ETV Bharat / state

ಪ್ರಶಾಂತ್‌ ಮಾಡಾಳ್ ನಿವಾಸದಲ್ಲಿ 6 ಕೋಟಿ ರೂಪಾಯಿ ಹಣ ಪತ್ತೆ!

ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಹಾಗು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ (ಕೆಎಸ್‌ಡಿಎಲ್) ಅಧ್ಯಕ್ಷ ಮಾಡಾಳ್ ವಿರುಪಾಕ್ಷಪ್ಪನವರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಅವರ ಮನೆಯಲ್ಲಿ ಕಂತೆ ಕಂತೆಯಂತೆ ಹಣ ಸಿಕ್ಕಿದೆ.

lokayukta raids
ಪ್ರಶಾಂತ್ ಮಾಡಾಳ್ ಮನೆಯಲ್ಲಿ ಪತ್ತೆಯಾದ ಕಂತೆ ಕಂತೆ ಹಣ
author img

By

Published : Mar 3, 2023, 9:32 AM IST

Updated : Mar 3, 2023, 11:07 AM IST

ಪ್ರಶಾಂತ್ ಮಾಡಾಳ್ ಮನೆಯಲ್ಲಿ ಪತ್ತೆಯಾದ ಕಂತೆ ಕಂತೆ ಹಣ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್​ಡಿಎಲ್‌) ರಾಸಾಯನಿಕ ಪೂರೈಸುವ ಟೆಂಡರ್ ನೀಡಲು 40 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ಪ್ರಶಾಂತ್‌ ಮಾಡಾಳ್‌ ಅವರನ್ನು ನಿನ್ನೆ ಬಂಧಿಸಿದ್ದ ಲೋಕಾಯುಕ್ತ ಅಧಿಕಾರಿಗಳು ತಡರಾತ್ರಿ ಮಿಂಚಿನ ಕಾರ್ಯಾಚರಣೆ ಕೈಗೊಂಡಿದ್ದರು. ಬೆಂಗಳೂರು ಜಲಮಂಡಳಿಯಲ್ಲಿ ಚೀಫ್ ಅಕೌಂಟೆಂಟ್ ಆಗಿರುವ ಪ್ರಶಾಂತ್ ಮಾಡಾಳ್ ಹಾಗೂ ಕೆಎಸ್​ಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮಹೇಶ್.ಎಂ. ಅವರ ಮನೆಯಲ್ಲಿ ತನಿಖಾಧಿಕಾರಿಗಳು‌ ಶೋಧ ತೀವ್ರಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಶಾಂತ್ ಮಾಡಾಳ್ ಮನೆಯಲ್ಲಿ 6 ಕೋಟಿ ರೂ. ಜಪ್ತಿ ಮಾಡಲಾಗಿದೆ.

ಕೆಎಸ್​ಡಿಎಲ್‌ ಅಧ್ಯಕ್ಷ ಹಾಗೂ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಮಾಡಾಳ್ ಟೆಂಡರ್ ಆಕಾಂಕ್ಷಿಯೊಬ್ಬರಿಂದ 80 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು 40 ಲಕ್ಷ ರೂ ಸ್ವೀಕರಿಸುತ್ತಿದ್ದಾಗ ಕ್ರೆಸೆಂಟ್ ರಸ್ತೆಯ ಅವರ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇಂದು ಬೆಳಗಿನ ಜಾವ 4 ಗಂಟೆವರೆಗೂ ಶೋಧ ನಡೆಸಿರುವ ಅಧಿಕಾರಿಗಳು ಪ್ರಶಾಂತ್ ಮಾಡಾಳ್, ಅವರ ಸಂಬಂಧಿ ಸಿದ್ದೇಶ್, ಅಕೌಂಟೆಂಟ್ ಸುರೇಂದ್ರ, ಹಣ ಕೊಡಲು‌ ಬಂದಿದ್ದ ನಿಕೋಲಸ್ ಹಾಗೂ ಗಂಗಾಧರ್ ಎಂಬಾತನನ್ನು ಬಂಧಿಸಿದ್ದಾರೆ.

14 ದಿನ ನ್ಯಾಯಾಂಗ ಬಂಧನ: ಬಂಧಿತ ಪ್ರಶಾಂತ್ ಮಾಡಾಳ್​ ಸೇರಿ ಐವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಶುಕ್ರವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಪ್ರಶಾಂತ್​ರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ, ಪರಿಶೀಲನೆ ಇನ್ನೂ ಬಾಕಿ ಇರುವ ಹಿನ್ನೆಲೆ ಮತ್ತೆ ಕಸ್ಟಡಿಗೆ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದರು. ಸದ್ಯ ಪ್ರಶಾಂತ್ ಮಾಡಾಳ್ ಸೇರಿ ಐವರಿಗೂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

40 ಲಕ್ಷ ರೂ ಲಂಚ: ನಿನ್ನೆ ಪ್ರಶಾಂತ್ 40 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ದಾಳಿಯ ಬಳಿಕ ಆರೋಪಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ, ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ. ಕರ್ನಾಟಕ ರಾಜ್ಯ ಸಾಬೂನು ಹಾಗೂ ಮಾರ್ಜಕ ಕಚ್ಚಾ ವಸ್ತುಗಳ ಪೂರೈಕೆ ಸಂಬಂಧ ಟೆಂಡರ್ ವಿಚಾರವಾಗಿ 80 ಲಕ್ಷ ರೂ.ಗೆ ಪ್ರಶಾಂತ್ ಬೇಡಿಕೆ ಇಟ್ಟಿದ್ದಾಗಿ ದೂರುದಾರರು ತಿಳಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ದೂರುದಾರರಿಂದ ಹಣ ಪಡೆಯುತ್ತಿದ್ದಾಗ ಪ್ರಶಾಂತ್ ಮೇಲೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದರು.

2017ರಲ್ಲಿ ಕರ್ನಾಟಕ‌ ರೂರಲ್ ಇನ್ಪ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್​​ನಲ್ಲಿ ಇಟ್ಟಿದ್ದ (KIRDL) 55 ಕೋಟಿ ಹಣ ಕಬಳಿಕೆ ಪ್ರಕರಣದಲ್ಲಿಯೂ ಕೂಡ ಈ ಮೊದಲು ಪ್ರಶಾಂತ್ ಆರೋಪಿಯಾಗಿದ್ದರು. ಈ ಸಂಬಂಧ ಪ್ರಶಾಂತ್ ಸೇರಿ‌ ಮೂವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: 40 ಲಕ್ಷ ರೂ ಲಂಚ ಪಡೆಯುವಾಗ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ

Last Updated : Mar 3, 2023, 11:07 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.