ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್) ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ವೇಳೆ ಪೈಲಟ್ ಸಮಯ ಪ್ರಜ್ಞೆಯಿಂದ ಮತ್ತೆ ಕೆಐಎಎಲ್ನಲ್ಲಿ ವಿಮಾನವನ್ನ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ.
ಲುಫ್ತಾನ್ಸಾ ಏರ್ಲೈನ್ಸ್ನ LH755 ವಿಮಾನ ಇಂದು ಬೆಳಗ್ಗೆ 7ಕ್ಕೆ ಬೆಂಗಳೂರಿನ ಕೆಐಎಎಲ್ನಿಂದ ಜರ್ಮನಿಯ ಫ್ರಾಂಕ್ಫರ್ಟ್ ಸಿಟಿಗೆ ಹಾರಾಟ ನಡೆಸಿತ್ತು. ಈ ವೇಳ ಪೈಲಟ್ಗೆ ವಿಮಾನದಲ್ಲಿ ತಾಂತ್ರಿಕ ದೋಷವಿರುವುದು ಗಮನಕ್ಕೆ ಬಂದಿದೆ. ಕೂಡಲೇ ವಿಮಾನವನ್ನು ಮತ್ತೆ ಕೆಐಎಎಲ್ನಲ್ಲಿ ಲ್ಯಾಂಡಿಂಗ್ ಮಾಡಿದ್ದಾರೆ.
ವಿಮಾನದ ವ್ಹೀಲ್ನಲ್ಲಿ ತಾಂತ್ರಿಕ ದೋಷ...
ವಿಮಾನದ ಮುಂದಿನ ವ್ಹೀಲ್ನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆ ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ದಾರೆ. ಬಳಿಕ ಒಂದು ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಟ ನಡೆಸಿತ್ತು. ಪೈಲಟ್ ಸಮಯ ಪ್ರಜ್ಞೆಯಿಂದಾಗಿ ವಿಮಾನವನ್ನು ಸುರಕ್ಷಿತವಾಗಿ ಕೆಐಎಎಲ್ ರನ್ ವೇಯಲ್ಲಿ ಲ್ಯಾಂಡಿಂಗ್ ಮಾಡಿದರು.
ಲುಫ್ತಾನ್ಸಾ ವಿಮಾನದಲ್ಲಿ ಒಟ್ಟು 78 ಜನ ಪ್ರಯಾಣಿಕರಿದ್ದರು. ಪೈಲಟ್ ಸಮಯ ಪ್ರಜ್ಞೆಯಿಂದ ಸಂಭವಿಸಬೇಕಾಗಿದ್ದ ಭಾರಿ ಅನಾಹುತ ತಪ್ಪಿದ್ದು, ಪ್ರಯಾಣಿಕರು ನಿಟ್ಟಿಸಿರು ಬಿಟ್ಟಿದ್ದಾರೆ.