ETV Bharat / state

ಬೆಂಗಳೂರು : ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ದಾಸನಪುರದ ಕಂದಾಯ ನಿರೀಕ್ಷಕ ಮತ್ತು ಆಪ್ತನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

lokayuktha-arrested-revenue-inspector-for-bribe-in-bengaluru
ಬೆಂಗಳೂರು : ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ
author img

By ETV Bharat Karnataka Team

Published : Nov 9, 2023, 1:55 PM IST

ಬೆಂಗಳೂರು : ನಗದು ಹಾಗೂ ಚೆಕ್ ರೂಪದಲ್ಲಿ ಲಂಚ ಸ್ವೀಕರಿಸುತ್ತಿದ್ದ ದಾಸನಪುರದ ಕಂದಾಯ ನಿರೀಕ್ಷಕ ಮತ್ತು ಮತ್ತು ಆತನ ಆಪ್ತನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಕಂದಾಯ ನಿರೀಕ್ಷಕನನ್ನು ವಸಂತ್​ ಎಂದು ಗುರುತಿಸಲಾಗಿದೆ. ವಸಂತ್​ 3.5 ಲಕ್ಷ ರೂ. ನಗದು ಹಾಗೂ 4 ಲಕ್ಷ ಚೆಕ್ ರೂಪದಲ್ಲಿ ಪಡೆದಿದ್ದ ಎಂದು ತಿಳಿದುಬಂದಿದೆ.

ಕಂದಾಯ ನಿರೀಕ್ಷಕ ವಸಂತ್​ ಅವರು ಬೆಟ್ಟಸ್ವಾಮಿ ಗೌಡ ಎಂಬುವವರಿಗೆ ಖಾತೆ ಪೋಡಿ ಮಾಡಿ ಕೊಡಲು 28 ಲಕ್ಷ ರೂ ಹಣಕ್ಕೆ ಬೇಡಿಕೆಯಿಟ್ಟಿದ್ದ. ಇದರಲ್ಲಿ ಮೊದಲೇ ಚೆಕ್‍ ರೂಪದಲ್ಲಿ 4 ಲಕ್ಷ ರೂ. ಹಣವನ್ನು ಪಡೆದಿದ್ದ. ಬಳಿಕ ಬುಧವಾರ ಖಾಸಗಿ ಹೋಟೆಲ್‍ನಲ್ಲಿ 3.5 ಲಕ್ಷ ರೂ. ಪಡೆಯುತ್ತಿದ್ದಾಗ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಅಧಿಕಾರಿಗಳು ವಸಂತ್ ಹಾಗೂ ಆತನ ಆಪ್ತನನ್ನು ರೆಡ್‍ಹ್ಯಾಂಡ್ ಆಗಿ ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಯು ಹಣವನ್ನು ಮನೆಯಲ್ಲಿ ಇಟ್ಟಿರುವುದಾಗಿ ಹೇಳಿದ್ದು, ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿ 9 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಪ್ರಕರಣಗಳು- ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ : ಕಳೆದ ಅಕ್ಟೋಬರ್​ 30ರಂದು ಆದಾಯಕ್ಕೂ ಮೀರಿ ಅಧಿಕ ಗಳಿಕೆ, ಅಕ್ರಮ ಆಸ್ತಿ ಸಂಗ್ರಹಣೆ ಆರೋಪದಡಿ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಬೆಂಗಳೂರು ಸೇರಿ ರಾಜ್ಯಾದ್ಯಂತ 17 ಸರ್ಕಾರಿ ಅಧಿಕಾರಿಗಳ ಕಚೇರಿ ಮತ್ತು ಸಂಬಂಧಿಕರ ನಿವಾಸ ಸೇರಿ 90 ಕಡೆಗಳಲ್ಲಿ ದಾಳಿ ಮಾಡಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದರು.

ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಸೇರಿ ಇತರೆಡೆಗಳಲ್ಲಿ ತಡರಾತ್ರಿವರೆಗೆ ತಪಾಸಣೆ ನಡೆಸಿದ ಅಧಿಕಾರಿಗಳು ಲಕ್ಷಾಂತರ ರೂ. ನಗದು, ಚಿನ್ನಾಭರಣ ಸೇರಿ 35.54 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದ್ದರು. ಬೆಂಗಳೂರು, ತುಮಕೂರು, ಮಂಡ್ಯ, ಚಿತ್ರದುರ್ಗ, ಉಡುಪಿ, ಹಾಸನ, ಬಳ್ಳಾರಿ, ರಾಯಚೂರು, ಕಲಬುರಗಿ, ಬೆಳಗಾವಿ ಮತ್ತು ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.

ಬೆಂಗಳೂರಿನ 11 ಕಡೆ ಲೋಕಾ ದಾಳಿ: ಬೆಂಗಳೂರಿನ 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಬಿಬಿಎಂಪಿ ಹೆಗ್ಗನಹಳ್ಳಿ ವಾರ್ಡ್​ನ ಆರ್.ಆರ್. ನಗರ ವಲಯಾಧಿಕಾರಿಗೆ ಸೇರಿದ ಕೆ.ಆರ್‌.ಪುರದಲ್ಲಿನ ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿ ನಡೆಸಿದ್ದರು. ಈ ಹಿಂದೆ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ಇದನ್ನೂ ಓದಿ : ರಾಜ್ಯಾದ್ಯಂತ ವಿವಿಧ ಅಧಿಕಾರಿಗಳಿಗೆ ಲೋಕಾ ಶಾಕ್​: ಬೆಂಗಳೂರು ಸೇರಿ 90 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ತೀವ್ರ ಶೋಧ ಕಾರ್ಯ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.