ETV Bharat / state

ಜಾನುವಾರುಗಳಿಗೆ ಚರ್ಮ ಗಂಟು ರೋಗ: ನಿಯಂತ್ರಣಕ್ಕೆ ತಕ್ಷಣ ಲಸಿಕೆ, 13 ಕೋಟಿ ಬಿಡುಗಡೆ.. ಸಿಎಂ ಸೂಚನೆ - cm meeting on disease for cow

ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುವುದನ್ನು ತಡೆಯುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪಶು ಸಂಗೊಪನಾ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಸಿಎಂ ಸೂಚನೆ
ಸಿಎಂ ಸೂಚನೆ
author img

By

Published : Oct 14, 2022, 1:46 PM IST

ಬೆಂಗಳೂರು: ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುವುದನ್ನು ತಡೆಯಲು ತಕ್ಷಣ ರಾಜ್ಯಾದ್ಯಂತ ಜಾನುವಾರುಗಳಿಗೆ ಲಸಿಕೆ ಹಾಕಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸೂಚನೆ ನೀಡಿದ್ದು, ಐಎಹೆಚ್ ಮತ್ತು ವಿಬಿ ಯಿಂದ ತಕ್ಷಣ 15 ಲಕ್ಷ ಲಸಿಕೆ ಖರೀದಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುವುದನ್ನು ತಡೆಯುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪಶು ಸಂಗೊಪನಾ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ವೇಳೆ, 5 ಕೋಟಿ ರೂ.ಗಳನ್ನು ಲಸಿಕೆ ಖರೀದಿಗೆ ತಕ್ಷಣ ಬಿಡುಗಡೆ ಮಾಡುವಂತೆ ಹಾಗೂ 8 ಕೋಟಿ ರೂ. ಇತರ ಔಷಧ ಖರೀದಿಗೆ ಹಣ ಬಿಡುಗಡೆ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದರು.

ಸಿಎಂ ಸೂಚನೆ
ಸಿಎಂ ಸೂಚನೆ

ಸೋಮವಾರದೊಳಗೆ ಎಲ್ಲ ಜಿಲ್ಲೆಗಳಿಗೂ ಲಸಿಕೆ ತಲುಪಿಸಬೇಕು. ಅತಿ ಹೆಚ್ಚು ರೋಗಕ್ಕೆ ತುತ್ತಾಗಿರುವ ಹಾವೇರಿ, ಗದಗ, ಬಳ್ಳಾರಿ, ವಿಜಯನಗರ ಬೆಳಗಾವಿ ಜಿಲ್ಲೆಗಳು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಯುದ್ಧೋಪಾದಿಯಲ್ಲಿ ಲಸಿಕೆ ಕಾರ್ಯ ಕೈಗೊಳ್ಳಲು ಪಶು ಸಂಗೋಪನಾ‌ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಎಂ ಸೂಚನೆ
ಸಿಎಂ ಸೂಚನೆ

ಸಿಬ್ಬಂದಿ ಕೊರತೆ ನೀಗಿಸಲು ಡಿಪ್ಲೊಮಾ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಬೇಕು. ಮೃತಪಟ್ಟ ಜಾನುವಾರುಗಳಿಗೆ ತಕ್ಷಣ ಡಿಬಿಟಿ ಮೂಲಕ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಬೇಕು. ರಾಜ್ಯದ 28 ಜಿಲ್ಲೆಗಳ 160 ತಾಲೂಕುಗಳ 4380 ಗ್ರಾಮಗಳಲ್ಲಿ ರೋಗ ಕಾಣಿಸಿಕೊಂಡಿದೆ. 45,645 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಮರಣ ಹೊಂದಿವೆ. 50 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ಸೂಚಿಸಿದರು.

ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು. ರೋಗಪೀಡಿತ ಜಾನುವಾರುಗಳನ್ನು ಪ್ರತ್ಯೇಕಿಸಲು ಪ್ರತಿ ಗ್ರಾಮದಲ್ಲಿ ವ್ಯವಸ್ಥೆ ಮಾಡಬೇಕು. ಮರಣ ಹೊಂದಿದ ಜಾನುವಾರುಗಳ ಮಾಲೀಕರಿಗೆ ವಿತರಿಸಲು 7 ಜಿಲ್ಲೆಗಳಿಗೆ 2 ಕೋಟಿ ರೂ. ನೀಡಲಾಗಿದ್ದು, 46.15 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಬಾಕಿ ಪರಿಹಾರ ತ್ವರಿತವಾಗಿ ವಿತರಿಸುವಂತೆ ತಿಳಿಸಿ ಹೆಚ್ಚುವರಿಯಾಗಿ 5 ಕೋಟಿ ಬಿಡುಗಡೆ ಮಾಡಲು ಸೂಚಿಸಿದರು.

ಪಶು ಸಂಗೊಪನಾ ಇಲಾಖೆಯ ಅಧಿಕಾರಿಗಳ ಜೊತೆ ಸಭೆ
ಪಶು ಸಂಗೊಪನಾ ಇಲಾಖೆಯ ಅಧಿಕಾರಿಗಳ ಜೊತೆ ಸಭೆ

ರೋಗಪೀಡಿತ ರಾಸುಗಳ ಹಾಲಿನಿಂದ ಮನುಷ್ಯರಿಗೆ ರೋಗ ಹರಡುವುದಿಲ್ಲ. ಈ ಕುರಿತು ಜನರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು, ಲಸಿಕೆ ಪೂರೈಕೆ ಕುರಿತು ಭಾರತ ಸರ್ಕಾರ ಅನುಮೋದಿಸಿದ ಕಂಪನಿಗಳೊಂದಿಗೆ ಮಾತುಕತೆ ನಡೆಸಿ, ಲಸಿಕೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿಗಳಿಗೆ ತಿಳಿಸಿದರು.

ಪಶು ಸಂಗೊಪನಾ ಇಲಾಖೆಯ ಅಧಿಕಾರಿಗಳ ಜೊತೆ ಸಭೆ
ಪಶು ಸಂಗೊಪನಾ ಇಲಾಖೆಯ ಅಧಿಕಾರಿಗಳ ಜೊತೆ ಸಭೆ

ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವರಾದ ಪ್ರಭು ಚೌಹಾಣ್​, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

(ಓದಿ: ಕೊರೊನಾ ನಡುವೆ ರೈತರಿಗೆ ಮತ್ತೊಂದು ಆತಂಕ ಶುರು: ರಾಸುಗಳಿಗೆ ಚರ್ಮಗಂಟು ರೋಗ)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.