ಬೆಂಗಳೂರು : ಜನರು ಸಹಕರಿಸಿದರೆ ಲಾಕ್‌ಡೌನ್ ಮುಂದುವರಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸಿಎಂ ತಿಳಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ಐದು ಜಿಲ್ಲೆಗಳ ಜನಪ್ರತಿನಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಲಾಕ್‌ಡೌನ್ ಈಗ ಏನಿದೆ, ಅಲ್ಲಿಯವರೆಗೂ ಇರುತ್ತದೆ. ಅಲ್ಲಿವರೆಗೂ ಬಿಗಿಯಾದ ಕ್ರಮ ಮುಂದುವರೆಯಲಿದೆ.
ಕೊರೊನಾ ಕೆಡಿಮೆ ಆದ್ರೆ ಲಾಕ್‌ಡೌನ್ ಮುಂದುವರೆಯಲ್ಲ. ಜನ ಸಹಕರಿಸಿದರೆ ಲಾಕ್‌ಡೌನ್ ಮುಂದುವರೆಸುವ ಪ್ರಶ್ನೆ ಉದ್ಬವಿಸಲ್ಲ ಎಂದು ತಿಳಿಸಿದರು.
ಐದು ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿದ್ದೇನೆ. ಮೂರು ಗಂಟೆ ಕಾಲ ಚರ್ಚೆ ನಡೆದಿದೆ. ಕೋವಿಡ್ ಸ್ಥಿತಿಗತಿ ಬಗ್ಗೆ ಚರ್ಚೆ ಮಾಡಲಾಗಿದೆ. ಪ್ರತೀ ಗ್ರಾಮ ಪಂಚಾಯತ್‌ನಲ್ಲೂ ಕೋವಿಡ್ ನಿಯಂತ್ರಣಕ್ಕೆ ಸೂಚಿಸಲಾಗಿದೆ.
ಕೋವಿಡ್ ನಿಯಂತ್ರಣಕ್ಕೆ ಹಣಕಾಸಿನ ಯಾವುದೇ ಸಮಸ್ಯೆ ಇಲ್ಲ. ಕೋವಿಡ್ ಕಡಿಮೆ ಮಾಡಲು ಸೂಚನೆ ನೀಡಿದ್ದೇನೆ. ಹೆಚ್ಚಿರೋ ಜಿಲ್ಲೆಗಳಲ್ಲಿ ಕಡಿಮೆ ಮಾಡಲು ಸೂಚನೆ ನೀಡಿದ್ದೇನೆ. ಕಡಿಮೆ ಮಾಡಲು ಸಹಕಾರ ನೀಡೋದಾಗಿ ಜನಪ್ರತಿನಿಧಿಗಳು ಹೇಳಿದ್ದಾರೆ ಎಂದರು.
ಪಿಎಂ ಕೇರ್ ವೆಂಟಿಲೇಟರ್ ಬಳಕೆ ಮಾಡದಿರೋ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವೆಂಟಿಲೇಟರ್‌ನಲ್ಲಿ ಕೆಲ ಸಮಸ್ಯೆ ಇದೆ. ಅದನ್ನ ಸರಿಪಡಿಸೋ ಕೆಲಸ ಮಾಡಲಾಗ್ತಿದೆ ಎಂದರು.
ಬ್ಲ್ಯಾಕ್ ಫಂಗಸ್ ಲಸಿಕೆ ಕೊರತೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರ ಸಚಿವ ಸದಾನಂದಗೌಡರ ಜೊತೆ ಮಾತನಾಡಿದ್ದೇವೆ. ಲಸಿಕೆ ಪೂರೈಕೆ ಮಾಡೋದಾಗಿ ಹೇಳಿದ್ದಾರೆ. ಅಲ್ಲೊಂದು ಇಲ್ಲೊಂದು ಬ್ಲ್ಯಾಕ್ ಫಂಗಸ್ ಔಷಧಿ ಮಾರಾಟ ಪ್ರಕರಣ ಕಂಡು ಬರುತ್ತಿವ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.