ETV Bharat / state

300 ಐಟಿ ಅಧಿಕಾರಿಗಳನ್ನು ಕೈ ಅಭ್ಯರ್ಥಿಗಳ ಹಿಂದೆ ಬಿಟ್ಟಿದ್ದಾರೆ: ಎಂ.ಲಕ್ಷಣ್ ಆರೋಪ

author img

By

Published : Mar 31, 2023, 6:54 PM IST

ನಿನ್ನೆಯಿಂದ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಹಾಕಲಾಗಿರುವ ಅಧಿಕಾರಿಗಳು ಬಿಜೆಪಿ ಪರವಾಗಿ ಮೃದು ಧೋರಣೆ ಹೊಂದಿರುವವರು ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಆರೋಪಿಸಿದ್ದಾರೆ.

KPCC spokesperson M Laxman
ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್

ಬೆಂಗಳೂರು: 300 ಐಟಿ ಅಧಿಕಾರಿಗಳನ್ನು ರಾಜ್ಯಕ್ಕೆ ಕರೆ ತಂದಿದ್ದು, ಕಾಂಗ್ರೆಸ್ ಪಕ್ಷ ಪ್ರಬಲವಾಗಿರುವ 150 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹಿಂದೆ ಇವರನ್ನು ಬಿಟ್ಟಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ಎಂ ಲಕ್ಷ್ಮಣ್ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಆರೋಪಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಎಂ.ಲಕ್ಷಣ್, ನಿನ್ನೆಯಿಂದ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಹಾಕಲಾಗಿರುವ ಅಧಿಕಾರಿಗಳು ಬಿಜೆಪಿ ಪರವಾಗಿ ಮೃದು ಧೋರಣೆ ಹೊಂದಿರುವವರು. ಸಿದ್ದರಾಮಯ್ಯ ಅವರು ಮೊನ್ನೆ ತಮ್ಮ ಊರಿಗೆ ಹೋದರೆ ಅಲ್ಲಿ ಸಭೆ ನಡೆಸಬಾರದು ಎಂದು ಪ್ರಕರಣ ದಾಖಲಿಸಿದ್ದಾರೆ. ಚುನಾವಣಾ ಆಯೋಗ ಪ್ರಚಾರ ಮಾಡಬಾರದು ಎಂದು ನೀತಿ ಸಂಹಿತೆ ಜಾರಿ ಮಾಡಿದೆಯೇ? ಎಂದು ಪ್ರಶ್ನಿಸಿದರು.

ಹುಣಸೂರಿನ ಶಾಸಕರು ನಮ್ಮ ಕ್ಷೇತ್ರಕ್ಕೆ 5 ಕೋಟಿ ಹಣ ಬರುತ್ತಿದೆ ಎಂದು ದೂರು ನೀಡಿದರೂ ಒಬ್ಬರೂ ಪರಿಶೀಲನೆ ಮಾಡಲಿಲ್ಲ. ನಾವು ಒಂದೆರಡು ದಿನಗಳಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ಈಗಾಗಲೇ ಬಿಜೆಪಿ ಬೇರೆ ರಾಜ್ಯಗಳಲ್ಲಿ ಎಟಿಎಂ ಹಣ ಸಾಗಾಟ ವಾಹನ, ಆಂಬುಲೆನ್ಸ್, ಪೊಲೀಸ್ ವಾಹನಗಳಲ್ಲಿ ಹಣ ಸಾಗಿಸಿದ್ದಾರೆ ಎಂದು ಆರೋಪಿಸಿದರು.

ಕೇಂದ್ರದ ಬಿಜೆಪಿ ಸರ್ಕಾರವೇ ಈ ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕಿತ್ತುಹಾಕುವಂತೆ ಪತ್ರ ಬರೆಯುತ್ತಾರೆ, ನೀವು ಅವರು ಮುಂದುವರಿಯಲಿದ್ದಾರೆ ಎಂದು ಪತ್ರ ಬರೆದು ಈ ಸಮುದಾಯಗಳನ್ನು ಯಾಮಾರಿಸುತ್ತಿದ್ದೀರಾ? ಇದೇ ಕಾರಣಕ್ಕೆ ಅವರು ಆಕ್ರೋಶಕೊಂಡಿದ್ದಾರೆ. ಬಿಜೆಪಿಯವರೇ ಗಲಾಟೆ ಮಾಡಿಸಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರು ಯಡಿಯೂರಪ್ಪ ಅವರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಅದೇ ಕಾರಣಕ್ಕೆ ವಿಜಯೇಂದ್ರ ಅವರನ್ನು ವರುಣಾದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ವಿಜಯೇಂದ್ರ ಅವರಲ್ಲ ಯಡಿಯೂರಪ್ಪ ಅವರೇ ಸ್ಪರ್ಧಿಸಿದರೂ ಸಿದ್ದರಾಮಯ್ಯ ಅವರು 1 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದರು.

ನಮಗೆ ಬಂದಿರುವ ಮಾಹಿತ ಪ್ರಕಾರ ಯಡಿಯೂರಪ್ಪ ಅವರನ್ನು ಬ್ಲಾಕ್ ಮೇಲೆ ಮಾಡುವ ಪ್ರಯತ್ನ ಮುಂದುವರಿಸಿದ್ದು, ನಿನ್ನೆ ಅವರ ಮೇಲೆ ಒತ್ತಡ ಹಾಕಿ ಅವರ ಪುತ್ರ ವಿಜಯೇಂದ್ರ ಅವರನ್ನು ವರುಣಾದಲ್ಲಿ ನಿಲ್ಲಿಸಲು ತೀರ್ಮಾನಿಸಿದೆ ಎಂದು ರಮೇಶ್ ಬಾಬು ದೂರಿದರು.

ಯಡಿಯೂರಪ್ಪ ಅವರು ಆರು ತಿಂಗಳ ಮುನ್ನವೇ ಶಿಕಾರಿಪುರದಲ್ಲಿ ವಿಜಯೇಂದ್ರಗೆ ಟಿಕೆಟ್ ನೀಡುವುದಾಗಿ ಹೇಳಿದ್ದರು. ಆದರೆ ಈಗ ವರುಣಾದಲ್ಲಿ ಸ್ಪರ್ಧಿಸುವ ಬಗ್ಗೆ ಒತ್ತಡ ಹಾಕುತ್ತಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿಲ್ಲ. ತಮ್ಮ ಪುತ್ರನಿಗೆ ಶಿಕಾರಿಪುರದಲ್ಲಿ ಟಿಕೆಟ್ ಸಿಗುವ ಬಗ್ಗೆ ಯಡಿಯೂರಪ್ಪ ಅವರಿಗೆ ಆತಂಕ ಇದೆ. ಒಳ ಮೀಸಲಾತಿ ವಿಚಾರದಲ್ಲಿ ಶಿಕಾರಿಪುರದಲ್ಲಿ ಯಾವ ಪರಿಸ್ಥಿತಿ ನಿರ್ಮಿಸಿದ್ದಾರೆ. ಇಂತಹ ಅನೇಕ ತಂತ್ರಗಾರಿಕೆಗಳನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ವಿರೋಧ ಪಕ್ಷಗಳ ಮೇಲೆ ಇಡಿ ಮತ್ತು ಐಟಿ ದಾಳಿ ಸದ್ಯದಲ್ಲೇ ಆರಂಭವಾಗುವ ಸಾಧ್ಯತೆ ಇದೆ. ಬಿಜೆಪಿಯವರು ಏನೇ ಮಾಡಿದರೂ ರಾಜ್ಯದ ಜನರ ಮನಸ್ಸು ಬದಲಿಸಲು ಆಗುವುದಿಲ್ಲ ಎಂದರು.

ಇದನ್ನೂ ಓದಿ:ಶಶಿಕಲಾ ಜೊಲ್ಲೆ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ​ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.