ETV Bharat / state

ಬೆಂಗಳೂರು ಮತ್ತೊಮ್ಮೆ ಲಾಕ್‌ಡೌನ್?: ಆರೋಗ್ಯ ಸಚಿವ ಶ್ರೀರಾಮಲು ಸುಳಿವು

author img

By

Published : Jun 23, 2020, 4:41 PM IST

ಬೆಂಗಳೂರಿನಲ್ಲಿ ನಿತ್ಯ ಸೋಂಕಿತರ ಸಂಖ್ಯೆ ಶತಕ, ದ್ವಿಶತಕ ಬಾರಿಸುತ್ತಿದೆ. ಜೊತೆಗೆ ಸಾವಿನ‌ ಸಂಖ್ಯೆಯಲ್ಲೂ ನಗರ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಮತ್ತೆ ಬೆಂಗಳೂರಿನಲ್ಲಿ ಲಾಕ್​ಡೌನ್ ಹೇರಲಾಗುತ್ತಾ ಎನ್ನುವ ಪ್ರಶ್ನೆ ಮೂಡಿದೆ.‌ ಇದಕ್ಕೆ ಪುಷ್ಟಿ ನೀಡುವಂತೆ, ಆರೋಗ್ಯ ಸಚಿವ ಶ್ರೀರಾಮಲು ಲಾಕ್‌ಡೌನ್ ಬಗ್ಗೆ ಸುಳಿವು ನೀಡಿದ್ದಾರೆ.

ಸಚಿವ ಶ್ರೀರಾಮಲು.
ಸಚಿವ ಶ್ರೀರಾಮಲು.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಗಂಭೀರ ಮಾತುಕತೆ ನಡೆಸಿದ್ದೇವೆ. ನಗರದಲ್ಲಿ ಇನ್ನೊಮ್ಮೆ ಲಾಕ್​ಡೌನ್ ಹೇರುವ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮಲು ತಿಳಿಸಿದರು.

ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ನಾಲ್ಕು ಪ್ರದೇಶಗಳನ್ನು ಹದಿನಾಲ್ಕು ದಿನದ ಮಟ್ಟಿಗೆ ಸೀಲ್​ಡೌನ್ ಮಾಡಲಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಮತ್ತೊಮ್ಮೆ ಲಾಕ್​ಡೌನ್​ ಬಗ್ಗೆ ಚಿಂತಿಸಲಾಗುತ್ತದೆ. ಇದರ ಬಗ್ಗೆ ತಜ್ಞರು ಹಾಗೂ ಟಾಸ್ಕ್ ಫೋರ್ಸ್ ಸದಸ್ಯರ ಜೊತೆ ಸಭೆ ಮಾಡಿ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಾಗುತ್ತೆ ಎಂದರು.

ರೋಗಿಗಳ ಬಗ್ಗೆ, ಆಸ್ಪತ್ರೆಯಲ್ಲಿರುವ ವೆಂಟಿಲೇಟರ್, ಹಾಸಿಗೆಗಳ ಬಗ್ಗೆ ಮಾಹಿತಿ ಪಡೆದು, ತಕ್ಷಣ ಆಸ್ಪತ್ರೆಗೆ ಏನೇನು ಬೇಕು ಎಂಬ ಮಾಹಿತಿ ನೀಡುವಂತೆ ವೈದ್ಯರಿಗೆ ಸೂಚಿಸಿದರು. 50 ವರ್ಷಕ್ಕಿಂತ ಕೆಳಗಿನ ಸೋಂಕು ಲಕ್ಷಣರಹಿತ ರೋಗಿಗಳಿಗೆ ಕೋವಿಡ್ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತದೆ. ಹಿರಿಯ ನಾಗರಿಕರಿಗೆ ಹೆಚ್ಚಿನ ಪರೀಕ್ಷೆ ಮಾಡಲಾಗುತ್ತದೆ. ಪ್ರತಿ ಜಿಲ್ಲೆಯಲ್ಲಿ ಲ್ಯಾಬ್ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಜಾವೇದ್ ಅಕ್ತರ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ 16 ಆಸ್ಪತ್ರೆಗಳನ್ನು ನಿಯೋಜಿತ ಕೋವಿಡ್ ಸೆಂಟರ್​ಗಳಾಗಿ ನಿಗದಿಪಡಿಸಲಾಗಿದೆ. ಇವುಗಳಲ್ಲಿ 1,330 ಹಾಸಿಗೆಗಳು ಬೆಂಗಳೂರಿನಲ್ಲಿ ಲಭ್ಯವಿದ್ದು ರೋಗಿಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 527 ಆಕ್ಸಿಜನ್ ಸಂಪರ್ಕ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. 167 ಐಸಿಯು ಬೆಡ್, 92 ವೆಂಟಿಲೇಟರ್ ಇವೆ ಎಂದು ವಿವರಿಸಿದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಆಹಾರದ ವಿಚಾರವಾಗಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಈ ರೀತಿಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಿನ್ನೆ, ಮೊನ್ನೆ ಉಂಟಾಗಿರುವ ಸಮಸ್ಯೆಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್ ಮಾತನಾಡಿ, ಖಾಸಗಿ ಆಸ್ಪತ್ರೆಗಳು ಶೇ 50ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ಮೀಸಲಿಡಬೇಕು. ಖಾಸಗಿ ಆಸ್ಪತ್ರೆಗೆ ಸ್ವತಃ ತಾವೇ ತೆರಳುವ ರೋಗಿಗಳಿಗೆ ಹೆಚ್ಚಿನ ದರ ವಸೂಲಿ ಮಾಡುವಂತಿಲ್ಲ. ಸರ್ಕಾರ ಫಿಕ್ಸ್ ಮಾಡಿದ ದರವನ್ನೇ ಖಾಸಗಿ ಆಸ್ಪತ್ರೆಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ವಿಕ್ಟೋರಿಯಾ ಹಾಗೂ ರಾಜೀವ್ ಗಾಂಧಿ ಆಸ್ಪತ್ರೆಗಳ ಸಮಸ್ಯೆ ಬಗೆಹರಿಸಲು ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿದ್ದೇವೆ. ರಿಯಲ್ ಟೈಂ ಆಧಾರದ ಮೇಲೆ ಎಷ್ಟಷ್ಟು ಹಾಸಿಗೆಗಳು ಖಾಲಿ ಇವೆ ಎಂಬ ಬಗ್ಗೆ ಮಾಹಿತಿ ತೆಗೆದುಕೊಂಡು ಸ್ಥಳಾಂತರ ಮಾಡುವ ಕೆಲಸ ಮಾಡುತ್ತೇವೆ.

ಕೆಲ ರೋಗಿಗಳಿಗೆ ಪದೇ ಪದೇ ಪರೀಕ್ಷೆ ನಡೆಸಿದರೂ ಪಾಸಿಟಿವ್ ಬರುತ್ತಿದೆ. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಹೀಗಾಗಿ ಅಂಥವರನ್ನು ಡಿಸ್ಜಾರ್ಜ್ ಮಾಡುವುದಕ್ಕೆ ಆಗುತ್ತಿಲ್ಲ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.