ETV Bharat / state

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಲ್ಪ ಅನುದಾನ ಬಿಡುಗಡೆ! - low grant release from the central government

ರಾಜ್ಯದಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.‌ ಇತ್ತ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಲ್ಪ ಅನುದಾನ ಬಿಡುಗಡೆಯಾಗಿದ್ದು, ಹೆಚ್ಚಿನ ಹಣ ಬಿಡುಗಡೆಗೆ ವಿಳಂಬವಾಗುತ್ತಿದೆ.

Modi, Siddaramaiah
ಮೋದಿ, ಸಿದ್ದರಾಮಯ್ಯ
author img

By

Published : Aug 14, 2023, 6:58 AM IST

ಬೆಂಗಳೂರು : ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳು ಜಾರಿಯಲ್ಲಿವೆ. ಈ ಯೋಜನೆಗಳಿಗೆ ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸರ್ಕಾರ ಅನುದಾನ ಒದಗಿಸುತ್ತದೆ. ಇತ್ತ ರಾಜ್ಯದಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅತ್ತ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದ ಅನುದಾ‌ನ ಬಿಡುಗಡೆ ವಿಳಂಬವಾಗುತ್ತಿದೆ.

ಹೌದು, ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸರ್ಕಾರವೂ ಅನುದಾನ ನೀಡುತ್ತದೆ. ಹಲವು ಪ್ರಮುಖ ಯೋಜನೆಗಳಿಗೆ ಕೇಂದ್ರದ ಹಣ ಬಹುಪಾಲು ಇದೆ. ಆದರೆ, ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಹೋದ ಬಳಿಕ ರಾಜ್ಯದ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ವೇಗಕ್ಕೆ ಬ್ರೇಕ್ ಬಿದ್ದಂತೆ ಕಾಣುತ್ತಿದೆ. ಹೊಸ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿದೆಯಾ ಎಂಬ ಪ್ರಶ್ನೆ ಮೂಡುತ್ತಿದೆ. 2023-24 ಸಾಲಿನ ಆರ್ಥಿಕ ವರ್ಷದಲ್ಲಿ ನಾಲ್ಕು ತಿಂಗಳು ಕಳೆದಿದ್ದು, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಕುಂಠಿತವಾಗಿದೆ.

ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಕುಂಠಿತ: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ನೀಡಿದ ಮಾಹಿತಿಯಂತೆ 2023-24 ಸಾಲಿನಲ್ಲಿ ನಾಲ್ಕು ತಿಂಗಳು ಕಳೆದಿದ್ದು, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಕುಂಠಿತವಾಗಿದೆ. ನಾಲ್ಕು ತಿಂಗಳಲ್ಲಿ ಕೇವಲ 11.13% ಮಾತ್ರ ಪ್ರಗತಿ ಕಂಡಿದ್ದು, ಕಳೆದ ಬಾರಿ ಇದೇ ಅವಧಿಗೆ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ 23% ಆಗಿತ್ತು.

2023-24ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಒಟ್ಟು 36,887.57 ಕೋಟಿ ರೂ. ಅನುದಾನ ಹಂಚಿಕೆಯಾಗಿದೆ. ಈ ಪೈಕಿ ರಾಜ್ಯದ ಪಾಲಿಗೆ ಹಂಚಿಕೆಯಾದ ಅನುದಾನ 18,499.96 ಕೋಟಿ ರೂ. ಹಾಗೂ ಕೇಂದ್ರದಿಂದ ಹಂಚಿಕೆಯಾದ ಅನುದಾನ 18,387.61 ಕೋಟಿ ರೂ. ಸುಮಾರು 29 ವಿವಿಧ ಇಲಾಖೆಗಳಲ್ಲಿ ಹಲವು ಕೇಂದ್ರ ಪುರಸ್ಕೃತ ಯೋಜನೆಗಳು ಜಾರಿಯಲ್ಲಿವೆ. 2022-23 ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಒಟ್ಟು 27,387.95 ಕೋಟಿ ರೂ. ಅನುದಾನ ಹಂಚಿಕೆಯಾಗಿತ್ತು. ಈ ಪೈಕಿ ರಾಜ್ಯ ಸರ್ಕಾರ 14,257.57 ಕೋಟಿ ರೂ. ಅನುದಾನ ಹಂಚಿಕೆ ಮಾಡಿತ್ತು. ಕೇಂದ್ರ ಸರ್ಕಾರ 13,130.38 ಕೋಟಿ ರೂ. ಅನುದಾನ ಹಂಚಿಕೆ ಮಾಡಿತ್ತು.

ಕೇಂದ್ರದಿಂದ ಅತ್ಯಲ್ಪ ಅನುದಾನ ಬಿಡುಗಡೆ: ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೇಂದ್ರದ ಅನುದಾನ ಬಿಡುಗಡೆಗೆ ಬ್ರೇಕ್ ಬಿದ್ದಂತೆ ಕಾಣುತ್ತಿದೆ. ಕೆಡಿಪಿ ಪ್ರಗತಿ ಅಂಕಿ - ಅಂಶದಂತೆ ನಾಲ್ಕು ತಿಂಗಳಲ್ಲಿ ಕೇಂದ್ರ ಸರ್ಕಾರ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತಾನು ಹಂಚಿಕೆ ಮಾಡಿದ 18,499.96 ಕೋಟಿ ರೂ. ಅನುದಾನದ ಪೈಕಿ, ಬಿಡುಗಡೆ ಮಾಡಿದ್ದು ಕೇವಲ 412.32 ಕೋಟಿ ರೂ. ಮಾತ್ರ. ಕೇಂದ್ರದ ಪಾಲಿನಲ್ಲಿ ವೆಚ್ಚ ಆಗಿರುವ ಮೊತ್ತ 1,108.94 ಕೋಟಿ ರೂಪಾಯಿ. ಆದರೆ, ಈ ಪೈಕಿ ಕೇವಲ 412.32 ಕೋಟಿ ರೂ.‌ ಮಾತ್ರ ಬಿಡುಗಡೆ ಮಾಡಿದೆ. ಕಳೆದ ಬಾರಿಗಿಂತ ಈ ಬಾರಿ ವೆಚ್ಚವೂ ಕಡಿಮೆ, ಇತ್ತ ಅನುದಾನ ಬಿಡುಗಡೆಯೂ ಕುಂಠಿತವಾಗಿದೆ.

ರಾಜ್ಯ ಸರ್ಕಾರ ಹಂಚಿಕೆ ಮಾಡಿರುವ 18,499.96 ಕೋಟಿ ರೂ. ಅನುದಾನದ ಪೈಕಿ ನಾಲ್ಕು ತಿಂಗಳಲ್ಲಿ 3,290.74 ಕೋಟಿ ರೂ.‌ಬಿಡುಗಡೆ ಮಾಡಿದೆ. ನಾಲ್ಕು ತಿಂಗಳಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯದ ಪಾಲಿನ ವೆಚ್ಚ ಆಗಿದ್ದು 2,997.22 ಕೋಟಿ ರೂಪಾಯಿ. ಇದರಲ್ಲಿ 3,290.74 ಕೋಟಿ ರೂ. ಬಿಡುಗಡೆ ಮಾಡಿದೆ.

ಇದನ್ನೂ ಓದಿ : ಪಾಲಿಕೆ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಉದ್ದೇಶವೇನೆಂದು ಸ್ಪಷ್ಟಪಡಿಸಬೇಕು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್

2022-23 ಸಾಲಿನಲ್ಲಿ ಇದೇ ನಾಲ್ಕು ತಿಂಗಳ ಅವಧಿಗೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ 4,132.28 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. ಈ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗಾಗಿ ಕೇಂದ್ರದ ವೆಚ್ಚ 3,567.91 ಕೋಟಿ ರೂ. ಆಗಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ ಬಿಜೆಪಿ ಅಧಿಕಾರವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿತ್ತು. ಆದರೆ, ಈ ವರ್ಷ ಕಾಂಗ್ರೆಸ್ ಸರ್ಕಾರದಡಿ ಕೇಂದ್ರ ಸರ್ಕಾರ ಈವರೆಗೆ ಅತ್ಯಲ್ಪ ಅನುದಾನ ಬಿಡುಗಡೆ ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.