ಬೆಂಗಳೂರು: ನೋವೆಲ್ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗುತ್ತಿದೆ. ಇಂದಿಗೆ 21 ದಿನದ ಲಾಕ್ ಡೌನ್ ಅವಧಿ ಮುಗಿದಿದ್ದು, ಮತ್ತೆ 19 ದಿನದ ಅಂದರೆ ಮೇ 3 ರವರೆಗೆ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಗ್ರಿ ಪರೀಕ್ಷೆಗಳು ಮುಂದೂಡಿಕೆ ಆಗಲಿದೆ.
ಈ ಮೊದಲು ಏಪ್ರಿಲ್ 14 ರ ಲಾಕ್ ಡೌನ್ ಅವಧಿ ಮುಗಿದ ನಂತರ ಪರೀಕ್ಷಾ ದಿನಾಂಕ ಘೋಷಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. ಆದರೆ ಈಗ ಲಾಕ್ ಡೌನ್ ಅವಧಿ ವಿಸ್ತರಣೆ ಆಗಿರುವ ನಿಟ್ಟಿನಲ್ಲಿ ಮತ್ತೆ ಶೈಕ್ಷಣಿಕ ವರ್ಷದ ಪರೀಕ್ಷೆಗಳು ಮುಂದೂಡುವ ಅನಿರ್ವಾಯ ಪರಿಸ್ಥಿತಿ ಎದುರಾಗಿದೆ.
ಹೀಗಾಗಿ, ಮೇ 3ರ ನಂತರ ಪರೀಕ್ಷಾ ದಿನಾಂಕ ನಿಗದಿ ಮಾಡಲಿರುವ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಕೊರೊನಾ ನಿಯಂತ್ರಣಕ್ಕೆ ಬರುವವರೆಗೂ ಯಾವುದೇ ರೀತಿಯ ಪರೀಕ್ಷಾ ದಿನಾಂಕ ನಿಗದಿ ಮಾಡದೇ ಇರಲು ನಿರ್ಧರಿಸಲಾಗಿದೆ ಎನ್ನಲಾಗಿದೆ.