ETV Bharat / state

ಲೋಕಸಭೆ ಚುನಾವಣೆ: ಬಿಜೆಪಿ ಸಭೆಯಲ್ಲಿ ಕೆಲ ಹಾಲಿ ಸಂಸದರಿಗೆ ಟಿಕೆಟ್ ನೀಡಲು ವಿರೋಧ - Lok Sabha Elections

ಲೋಕಸಭೆ ಟಿಕೆಟ್​ ಸಂಬಂಧ ಎರಡನೇ ದಿನವೂ ಕೂಡ ಬೆಂಗಳೂರು ಹೊರವಲಯದ ರಮಾಡ ರೆಸಾರ್ಟ್​​ನಲ್ಲಿ ಬಿಜೆಪಿ ಸಭೆ ನಡೆಯಿತು.

lok-sabha-elections-opposition-to-give-tickets-to-some-sitting-mps-in-bjp-meeting
ಲೋಕಸಭೆ ಚುನಾವಣೆ: ಬಿಜೆಪಿ ಸಭೆಯಲ್ಲಿ ಕೆಲ ಹಾಲಿ ಸಂಸದರಿಗೆ ಟಿಕೆಟ್ ನೀಡಲು ವಿರೋಧ
author img

By ETV Bharat Karnataka Team

Published : Jan 11, 2024, 9:27 PM IST

ಬೆಂಗಳೂರು: ಲೋಕಸಭಾ ಕ್ಷೇತ್ರವಾರು 15 ಕ್ಷೇತ್ರಗಳ ಕುರಿತು ರಾಜ್ಯ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಕೆಲ ಹಾಲಿ ಸಂಸದರ ಬದಲು ಬೇರೆಯವರಿಗೆ ಟಿಕೆಟ್ ನೀಡುವಂತೆ ಸ್ಥಳೀಯ ನಾಯಕರು ಆಗ್ರಹಿಸಿದ್ದಾರೆ. ಹಾಲಿ ಸಂಸದರು, ಕೇಂದ್ರ ಸಚಿವರಿಗೆ ಟಿಕೆಟ್ ನೀಡದಂತೆ ಇಂದಿನ ಸಭೆಯಲ್ಲಿಯೂ ಆಗ್ರಹ ವ್ಯಕ್ತವಾಗಿದೆ.

ನಗರದ ಹೊರವಲಯದಲ್ಲಿರುವ ರಮಾಡ ರೆಸಾರ್ಟ್​​ನಲ್ಲಿ ಲೋಕಸಭಾ ಚುನಾವಣಾ ಸಿದ್ಧತೆ ಕುರಿತು ಬಿಜೆಪಿಯ ಎರಡನೇ ದಿನದ ಸಭೆ ನಡೆಯಿತು. ಬಿಜೆಪಿಯಿಂದ ಲೋಕಸಭಾ ಕ್ಷೇತ್ರವಾರು ನಡೆದ ಸಭೆಯಲ್ಲಿ ಸ್ಥಳೀಯ ನಾಯಕರು ಅಭ್ಯರ್ಥಿಗಳ ವಿಚಾರದಲ್ಲಿ ಹೆಚ್ಚಿನ ಉತ್ಸುಕತೆ ತೋರಿ ಮಾತನಾಡಿದರು. ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್ ತಮ್ಮ ಬದಲು ಬೇರೆಯವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ರಾಜ್ಯ ನಾಯಕರು ಕ್ಷೇತ್ರದಲ್ಲಿ ಸರ್ವೆ ಮಾಡಿ ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಆಯ್ಕೆ ಮಾಡಿ, ವೀಕ್ಷಕರು ಕ್ಷೇತ್ರಕ್ಕೆ ಬಂದಾಗ ಅಲ್ಲಿಯೇ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಸೂಚಿಸಿದರು. ಸದ್ಯ ದಾವಣಗೆರೆ ಲೋಕಸಭಾ ಕ್ಷೇತ್ರದದಿಂದ ತಮ್ಮ ಬದಲಾಗಿ ತಮ್ಮ ಕುಟುಂಬಸ್ಥರ ಕಣಕ್ಕಿಳಿಸಲು ಮುಂದಾಗಿರುವ ಸಂಸದರು ಟಿಕೆಟ್​​ಗಾಗಿ ಲಾಬಿ ಮಾಡುತ್ತಿದ್ದು, ಇದರ ನಡುವೆ ಸ್ಥಳೀಯರ ವಿರೋಧ ಅವರಿಗೆ ಹಿನ್ನಡೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಿತ್ರದುರ್ಗ ಸಂಸದರ ಬದಲಾವಣೆ ಮಾಡಿ, ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಆಗ್ರಹ ಮಾಡಲಾಗಿದೆ. ಈ ಕುರಿತು ವರಿಷ್ಠರು ನಿರ್ಧರಿಸುತ್ತಾರೆ, ನಿಮ್ಮ ಅಭಿಪ್ರಾಯವನ್ನು ವೀಕ್ಷರಿಗೆ ತಿಳಿಸಿ, ಸದ್ಯ ಕ್ಷೇತ್ರದಲ್ಲಿ ಪಕ್ಷ ಬಲವರ್ಧನೆಗೆ ಹೆಚ್ಚಿನ ಗಮನ ನೀಡಿ ಎಂದು ರಾಜ್ಯದ ನಾಯಕರು ಸೂಚಿಸಿದ್ದಾರೆ. ಜೊತೆಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದಲೂ ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಆಗ್ರಹ ಕೇಳಿಬಂದಿದೆ. ಸದ್ಯ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿ ಹುಡುಕಾಟ ನಡೆಯುತ್ತಿದೆ. ಆದರೆ, ಹಾವೇರಿ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವರು, ತಮ್ಮ ಪುತ್ರನಿ​ಗೆ ಟಿಕೆಟ್ ಕೊಡಿಸಲು ಯತ್ನಿಸುತ್ತಿದ್ದಾರೆ. ಇದರ ನಡುವೆ ಸ್ಥಳೀಯರಿಗೆ ಮಣೆ ಹಾಕಿ ಎನ್ನುವ ಒತ್ತಾಯವೂ ಕೇಳಿಬಂದಿದೆ. ಮಾಜಿ ಸಿಎಂ ಬೊಮ್ಮಾಯಿ ಸ್ಪರ್ಧೆ ಚರ್ಚೆಯೂ ಇರುವ ಹಿನ್ನೆಲೆಯಲ್ಲಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದರ ನಡುವೆ ಬಾಗಲಕೋಟೆ ಸಂಸದ ಪಿ.ಸಿ ಗದ್ದಿಗೌಡರ್ ಮರು ಸ್ಪರ್ಧೆಗೆ ಬಹುತೇಕರಿಂದ ಒಲವು ವ್ಯಕ್ತವಾಯಿತು. ಸಭೆಯಲ್ಲಿ ಮತ್ತೆ ಗದ್ದಿಗೌಡರ್ ಗೆಲ್ಲಿಸುವ ವಿಶ್ವಾಸ ವ್ಯಕ್ತಪಡಿಸಿದ ಸ್ಥಳೀಯ ನಾಯಕರು ಅವರಿಗೇ ಮತ್ತೆ ಟಿಕೆಟ್ ನೀಡುವಂತೆ ಮನವಿ ಮಾಡಿದರು. ಉಡುಪಿ - ಚಿಕ್ಕಮಗಳೂರು, ಮಂಗಳೂರು, ಉತ್ತರ ಕನ್ನಡ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಬದಲಾವಣೆ ವದಂತಿಗಳ ಬಗ್ಗೆ, ಬೆಂಗಳೂರು ಉತ್ತರದಲ್ಲಿ ಸದಾನಂದಗೌಡರ ಮರು ಸ್ಪರ್ಧೆ ವಿಚಾರದ ಕುರಿತು ಹೆಚ್ಚಿನ ಚರ್ಚೆಯಾಯಿತು ಎಂದು ಹೇಳಲಾಗಿದೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಹಾಲಿ ಸಂಸದರ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದೆ. ಕಾರ್ಯಕರ್ತರ ಅಭಿಪ್ರಾಯದಂತೆ ಟಿಕೆಟ್ ನಿರ್ಣಯ ಮಾಡಿ ಎಂದಿರುವ ಸ್ಥಳೀಯ ನಾಯಕರು ಈಗಾಗಲೇ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿರುವ ವಿಷಯವನ್ನು ಸಭೆಯ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್​​ನಿಂದ ಜಯಪ್ರಕಾಶ್ ಹೆಗಡೆ ಸ್ಪರ್ಧೆ ಸಾಧ್ಯತೆ ಇದ್ದು, ಅವರ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಿ, ಇಲ್ಲವಾದಲ್ಲಿ ಪಕ್ಷಕ್ಕೆ ಸಮಸ್ಯೆ ಆಗಬಹುದು ಎಂದು ಚಿಕ್ಕಮಗಳೂರಿನ ಕೆಲವರು ಹಾಗೂ ಉಡುಪಿಯ ನಾಯಕರು ಆಗ್ರಹ ಮಾಡಿದ್ದಾರೆ. ಸದ್ಯ ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದಿಂದ ಪ್ರಮೋದ್ ಮಧ್ವರಾಜ್, ಜೀವರಾಜ್, ಸಿ.ಟಿ ರವಿ ಆಕಾಂಕ್ಷಿಗಳಾಗಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೂ ಪ್ರಬಲ ಅಭ್ಯರ್ಥಿಗೆ ಟಿಕೆಟ್​ ನೀಡಲು ಕೂಗು ಕೇಳಿಬಂದಿದೆ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು, ಈ‌ ನಿಟ್ಟಿನಲ್ಲಿ ನಮ್ಮ ಕ್ಷೇತ್ರದಿಂದಲೂ ಪಕ್ಷದ ಅಭ್ಯರ್ಥಿ ಮತ್ತೊಮ್ಮೆ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವಂತೆ ಆಗ್ರಹಿಸಲಾಯಿತು. ಮತ್ತೊಂದು ಕಡೆ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯಾಗುವ ನಿಟ್ಟಿನಲ್ಲಿ ಸಭೆಯಲ್ಲಿ ಪರೋಕ್ಷವಾಗಿ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ನನ್ನ ಮೇಲೆ ಯಾವುದೇ ಒತ್ತಡ ಇಲ್ಲ- ಬೊಮ್ಮಾಯಿ: ಹಾವೇರಿ ಕ್ಷೇತ್ರದಲ್ಲಿ ಸ್ಥಳೀಯರಿಗೆ ಟಿಕೆಟ್ ಕೇಳುವ ಮೂಲಕ ಬಸವರಾಜ ಬೊಮ್ಮಾಯಿ ಅವರ ಸ್ಪರ್ಧೆಗೆ ಸ್ಥಳೀಯ ನಾಯಕರು ಪರೋಕ್ಷವಾಗಿ ಪ್ರಸ್ತಾಪ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಸವರಾಜ ಬೊಮ್ಮಾಯಿ, ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ವಿಚಾರ ಸಂಬಂಧ ನನ್ನ ಜೊತೆ ಯಾರೂ ಚರ್ಚೆ ಮಾಡಿಲ್ಲ, ಈ ಕುರಿತು ನನ್ನನ್ನು ಯಾರೂ ಸಂಪರ್ಕಿಸಿಲ್ಲ, ಲೋಕಸಭೆ ಚುನಾವಣೆಗೆ ಸ್ಪರ್ದಿಸುವಂತೆ ನನ್ನ ಮೇಲೆ ಯಾವುದೇ ಒತ್ತಡವಿಲ್ಲ. ವರಿಷ್ಠರು ಏನೇ ತೀರ್ಮಾನ ಮಾಡಿದರೂ, ಯಾರನ್ನೇ ಅಭ್ಯರ್ಥಿ ಮಾಡಿದರೂ ಅದನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಫೆಬ್ರವರಿಯಲ್ಲೇ ಲೋಕಸಭೆ ಅಭ್ಯರ್ಥಿಗಳ ಅಂತಿಮಕ್ಕೆ ಹೈಕಮಾಂಡ್ ಜೊತೆ ಚರ್ಚೆ: ವಿಜಯೇಂದ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.