ETV Bharat / state

ದೊಡ್ಡಬಳ್ಳಾಪುರ: ಭೂ ದಾಖಲೆಗಳ ಸಹಾಯಕ‌ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ‌ - ಈಟಿವಿ ಭಾರತ ಕನ್ನಡ ನ್ಯೂಸ್

ಚಿಕ್ಕಬಳ್ಳಾಪುರ ವಲಯದ ಲೋಕಾಯುಕ್ತ ಎಸ್ಪಿ ಡಾ.ರಾಮ್ ಅರಸಿದ್ಧಿ ನೇತೃತ್ವದ ತಂಡ ಭೂ ದಾಖಲೆಗಳ ಸಹಾಯಕ‌ ನಿರ್ದೇಶಕರ ಕಚೇರಿ ಮೇಲೆ ರೈಡ್​ ಮಾಡಿದೆ.

Lokayukta raids
ಲೋಕಾಯುಕ್ತ ದಾಳಿ ‌
author img

By ETV Bharat Karnataka Team

Published : Nov 20, 2023, 7:28 PM IST

ದೊಡ್ಡಬಳ್ಳಾಪುರ : ನಗರದ ವಿಭಾಗಾಧಿಕಾರಿ ಕಚೇರಿಯಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ‌‌ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ವಲಯದ ಎಸ್ಪಿ ಡಾ.ರಾಮ್ ಅರಸಿದ್ದಿ, ಡಿವೈಎಸ್ಪಿ ವೀರೇಂದ್ರ ನೇತೃತ್ವದಲ್ಲಿ 15 ಜನರ ತಂಡ ಭೂ ದಾಖಲೆಗಳ ಸಹಾಯಕ‌ ನಿರ್ದೇಶಕರ ಕಚೇರಿ ಮೇಲೆ‌ ಕೇಳಿ ಬಂದ ಆರೋಪಗಳ ಮೇಲೆ ದಾಳಿ ನಡೆಸಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡತಗಳ ತಪಾಸಣೆ ನಡೆಸಿದೆ.

ಕಚೇರಿಯ ಬಾಗಿಲು ಬಂದ್ ಮಾಡಿದ್ದ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ತಪಾಸಣೆ ಮಾಡಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ರೈಡ್​ ಆಗಿರುವ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷೆ ಮಾಡಲಾಗುತ್ತಿದೆ. ದೊಡ್ಡಬಳ್ಳಾಪುರ ಎಡಿಎಲ್​ಆರ್ ಕಚೇರಿಗೆ ಖುದ್ದು ಲೋಕಾಯುಕ್ತ ನ್ಯಾಯಾಧೀಶೆ ಹಾಗೂ ಡೆಪ್ಯುಟಿ ರಿಜಿಸ್ಟ್ರಾರ್ ಅನಿತಾ ಅವರ ನೇತೃತ್ವದಲ್ಲಿ‌ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದರು.

ಲೋಕಾಯುಕ್ತ ದಾಳಿ ವೇಳೆ ಸಾರ್ವಜನಿಕರೊಬ್ಬರು ಜೋರು ದನಿಯಲ್ಲಿ ಅಧಿಕಾರಿಗಳ ವಿಳಂಬ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ಪೋಡಿ ದರಕಾಸ್ತು ಮಾಡಿಸಲು ಅರ್ಜಿ ನೀಡಿ ಎರಡು ವರ್ಷ ಕಳೆದರೂ ಅಧಿಕಾರಿಗಳು ಸ್ಪಂದಿಸಿಲ್ಲ‌ ಎಂದು ಆ ಸಾರ್ವಜನಿಕ ತರಾಟೆಗೆ ತೆಗೆದುಕೊಂಡಿದ್ದಾರೆ. ಆಗ ಡಿವೈಎಸ್ಪಿ ವೀರೇಂದ್ರ ಅವರು ಆ ವ್ಯಕ್ತಿಯನ್ನು ಮನವೊಲಿಸಿ, ಅವರ ಸಮಸ್ಯೆ ಆಲಿಸಿ ತಮ್ಮ ದೂರಿನ ಬಗ್ಗೆ ವಿವರಿಸುವಂತೆ ಕೇಳಿದರು. ಅಲ್ಲದೇ ಅವರನ್ನು ಸಮಾಧಾನ ಕೂಡಾ ಮಾಡಿದರು ಎಂದು ಹೇಳಲಾಗಿದೆ.

ಭೂ ದಾಖಲೆಗಳ ಸಹಾಯಕ ಕಚೇರಿಯಲ್ಲಿನ ಅವ್ಯವಸ್ಥೆ ಕಂಡು ಲೋಕಾಯುಕ್ತ ನ್ಯಾಯಾಧೀಶೆ ಅನಿತಾ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಭೂ ದಾಖಲೆಗಳ ಅಸಮರ್ಪಕ‌ ವಿಲೇವಾರಿಯನ್ನು ಖುದ್ದು ನ್ಯಾಯಾಧೀಶರೇ ಗಮನಿಸಿದರು. ಎಡಿಎಲ್ಆರ್ ಕಚೇರಿ ಶೌಚಾಲಯದ ಖಾಲಿ ಜಾಗದಲ್ಲಿ ಬೇಕಾಬಿಟ್ಟಿ ಜೋಡಿಸಿರುವ ದಾಖಲೆಗಳನ್ನು ಕಂಡು ಅಸಮಾಧಾನ ಹೊರಹಾಕಿದರು.

ತಕ್ಷಣವೇ ಕಡತಗಳ ಮೂಟೆಗಳನ್ನು ತೆರವು ಮಾಡುವಂತೆ ಸೂಚಿಸಿದರು. ನಂತರ ಮಹಿಳಾ ಸಿಬ್ಬಂದಿಯಿಂದ ಶೌಚಾಲಯ ಸ್ವಚ್ಛತೆ ಕುರಿತು‌ ಮಾಹಿತಿ ಪಡೆದ ನ್ಯಾಯಾಧೀಶರು, ಹೆಚ್ಚುವರಿ ಶೌಚಾಲಯ ವ್ಯವಸ್ಥೆ‌ ಮಾಡಿಕೊಳ್ಳುವಂತೆ ಹೇಳಿದರು. ಕಚೇರಿಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ ನೀಡುವ ವೇತನ ಕುರಿತು ಮಾಹಿತಿ ಪಡೆದರು. ಸಾಕಷ್ಟು ಕಡಿತಗಳು ವಿಲೇವಾರಿಗೆ ಬಾಕಿ ಉಳಿದಿದ್ದು, ಅಧಿಕಾರಿಗಳ ವಿವರಣೆಯನ್ನು ಅನಿತಾ ಅವರು ಕೇಳಿದರು.

ಇದನ್ನೂ ಓದಿ : ಮಕ್ಕಳ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರನ್ನಾಗಿ ನಾಗಣ್ಣಗೌಡ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.