ಬೆಂಗಳೂರು: ಇಂದಿನಿಂದ (ಜೂ.14) ಜೂ.21 ರವರೆಗೆ ಅನ್ವಯವಾಗುವಂತೆ ಕೋವಿಡ್-19 ಪಾಸಿಟಿವಿಟಿ ದರ ಕಡಿಮೆ ಇರುವ ಕಡೆ ಲಾಕ್ಡೌನ್ನಲ್ಲಿ ಕೆಲ ವಿನಾಯಿತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದ್ರೆ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರೆಯಲಿದೆ. ಸಾರ್ವಜನಿಕ ಸಾರಿಗೆ ಸೇವೆಗೆ ನಿರ್ಬಂಧವೂ ಮುಂದುವರೆಯಲಿದೆ.
ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಕಾಲ ಲಾಕ್‌ಡೌನ್‌ನ ಕಠಿಣ ನಿಯಮಗಳು ಜಾರಿಯಲ್ಲಿ ಇರಲಿವೆ.
ಉಳಿದ ಜಿಲ್ಲೆಗಳಲ್ಲಿ ಇಂದಿನಿಂದ 21 ರವರೆಗೆ ಲಾಕ್ಡೌನ್ ಇದ್ದರೂ ಕೆಲ ವಿನಾಯಿತಿ ನೀಡಲಾಗುತ್ತದೆ. ಬೆಂಗಳೂರು ನಗರ ಸೇರಿದಂತೆ 20 ಜಿಲ್ಲೆಗಳಲ್ಲಿ ಇಂದಿನಿಂದ ಹಲವು ಚಟುವಟಿಕೆಗಳಿಗೆ ಅವಕಾಶ ದೊರಕಲಿದೆ. ಈ ಎಲ್ಲ ಜಿಲ್ಲೆಗಳಲ್ಲೂ ಅನ್ಲಾಕ್ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ವಿನಾಯಿತಿ ನೀಡಲಾಗಿದೆ.
ಜಿಲ್ಲೆಗಳಲ್ಲಿ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಇರಲಿದೆ. ಜೂನ್ 18ರ ರಾತ್ರಿ 7ರಿಂದ ಜೂನ್ 21ರ ಬೆಳಿಗ್ಗೆ 5ರವರೆಗೆ ವಾರಾಂತ್ಯದ ಕರ್ಫ್ಯೂ ಇರಲಿದೆ.
ಯಾವುದಕ್ಕೆಲ್ಲ ವಿನಾಯಿತಿ?:
- ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೂ ಅಗತ್ಯ ವಸ್ತು ಖರೀದಿಗೆ ಅವಕಾಶ
- ಬೀದಿ ಬದಿ ವ್ಯಾಪಾರಿಗಳಿಗೂ ಈ ಅವಧಿ ಅನ್ವಯ
- ಮದ್ಯ ಮಾರಾಟದ ಅವಧಿಯೂ ಮಧ್ಯಾಹ್ನ 2ರ ವರೆಗೆ ವಿಸ್ತರಣೆ
- ಎಲ್ಲ ಕಾರ್ಖಾನೆಯಲ್ಲಿ ಶೇ. 50ರಷ್ಟು ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯ ನಿರ್ವಹಣೆ
- ಗಾರ್ಮೆಂಟ್ಸ್ ಶೇ. 30 ಸಿಬ್ಬಂದಿಗೆ ಅವಕಾಶ
- ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮತಿ
- ನಿರ್ಮಾಣ ಸಾಮಗ್ರಿಗಳ ಅಂಗಡಿಗೂ ಅವಕಾಶ
- ಉದ್ಯಾನಗಳಲ್ಲಿ ಬೆಳಿಗ್ಗೆ 5ರಿಂದ 10 ಗಂಟೆಯವರೆಗೆ ವಾಯುವಿಹಾರಕ್ಕೆ ಅವಕಾಶ
- ಆಟೋ, ಟ್ಯಾಕ್ಸಿ ಇಬ್ಬರು ಪ್ರಯಾಣಿಕರಿಗೆ ಅವಕಾಶ
- ಪ್ರತಿ ದಿನ ರಾ.7 ರಿಂದ ಬೆ.5 ರವರೆಗೆ ನೈಟ್ ಕರ್ಫ್ಯೂ ಜಾರಿ
- ಶುಕ್ರವಾರ ರಾತ್ರಿ 7ರಿಂದ ಸೋಮವಾರ 5 ರವರೆಗೆ ವಾರಾಂತ್ಯದ ಕರ್ಫ್ಯೂ ಜಾರಿ
ಇದನ್ನೂ ಓದಿ: ಕೋಮಾ ಸ್ಥಿತಿಯಲ್ಲಿ ಸಂಚಾರಿ ವಿಜಯ್.. ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆ