ETV Bharat / state

ಡಿಜಿಟಲ್ ವಿಶ್ವಕ್ಕೆ‌ ಭಾರತವೇ ಗುರು: ಸ್ಪೀಕರ್ ಓಂ ಬಿರ್ಲಾ - ಡಿಜಿಟಲ್ ಶಿಕ್ಷಣದ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿಕೆ

ಪದವಿ ಪಡೆಯುವ ಮೂಲಕ ಬದುಕಿನ ಹೊಸ ಅಧ್ಯಾಯ ಆರಂಭವಾದಂತಾಗಿದೆ. ನಾವು ಗಳಿಸಿದ ಜ್ಞಾನದ ಆಧಾರದ ಮೇಲೆ ಬದುಕಿನ ದಾರಿಯನ್ನು ಕಂಡುಕೊಳ್ಳಬೇಕಿದೆ ಎಂದು ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ತಿಳಿಸಿದರು.

lok-sabha-speaker-om-birla
ಲೋಕಸಭೆ ಸ್ಪೀಕರ್ ಓಂ ಬಿರ್ಲಾ
author img

By

Published : Mar 10, 2022, 6:10 PM IST

ಬೆಳಗಾವಿ: ಕೋವಿಡ್ ಹಿನ್ನೆಲೆಯಲ್ಲಿ ‌ಭಾರತದಲ್ಲಿ ಡಿಜಿಟಲ್ ಶಿಕ್ಷಣದ ಹೊಸ ಯುಗ ಆರಂಭವಾಗಿದೆ. ಡಿಜಿಟಲ್ ಶಿಕ್ಷಣದಲ್ಲಿ ಹಲವು ಸವಾಲುಗಳಿವೆ. ಅದಾಗ್ಯೂ ‌ಇವುಗಳನ್ನು ಮೀರಿ ಭಾರತವು ಡಿಜಿಟಲ್ ಶಿಕ್ಷಣದಲ್ಲಿ ಉತ್ತಮ ಸಾಧನೆಗೈದು‌ ಜಗತ್ತಿನಲ್ಲಿ ವಿಶಿಷ್ಟ ಕೀರ್ತಿಗೆ ಪಾತ್ರವಾಗಿದೆ ಎಂದು ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಪ್ರತಿಪಾದಿಸಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನಸಂಗಮ ಆವರಣದ ಡಾ. ಎ. ಪಿ. ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಗುರುವಾರ ನಡೆದ ವಿಟಿಯು 21ನೇ ಘಟಿಕೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಜಗತ್ತಿನ ಹಲವು ದೇಶಗಳಲ್ಲಿ ಡಿಜಿಟಲ್, ಐಟಿ, ಮಾಹಿತಿ-ತಂತ್ರಜ್ಞಾನದ ಬೆಳವಣಿಗೆಯಲ್ಲಿ ಕರ್ನಾಟಕದ ಯುವ ಸಮುದಾಯದ ಕೊಡುಗೆ ದೊಡ್ಡದಾಗಿದೆ. ಡಿಜಿಟಲ್ ಕ್ಷೇತ್ರದಲ್ಲಿ ಭಾರತವು ಇಡೀ ಜಗತ್ತಿನಲ್ಲಿ ಅತ್ಯುತ್ತಮ ಸಾಧನೆಗೈದಿದೆ. ವಿಜ್ಞಾನ-ತಂತ್ರಜ್ಞಾನ, ವೈದ್ಯಕೀಯ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಭಾರತವು ಮುಂಚೂಣಿಯಲ್ಲಿದೆ.

ಯುವಸಮುದಾಯ ಮುಂದಡಿ ಇಡಬೇಕು.. ಅಪಾರ ಬೌದ್ಧಿಕ ‌ಸಂಪತ್ತು ಹೊಂದಿರುವ ನಮ್ಮ ದೇಶವು ವಿಶ್ವಗುರು ಆಗಿ ಹೊರಹೊಮ್ಮುವ ಎಲ್ಲ ಸಾಮರ್ಥ್ಯವನ್ನು ಹೊಂದಿದೆ. ಇದನ್ನು‌ ಅರಿತುಕೊಂಡು ನಮಗೆ ಅವಕಾಶವಿರುವ ಕೃಷಿ, ವೈದ್ಯಕೀಯ, ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಭಾರತವು ಉನ್ನತ ಸಾಧನೆ‌ ಮಾಡಬೇಕು. ಈ ನಿಟ್ಟಿನಲ್ಲಿ ಯುವಸಮುದಾಯ ಮುಂದಡಿ ಇಡಬೇಕು ಎಂದು‌ ಕರೆ‌ ನೀಡಿದರು.

ದೇಶದ ನವನಿರ್ಮಾಣಕ್ಕೆ ಕೊಡುಗೆ ನೀಡಿರುವ ಸರ್. ಎಂ ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿರುವ ಪ್ರತಿಷ್ಠಿತ ವಿಟಿಯು ಘಟಿಕೋತ್ಸವದಲ್ಲಿ ಭಾಗವಹಿಸಿರುವುದಕ್ಕೆ ಸಂತಸವಾಗಿದೆ. ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳ ಜೀವನದಲ್ಲಿ ಇದು ಅವಿಸ್ಮರಣೀಯ ದಿನವಾಗಿದೆ. ಅತ್ಯುತ್ತಮ ಸಾಧನೆಗೈದು ಸುವರ್ಣ ಪದಕ ಹಾಗೂ ರ್ಯಾಂಕ್ ಗಳಿಸಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಇದು ಅವರಿಗೆ ಕಲಿಸಿದ‌ ಗುರುಗಳಿಗೂ ಅವಿಸ್ಮರಣೀಯ ದಿನ ಎಂದರು.

ಜ್ಞಾನದ ಆಧಾರದ ಮೇಲೆ ಬದುಕಿನ ದಾರಿ ಕಂಡುಕೊಳ್ಳಬೇಕು.. ಪದವಿ ಪಡೆಯುವ ಮೂಲಕ ಬದುಕಿನ ಹೊಸ ಅಧ್ಯಾಯ ಆರಂಭವಾದಂತಾಗಿದೆ. ನಾವು ಗಳಿಸಿದ ಜ್ಞಾನದ ಆಧಾರದ ಮೇಲೆ ಬದುಕಿನ ದಾರಿಯನ್ನು ಕಂಡುಕೊಳ್ಳಬೇಕಿದೆ. ವಿದ್ಯಾರ್ಥಿಗಳು ಗಳಿಸಿದ‌ ಪದವಿ‌ ಮತ್ತು ಜ್ಞಾನವನ್ನು ರಾಷ್ಟ್ರಕ್ಕೆ ಸಮರ್ಪಿಸಬೇಕಿದೆ. ಶಿಸ್ತು, ಉತ್ಸಾಹ ಹಾಗೂ ನೈತಿಕತೆಯ ಮೂಲಕ ಹೊಸತನ ಮತ್ತು ಸಾಧನೆಗೆ ಮುಂದಾಗಬೇಕು.

ಸರ್. ಎಂ. ವಿಶ್ವೇಶ್ವರಯ್ಯ, ಡಾ. ಎ. ಪಿ. ಜೆ ಅಬ್ದುಲ್ ಕಲಾಂ, ಇಸ್ರೋ ಅಧ್ಯಕ್ಷರಾಗಿದ್ದ ಕಸ್ತೂರಿ ರಂಗನ್, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ‌ಅವರಂತಹ ಮಹನೀಯರಿಂದ ನಮಗೆ ದೊರೆತಿರುವ ಮಾರ್ಗದರ್ಶನವನ್ನು ಬಳಸಿಕೊಂಡು ಉನ್ನತ ಸಾಧನೆ ಮಾಡಬೇಕು.

ಮಾತೃಭಾಷೆ ಕನ್ನಡದಲ್ಲೂ ತಾಂತ್ರಿಕ ಶಿಕ್ಷಣ ಪಡೆಯುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ.‌ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಲೋಕಸಭೆಯ ಸ್ಪೀಕರ್​ ‌ಓಂ ಬಿರ್ಲಾ ‌ಸಲಹೆ ನೀಡಿದರು.

ಓದಿ: ಮೋದಿ ಆಡಳಿತದ ವರ್ಚಸ್ಸಿನ ಮುಂದೆ ಯಾವ ಪಕ್ಷವೂ ಉಳಿಯಲ್ಲ: ಡಿ.ವಿ.ಸದಾನಂದ ಗೌಡ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.