಿ ಉಳಿದ 63 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29ರಂದು ಚುನಾವಣೆ ನಡೆಯಲಿದೆ.

63 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಎಂಟು ನಗರಸಭೆ, 33 ಪುರಸಭೆ ಮತ್ತು 22 ಪಟ್ಟಣ ಪಂಚಾಯತ್‌ಗಳಾಗಿವೆ. ಬಿಬಿಎಂಪಿ ವ್ಯಾಪ್ತಿಯ ಸಗಾಯಿಪುರ ವಾರ್ಡ್, ಕಾವೇರಿಪುರ ವಾರ್ಡ್, ತುಮಕೂರು ಮಹಾನಗರ ಪಾಲಿಕೆಯ ವಾರ್ಡ್ ನಂ.22, ಬೆಳಗಾವಿ ಜಿಲ್ಲೆಯ ಸದಲಗ ಪುರಸಭೆಯ ವಾರ್ಡ್ ನಂ.19 ಮತ್ತು ಮುಗಳಖೋಡ ಪುರಸಭೆ ವಾರ್ಡ್ ನಂ.2ರ ಸದಸ್ಯರ ನಿಧನದಿಂದ ಹಾಗೂ ಬೆಂಗಳೂರಿನ ಹೆಬ್ಬಗೋಡಿ ನಗರಸಭೆ ವಾರ್ಡ್ ನಂ.26ರ ಸದಸ್ಯರ ರಾಜೀನಾಮೆಯಿಂದಾಗಿ ಉಪಚುನಾವಣೆ ನಡೆಸಲಾಗುತ್ತಿದೆ.

Intro:Local body electionBody:KN_BNG_02_09_LOCALBODYELECTION_NOTIFICATION_SCRIPT_VENKAT_7201951

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೊದಲ ದಿನ ಐದು ಮಂದಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬಿದ್ದಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಇಂದು ಅಧಿಸೂಚನೆ ಪ್ರಕಟವಾಗಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಕೆಯ ಮೊದಲ‌ ದಿನ ಸುಮಾರು ಐದು ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ರಾಜ್ಯ ಚುನಾಚಣಾ ಆಯುಕ್ತ ಪಿ.ಎನ್. ಶ್ರೀನಿವಾಸಚಾರಿ ತಿಳಿಸಿದ್ದಾರೆ. ಮೇ ೧೬ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಮೇ ೧೭ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಮೇ ೨೦ ಕೊನೆಯಾಗಿದ್ದು, ಮೇ ೨೯ರಂದು ಮತದಾನ ನಡೆಯಲಿದೆ. ಮರು ಮತದಾನ ಇದ್ದರೆ ಮೇ ೩೦ರಂದು ನಡೆಸಲಾಗುವುದು. ಮೇ ೩೧ರಂದು ಮತ ಎಣಿಕೆ ನಡೆಯಲಿದೆ.

ಇನ್ನು ಬಿಬಿಎಂಪಿಯ ಎರಡು ವಾರ್ಡ್, ತುಮಕೂರು ಪಾಲಿಕೆಯ ಒಂದು ವಾರ್ಡ್, ಬೆಳಗಾವಿ ಜಿಲ್ಲೆಯ ಎರಡು ಪುರಸಭೆ, ಬೆಂಗಳೂರಿನ ಹೆಬ್ಬಗೋಡಿ ನಗರಸಭೆ ಉಪಚುನಾವಣೆಗೂ ಇಂದೇ ಅಧಿಸೂಚನೆ ಪ್ರಕಟವಾಗಿದೆ.

ರಾಜ್ಯದಲ್ಲಿ ೨೦೧೯ರ ಮಾರ್ಚ್ ತಿಂಗಳಿನಿಂದ ಜುಲೈ ತಿಂಗಳವರೆಗೆ ಅವಧಿ ಮುಕ್ತಾಯವಾಗುವ ೧೦೩ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಾಗಿತ್ತು. ಆದರೆ, ಬೆಂಗಳೂರು, ಕಲಬುರಗಿ, ಧಾರವಾಡದಲ್ಲಿನ ಹೈಕೋರ್ಟ್ ಪೀಠದಲ್ಲಿ ವಾರ್ಡ್‌ವಾರು ಮೀಸಲಾತಿ ಮತ್ತು ವಾರ್ಡ್‌ಗಳ ಪುನರ್ ರಚನೆ ಸಂಬಂಧ ೩೯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಜ್ಯಗಳಿವೆ ಮತ್ತು ಕುಂದಗೋಳ ವಿಧಾನಸಭಾ ಉಪ ಚುನಾವಣೆ ಇರುವ ಕಾರಣ ಕುಂದಗೋಳ ಪಟ್ಟಣ ಪಂಚಾಯಿತಿ ಹೊರತು ಪಡಿಸಿ ಉಳಿದ ೬೩ ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ ೨೯ರಂದು ಚುನಾವಣೆ ನಡೆಯಲಿದೆ. ೬೩ ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಎಂಟು ನಗರಸಭೆ, ೩೩ ಪುರಸಭೆ ಮತ್ತು ೨೨ ಪಟ್ಟಣ ಪಂಚಾಯಿತಿಗಳಾಗಿವೆ.

ಬಿಬಿಎಂಪಿ ವ್ಯಾಪ್ತಿಯ ಸಗಾಯಿಪುರ ವಾರ್ಡ್, ಕಾವೇರಿಪುರ ವಾರ್ಡ್, ತುಮಕೂರು ಮಹಾನಗರ ಪಾಲಿಕೆಯ ವಾರ್ಡ್ ನಂ ೨೨, ಬೆಳಗಾವಿ ಜಿಲ್ಲೆಯ ಸದಲಗ ಪುರಸಭೆಯ ವಾರ್ಡ್ ನಂ ೧೯ ಮತ್ತು ಮುಗಳಖೋಡ ಪುರಸಭೆ ವಾರ್ಡ್ ನಂ ೨ರ ಸದಸ್ಯರ ನಿಧನದಿಂದ ಹಾಗೂ ಬೆಂಗಳೂರಿನ ಹೆಬ್ಬಗೋಡಿ ನಗರಸಭೆ ವಾರ್ಡ್ ೨೬ ಸದಸ್ಯರ ರಾಜೀನಾಮೆಯಿಂದಾಗಿ ಉಪಚುನಾವಣೆ ನಡೆಸಲಾಗುತ್ತಿದೆ.Conclusion:Venkat

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.