ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾರೋ ಹೇಳಿದರೆಂಬ ಕಾರಣಕ್ಕೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾನದಂಡಗಳನ್ನು ಪಾಲನೆ ಮಾಡುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಟಾಸ್ಕ್ಫೋರ್ಸ್ ಕಮಿಟಿ ರಚಿಸಲಾಗಿದೆ. ಸಮಿತಿ ವರದಿ ಆಧಾರದ ಮೇಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದರು.
ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ ಮಾನದಂಡ ಮತ್ತು ಸಲಹೆ ಪಡೆದು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.