ETV Bharat / state

ಬೆಂಗಳೂರು ಲಾಕ್​​ಡೌನ್ ಹಿನ್ನೆಲೆ ಮುಂಗಡ ಟಿಕೆಟ್ ಬುಕ್ಕಿಂಗ್ ರದ್ದು - Advance Ticket Booking Cancel

ಸಿಲಿಕಾನ್​ ಸಿಟಿಯಲ್ಲಿ ಇಂದು ರಾತ್ರಿ 8 ಗಂಟೆಯಿಂದಲೇ ಲಾಕ್​ಡೌನ್​ ಆರಂಭವಾಗಿದ್ದು, ಇದು ಜು.22ರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾರಿಗೆಗಳ ಸಂಚಾರ ಇರುವುದಿಲ್ಲ ಎಂದು ಕೆಎಸ್ಆರ್​​ಟಿಸಿ ಸ್ಪಷ್ಟನೆ ನೀಡಿದೆ.

ಕೆಎಸ್ಆರ್​​ಟಿಸಿ ಸ್ಪಷ್ಟಣೆ
ಕೆಎಸ್ಆರ್​​ಟಿಸಿ ಸ್ಪಷ್ಟಣೆ
author img

By

Published : Jul 14, 2020, 11:27 PM IST

ಬೆಂಗಳೂರು: ಸರ್ಕಾರದ ಆದೇಶದಂತೆ ನಗರದಲ್ಲಿ ಇಂದು ರಾತ್ರಿ 8ರಿಂದ ಜು. 22ರ ಬೆಳಗ್ಗೆ 5 ಗಂಟೆಯವರೆಗೆ ಲಾಕ್​ಡೌನ್ ಜಾರಿಯಾಗಿದೆ.‌ ಈ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾರಿಗೆಗಳ ಸಂಚಾರ ಇರುವುದಿಲ್ಲ. ಹಾಗೆ ಬೆಂಗಳೂರಿನಿಂದ ಅಂತಾ​​ರಾಜ್ಯ ಸಾರಿಗೆ ಕಾರ್ಯಾಚರಣೆಯೂ ಸಹ ಇರುವುದಿಲ್ಲ ಎಂದು ಕೆಎಸ್ಆರ್​​ಟಿಸಿ ಸ್ಪಷ್ಟಪಡಿಸಿದೆ.

ಸದ್ಯದ ಅವಧಿಯಲ್ಲಿ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಮತ್ತು ಇತರೆ ಸ್ಥಳಗಳಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ಬಸ್​​ಗಳ ಮುಂಗಡ ಟಿಕೆಟ್ ಬುಕ್ಕಿಂಗ್​ ರದ್ದುಪಡಿಸಲಾಗಿದೆ. ಮುಂಗಡ ಕಾಯ್ದಿರಿಸಿದ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುತ್ತಿದೆ. ಇನ್ನು ಮೇಲ್ಕಂಡ ಎರಡು‌ ಜಿಲ್ಲೆಗಳು ಹೊರತುಪಡಿಸಿ, ಉಳಿದ ಜಿಲ್ಲೆಗಳ ಜಿಲ್ಲಾಡಳಿತದ ಆದೇಶದನ್ವಯ ಬಸ್​​ಗಳ‌ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ.

ಇನ್ನು ಇಂದು ರಾತ್ರಿ 8 ಗಂಟೆಯವರೆಗೆ ಒಟ್ಟು 1,300 ಬಸ್​​ಗಳನ್ನು ಬೆಂಗಳೂರಿನಿಂದ ಕಾರ್ಯಚರಣೆಗೊಳಿಸಿದ್ದು, 26,000 ಪ್ರಯಾಣಿಕರು ಈಗಾಗಲೇ ಪ್ರಯಾಣಿಸಿದ್ದಾರೆ. ಪ್ರಮುಖ ಸ್ಥಳಗಳಾದ ಹೊಸದುರ್ಗ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು,‌ ಬಳ್ಳಾರಿ, ಯಾದಗಿರಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್​​ಗಳು ಹೋಗಿವೆ. ಇನ್ನು ಇಂದು 160 ಬಸ್​​ಗಳ ಮುಂಗಡ ಟಿಕೆಟ್​ ಬುಕ್ಕಿಂಗ್ ಆಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.