ETV Bharat / state

ಶಾಸಕ ವಿರೂಪಾಕ್ಷಪ್ಪ ಮಾಡಾಳ್​ಗೆ ನೋಟಿಸ್ ಜಾರಿಗೊಳಿಸಲು ಲೋಕಾಯುಕ್ತ ಸಿದ್ಧತೆ - mla virupakshappa modal

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್​ ಮಾಡಾಳ್​ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ತನಿಖೆ ಚುರುಕುಗೊಂಡಿದೆ.

virupakshappa modal
ಶಾಸಕ ವಿರೂಪಾಕ್ಷಪ್ಪ
author img

By

Published : Mar 6, 2023, 11:03 AM IST

ಬೆಂಗಳೂರು : ಪ್ರಶಾಂತ್ ಮಾಡಾಳ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಅವರ ತಂದೆ, ಶಾಸಕ ವಿರೂಪಾಕ್ಷಪ್ಪ ಮಾಡಾಳ್​ಗೆ ನೋಟಿಸ್ ನೀಡಲು ಲೋಕಾಯುಕ್ತ ಅಧಿಕಾರಿಗಳು ಸನ್ನದ್ಧರಾಗಿದ್ದಾರೆ. ಪುತ್ರನ ಬಂಧನದ ಬಳಿಕ ನೈತಿಕ‌ ಹೊಣೆ ಹೊತ್ತು ಕೆಎಸ್​ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಬಳಿಕ ವಿರೂಪಾಕ್ಷಪ್ಪ ಮಾಡಾಳ್ ಕಾಣಿಸಿಕೊಂಡಿಲ್ಲ. ಹೀಗಾಗಿ, ಸಿಆರ್​ಪಿಸಿ 41(a) ಅಡಿಯಲ್ಲಿ ನೋಟಿಸ್ ನೀಡಲು ಸಿದ್ಧತೆ ನಡೆಸಿರುವುದಾಗಿ ಲೋಕಾಯುಕ್ತ ಮೂಲಗಳು ತಿಳಿಸಿವೆ.

ಲೋಕಾಯುಕ್ತ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ವಿರೂಪಾಕ್ಷಪ್ಪ ಮನೆ, ಎಲ್.ಹೆಚ್ ನಿವಾಸದ 119 ಕೊಠಡಿ, ಕೆಎಸ್​ಡಿಎಲ್ ಕಚೇರಿ ಹಾಗೂ ಚನ್ನಗಿರಿಯಲ್ಲಿರುವ ಅವರ ಮನೆಗೆ ನೋಟಿಸ್​ ನೀಡಲು ಸಿದ್ಧತೆ ನಡೆದಿದೆ. ಇಂದು ಮಧ್ಯಾಹ್ನದ ವೇಳೆಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದ್ದು ಶಾಸಕ ವಿಚಾರಣೆಗೆ ಹಾಜರಾಗುತ್ತಾರಾ? ಎಂಬುದು ಕುತೂಹಲ ‌ಮೂಡಿಸಿದೆ.

ಇದನ್ನೂ ಓದಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತರಿಂದ ಲಕ್ಷಾಂತರ ನಗದು, ಚಿನ್ನಾಭರಣ ಜಪ್ತಿ

ಕೆಎಸ್​ಡಿಎಲ್​ಗೆ ರಾಸಾಯನಿಕ ಪೂರೈಸುವ ಟೆಂಡರ್ ನೀಡಲು 40 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ಪ್ರಶಾಂತ್‌ ಮಾಡಾಳ್‌ರನ್ನು ಮಾರ್ಚ್ 2ರಂದು ಬಂಧಿಸಿದ್ದ ಲೋಕಾಯುಕ್ತ ಅಧಿಕಾರಿಗಳು ಬಳಿಕ ಕೆಎಸ್​ಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಅಧ್ಯಕ್ಷ ವಿರೂಪಾಕ್ಷಪ್ಪ ಮಾಡಾಳ್ ಹಾಗೂ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಶೋಧ ನಡೆಸಿದ್ದರು. ಪರಿಶೀಲನೆ ಸಂದರ್ಭದಲ್ಲಿ ಪ್ರಶಾಂತ್ ಮಾಡಾಳ್ ಮನೆಯಲ್ಲಿ 6 ಕೋಟಿ ರೂ. ನಗದು ಜಪ್ತಿ ಮಾಡಲಾಗಿತ್ತು.

ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಕೇಸ್​ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಆರಗ ಜ್ಞಾನೇಂದ್ರ

ಬ್ಯಾಂಕ್ ಖಾತೆ ಪರಿಶೀಲನೆ: ಪ್ರಕರಣ ಸಂಬಂಧ ಪ್ರಶಾಂತ್ ಮಾಡಾಳ್ ಹಾಗೂ ಐವರನ್ನು ಬಂಧಿಸಲಾಗಿದೆ. ಬಂಧಿತ ಐವರನ್ನೂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಶಾಂತ್, ವಿರೂಪಾಕ್ಷಪ್ಪ ಹಾಗೂ ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ತನಿಖೆ ವೇಳೆ ಯಾವುದೇ ವಹಿವಾಟು ವ್ಯವಹಾರ ನಡೆಯದಂತೆ ಅಧಿಕಾರಿಗಳು ನಿಗಾ ಇಟ್ಟಿದ್ದು, ಈಗ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವ್ಯಕ್ತಿಗಳ ಬ್ಯಾಂಕ್ ಖಾತೆ ಫ್ರೀಜ್ ಮಾಡಲು ಬ್ಯಾಂಕ್​ಗಳಿಗೆ ಪತ್ರ ಬರೆಯಲು ಮುಂದಾಗಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ದಾಳಿ: ಅಪ್ಪ, ಮಗನ ಕೋಟಿ ಕೋಟಿ ಹಣದ ತನಿಖೆ ಚುರುಕು

ಇನ್ನೊಂದೆಡೆ, ಲೋಕಾಯುಕ್ತ ದಾಳಿ ವೇಳೆ ಸಿಕ್ಕಿರುವ ದಾಖಲಾತಿಗಳ ಆಧಾರದ ಮೇಲೆ 50 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಸಿದ್ಧಪಡಿಸಿದ್ದಾರೆ. ಆರು ಕೋಟಿ ಹಣ, ಮೂರು ವರ್ಷದಲ್ಲಿ ಕೆಎಸ್​ಡಿಎಲ್‌ನಲ್ಲಿ ಕೊಟ್ಟ ಟೆಂಡರ್​ಗಳು ಹಾಗೂ ಕೆಎಎಸ್​ಡಿಎಲ್ ಯೂನಿಯನ್ ಶಿವಶಂಕರ್ ಮಾಡಿದ ಆರೋಪಗಳ ವಿಚಾರಣೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಸುಮಾರು 50 ಪ್ರಶ್ನೆಗಳನ್ನು ಸಿದ್ಧಪಡಿಸಿರುವ ಲೋಕಾಯುಕ್ತ ಅಧಿಕಾರಿಗಳು ಮಾಡಾಳ್ ವಿರೂಪಾಕ್ಷಪ್ಪ ಪತ್ತೆಯಾದ ಕೂಡಲೇ ವಿಚಾರಣೆ ಮಾಡಲಿದ್ದಾರೆ.

ಇದನ್ನೂ ಓದಿ: ಕೆಎಸ್​ಡಿಎಲ್ ನಿಗಮದ ಅಧಿಕಾರಿಗಳ ವಿರುದ್ಧ ಒಂದು ತಿಂಗಳ ಹಿಂದೆಯೇ ದೂರು ದಾಖಲು: ತನಿಖೆ ಚುರುಕು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.