ETV Bharat / state

ರಾತ್ರಿ ಹೊತ್ತಲ್ಲಿ ಲೌಡ್ ಸ್ಪೀಕರ್ ಬಳಕೆ: ಕೆಎಸ್​ಪಿಸಿಬಿ ವಿರುದ್ಧ ಹೈಕೋರ್ಟ್ ಅಸಮಾಧಾನ - ಅರ್ಜಿದಾರ ವಕೀಲೆ ಸುಮಂಗಲ ಸ್ವಾಮಿ

ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಸುವುದನ್ನು ಪ್ರಶ್ನಿಸಿ ನಗರದ ವಕೀಲೆ ಸುಮಂಗಲ ಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್​.ಓಕ ನೇತೃತ್ವದ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು.

Loud speaker use at night issue
ರಾತ್ರಿಹೊತ್ತಲ್ಲಿ ಲೌಡ್ ಸ್ಪೀಕರ್ ಬಳಕೆ: ಕೆಎಸ್​ಪಿಸಿಬಿಗೆ ಹೈಕೋರ್ಟ್ ಛೀಮಾರಿ
author img

By

Published : Dec 9, 2020, 6:49 PM IST

ಬೆಂಗಳೂರು: ರಾತ್ರಿ ಸಮಯದಲ್ಲಿ ಲೌಡ್ ಸ್ಪೀಕರ್ ಬಳಕೆ ಮಾಡುತ್ತಿರುವುದು ಅಭಿಯೋಜನೆಗೆ ಒಳಪಡಿಸಬಹುದಾದ ಪ್ರಕರಣಗಳಲ್ಲ. ಹೀಗಾಗಿ ಕ್ರಮ ಜರುಗಿಸಲು ಪೊಲೀಸರಿಗೆ ಕೋರಿದ್ದೇವೆ ಎಂದು ಲಿಖಿತ ಹೇಳಿಕೆ ಸಲ್ಲಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಛೀಮಾರಿ ಹಾಕಿದೆ.

ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಸುವುದನ್ನು ಪ್ರಶ್ನಿಸಿ ನಗರದ ವಕೀಲೆ ಸುಮಂಗಲ ಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್​.ಓಕ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಹಿಂದಿನ ವಿಚಾರಣೆ ವೇಳೆ ಶಬ್ಧ ಮಾಲಿನ್ಯ ಉಂಟು ಮಾಡುತ್ತಿರುವವರ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಹೈಕೋರ್ಟ್ ಕೆಎಸ್‌ಪಿಸಿಬಿಗೆ ನಿರ್ದೇಶಿಸಿತ್ತು. ಅದರಂತೆ ಮಂಡಳಿ ಅಧ್ಯಕ್ಷರು ಸಲ್ಲಿಸಿದ್ದ ಲಿಖಿತ ಹೇಳಿಕೆ ಗಮನಿಸಿದ ಪೀಠ, ಅಸಾಮಾಧಾನ ವ್ಯಕ್ತಪಡಿಸಿತು.

ಮಂಡಳಿ ಅಧ್ಯಕ್ಷರು ರಾತ್ರಿ ಹೊತ್ತಲ್ಲಿ ಲೌಡ್ ಸ್ಪೀಕರ್ ಬಳಕೆ ಮಾಡುವುದು ಕಾನೂನು ಕ್ರಮ ಜರುಗಿಸುವಂತಹ ಅಪರಾಧವಲ್ಲ ಎಂದಿದ್ದಾರೆ. ಮಂಡಳಿಯ ಜವಾಬ್ದಾರಿ ಹಾಗೂ ಕಾನೂನಿನ ತಿಳುವಳಿಕೆ ಇಲ್ಲದೆ ಹೀಗೆ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಮಂಡಳಿ ಅಧ್ಯಕ್ಷರು, ಸದಸ್ಯರು ಸೇರಿ ಅಧಿಕಾರಿಗಳೆಲ್ಲರಿಗೂ ಕಾಯ್ದೆಗಳ ಕುರಿತು ತರಗತಿ ನಡೆಸಿ ತರಬೇತಿ ನೀಡಿ ಎಂದು ಪೀಠ ಆಕ್ರೋಶ ವ್ಯಕ್ತಪಡಿಸಿತು. ಅಲ್ಲದೆ ಪರಿಸರ ಸಂರಕ್ಷಣೆಯ ಕಾಯ್ದೆ 15 ಹಾಗೂ 19ರ ಅಡಿ ಮಾಲಿನ್ಯ ಉಂಟುಮಾಡುವವರ ವಿರುದ್ಧ ಕ್ರಮ ಜರುಗಿಸಬಹುದು. ಈ ಅರಿವೇ ಇಲ್ಲದ ಮಂಡಳಿ ಲೌಡ್ ಸ್ಪೀಕರ್ ಬಳಸುತ್ತಿರುವವರ ವಿರುದ್ಧ ಸಿಆರ್‌ಪಿಸಿ ಸೆಕ್ಷನ್ 133 ಅಡಿ ಕ್ರಮ ಜರುಗಿಸುವಂತೆ ಪೊಲೀಸರಿಗೆ ಕೋರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಇದನ್ನೂ ಓದಿ: ಯೋಗೇಶ್​ ಗೌಡ ಕೊಲೆ ಕೇಸ್‌ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಇದೇ ವೇಳೆ ಅರ್ಜಿದಾರ ವಕೀಲೆ ಸುಮಂಗಲ ಸ್ವಾಮಿ ವಾದಿಸಿ, ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಸೀದಿಯಲ್ಲಿ ಈಗಲೂ ರಾತ್ರಿ ಹೊತ್ತಲ್ಲಿ ಲೌಡ್ ಸ್ಪೀಕರ್ ಬಳಕೆಯಾಗುತ್ತಿದೆ ಎಂದು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಲೌಡ್ ಸ್ಪೀಕರ್ ಬಳಸುವುದು ಮೂಲಭೂತ ಹಕ್ಕಲ್ಲ. ಪೊಲೀಸರು ಈ ಹಿಂದೆ ನೀಡಿದ್ದ ಲೈಸನ್ಸ್ ಹಿಂಪಡೆದಿರುವುದಾಗಿ ಹೇಳಿದ್ದಾರೆ. ಈಗಲೂ ಬಳಕೆ ಮಾಡುತ್ತಿದ್ದರೆ, ಆ ಕುರಿತು ಪೊಲೀಸರು ಹಾಗೂ ಕೆಎಸ್‌ಪಿಸಿಬಿ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಡಿ. 22ಕ್ಕೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.