ETV Bharat / state

ಮಾಡಾಳ್ ವಿರುಪಾಕ್ಷಪ್ಪ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಲು ಲೋಕಾಯಕ್ತ ಚಿಂತನೆ

ಲಂಚ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ಎಫ್ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ.

Lokayukta
ಮಾಜಿ‌ ಶಾಸಕ ಮಾಡಾಳ್​ಗೆ ಮತ್ತೆ ಸಂಕಷ್ಟ ಸಾಧ್ಯತೆ, ಅಕ್ರಮ ಆಸ್ತಿ ಪ್ರಕರಣ ದಾಖಲಿಸಿಲು ಲೋಕಾ ಸಿದ್ಧತೆ..
author img

By

Published : Jun 6, 2023, 9:47 PM IST

ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇರೆಗೆ ಹೊರಗಿರುವ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಗಮ ನಿಯಮಿತ (ಕೆಎಸ್​ಡಿಎಲ್) ಮಾಜಿ ಅಧ್ಯಕ್ಷ ಮಾಡಾಳ್ ವಿರುಪಾಕ್ಷಪ್ಪ ಹಾಗೂ ಪುತ್ರ ಪ್ರಶಾಂತ್ ಮಾಡಾಳ್ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಗೋಚರಿಸಿದೆ.

ಸಂಪೂರ್ಣ ವಿವರ: ಈ ಹಿಂದೆ ವಿರುಪಾಕ್ಷಪ್ಪ ಮನೆಯಲ್ಲಿ 6 ಕೋಟಿ ರೂ ನಗದು ಪತ್ತೆಯಾಗಿತ್ತು. ಇದಕ್ಕೂ ಮುನ್ನ ಲಂಚಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಹಣದ ಮೂಲ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಲೋಕಾ‌ಯುಕ್ತ ಪೊಲೀಸರು ಪತ್ರ ಬರೆದಿದ್ದರು. ಪ್ರತ್ಯೇಕವಾಗಿ ಐಟಿ ತನಿಖೆಯೂ ನಡೆಯುತ್ತಿದೆ.‌ ಈ ಮಧ್ಯೆ ಮನೆಯಲ್ಲಿ ದೊರೆತಿದ್ದ ಆರು ಕೋಟಿ‌ ರೂ. ಮೂಲದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದಡಿ ಪ್ರತ್ಯೇಕ ಪ್ರಕರಣ ದಾಖಲಿಸಲು ಚಿಂತನೆ ನಡೆಸುತ್ತಿದ್ದಾರೆ. ಇದಕ್ಕೆ‌ ಪೂರಕವೆಂಬಂತೆ ಮಾಡಾಳ್ ಅವರ ಕಂಪನಿಗಳ ಮಾಹಿತಿ ಕೋರಿ ರಿಜಿಸ್ಟರ್ ಆಫ್ ಕಂಪನಿಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ.

ಮನೆಯಲ್ಲಿ ಅಪಾರ ಹಣ ಸಿಕ್ಕಿರುವ ಬಗ್ಗೆ ವಿಚಾರಣೆಯಲ್ಲಿ ಆರೋಪಿ ವಿರುಪಾಕ್ಷಪ್ಪ ನೀಡಿದ ಹೇಳಿಕೆಗೂ ವಶಕ್ಕೆ ಪಡೆದುಕೊಂಡಿದ್ದ ಹಣಕ್ಕೂ ವ್ಯತ್ಯಾಸ ಕಂಡು ಬಂದಿದ್ದು ಮಾಡಾಳ್ ಒಡೆತನವಿರುವ ಕಂಪನಿಗಳ ಬಗ್ಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ದಾವಣಗೆರೆಯಲ್ಲಿ ಕ್ರಷರ್​ಗಳು, ಅಡಿಕೆ ಕಂಪನಿಗಳು ಹಾಗೂ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಕಂಪನಿ ಸೇರಿದಂತೆ ಇನ್ನಿತರ ಕಂಪನಿಗಳ‌ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಮುಂದಾಗಿದ್ದಾರೆ.‌ ಕಂಪನಿ ಸ್ಥಾಪನೆ ಮಾಡಿದಾಗಿನಿಂದ‌ ಈವರೆಗಿನ ಹಣ ವ್ಯವಹಾರ ನಡೆಸಿರುವ ಬಗ್ಗೆಯೂ ಮಾಹಿತಿ ನೀಡುವಂತೆ ಕೋರಲಾಗಿದೆ. ಮಾಹಿತಿ ಬಂದ ಬಳಿಕ ಎಲ್ಲಾ ರೀತಿಯ ಪರಿಶೀಲನೆ ನಡೆಸಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿರುವುದು ಕಂಡುಬಂದರೆ ವಿರುಪಾಕ್ಷಪ್ಪ ವಿರುದ್ಧ ಅಸಮತೋಲನ ಆಸ್ತಿಯಡಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿರುವುದಾಗಿ ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ‌.

ಎಫ್ಎಸ್ಎಲ್ ವರದಿ ಬಳಿಕ ಚಾರ್ಜ್ ಶೀಟ್: ಲಂಚ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ಎಫ್ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ. ವಾಯ್ಸ್ ಸ್ಯಾಂಪಲ್, ಹ್ಯಾಂಡ್ ರೈಟಿಂಗ್ ಕುರಿತಂತೆ ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿ ಬಂದ ಬಳಿಕ ಇನ್ನೊಂದು ತಿಂಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ‌.‌ ವಿರುಪಾಕ್ಷಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಾಬೂನು ಹಾಗೂ ಮಾರ್ಜಕ‌ ನಿಗಮದ ಅಧ್ಯಕ್ಷರಾಗಿದ್ದ ವಿರುಪಾಕ್ಷಪ್ಪ ಮಾಡಾಳ್ ಪರವಾಗಿ ಜಲಮಂಡಳಿಯ ಲೆಕ್ಕಾಧಿಕಾರಿ ಹಾಗು ಪುತ್ರ ಪ್ರಶಾಂತ್ ಮಾಡಾಳ್ ಅವರ ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ಖಾಸಗಿ ಕಚೇರಿಯಲ್ಲಿ ಗುತ್ತಿಗೆದಾರಿನಿಂದ 40 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಮುಂದೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು‌‌. ಈ ಸಂಬಂಧ ಸರ್ಚ್ ವಾರೆಂಟ್ ಪಡೆದು ಚೆನ್ನಗಿರಿಯಲ್ಲಿರುವ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮನೆ ಮೇಲೆ ದಾಳಿ ನಡೆಸಿದಾಗ ಸುಮಾರು ಆರು ಕೋಟಿ ಕಂತೆ-ಕಂತೆ ಹಣ ಪತ್ತೆಯಾಗಿತ್ತು‌. ಬಳಿಕ ಮಾಡಾಳ್​ರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈ ಮಧ್ಯೆ ಹೈಕೋರ್ಟ್ ಮೊರೆ ಹೋಗಿದ್ದ ಮಾಡಾಳ್​ಗೆ ಜಾಮೀನು ತಿರಸ್ಕೃತವಾಗಿತ್ತು.

ಇದನ್ನೂ ಓದಿ: ಕಾಲಮಿತಿಯಲ್ಲಿ ವಸತಿ ಯೋಜನೆಗಳ ಅನುಷ್ಠಾನಕ್ಕೆ ಸಚಿವ ಜಮೀರ್ ಅಹಮದ್ ಖಾನ್​ ಗಡುವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.