ಬೆಂಗಳೂರು : ಲೋಕಸಭೆ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಮಹತ್ವದ ಜೆಡಿಎಸ್ ಶಾಸಕಾಂಗ ಸಭೆ ಆರಂಭವಾಗಿದೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಭಾರಿ ಮಹತ್ವ ಪಡೆದುಕೊಂಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್, ಸಚಿವರಾದ ಹೆಚ್.ಡಿ.ರೇವಣ್ಣ, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಬಂಡೆಪ್ಪ ಕಾಶಂಪೂರ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದಾರೆ.
ಯಾರೂ ಸಹ ಸೋಲಿನಿಂದ ಕುಗ್ಗಬೇಡಿ ಎಂದು ವರಿಷ್ಠರು ಸಂದೇಶ ರವಾನಿಸಲಿದ್ದು, ಮೈತ್ರಿ ಸರ್ಕಾರಕ್ಕೆ ಧಕ್ಕೆಯಾಗದಂತೆ ನಡೆದುಕೊಳ್ಳಿ. ಮೈತ್ರಿ ಪಕ್ಷದ ಜೊತೆ ವಿನಾ ಕಾರಣ ಮನಸ್ತಾಪ ಬೇಡ. ಸರ್ಕಾರಕ್ಕೆ ಧಕ್ಕೆಯಾಗುವಂತಹ ಹೇಳಿಯನ್ನು ಕೊಡಬೇಡಿ. ಪ್ರಮುಖವಾಗಿ ಯಾವುದೇ ಕಾರಣಕ್ಕೂ ಬಿಜೆಪಿ ಆಮಿಷಕ್ಕೆ ಒಳಗಾಗಬೇಡಿ ಎಂಬ ಸಂದೇಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.