ETV Bharat / state

ಮಾಡಾಳ್ ವಿರೂಪಾಕ್ಷಪ್ಪ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗುವ ಸಾಧ್ಯತೆ

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನಿನ್ನೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದ್ದು ಇಂದು ಲೋಕಾಯುಕ್ತ ತನಿಖಾಧಿಕಾರಿಗಳ ಮುಂದೆ ಹಾಜರಾಗುವ ಸಾಧ್ಯತೆಯಿದೆ.

MLA Modal Virupakshappa
ಶಾಸಕ ಮಾಡಾಳ್ ವಿರೂಪಾಕ್ಷಪ್ಪ
author img

By

Published : Mar 8, 2023, 10:39 AM IST

Updated : Mar 8, 2023, 10:55 AM IST

ಬೆಂಗಳೂರು : ಲಂಚ ಸ್ವೀಕಾರ ಪ್ರಕರಣದಲ್ಲಿ ಸಿಲುಕಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಇಂದು ಲೋಕಾಯುಕ್ತ ತನಿಖಾಧಿಕಾರಿಗಳ ಮುಂದೆ ಹಾಜರಾಗುವ ಸಾಧ್ಯತೆ ಇದೆ. ನಿನ್ನೆ ಶಾಸಕರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್‌ ಆದೇಶದ ಪ್ರತಿ ಕೈ ಸೇರಿದ 48 ಗಂಟೆಗಳೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಶಾಸಕರಿಗೆ ಸೂಚಿಸಿದ್ದು, ಯಾವುದೇ ಕ್ಷಣದಲ್ಲಿಯೂ ವಿರೂಪಾಕ್ಷಪ್ಪ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಾಡಾಳ್ ವಿರೂಪಾಕ್ಷಪ್ಪರಿಂದ ಸ್ಪಷ್ಟನೆ ಪಡೆಯಲು ಲೋಕಾಯುಕ್ತ ಅಧಿಕಾರಿಗಳು ಕೆಲವು ಪ್ರಶ್ನೆಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ. ಬೆಂಗಳೂರು ಜಲಮಂಡಳಿ ಅಧಿಕಾರಿಯಾಗಿರುವ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ಅವರಿಗೂ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್​ಡಿಎಲ್) ಗೂ ಏನು ಸಂಬಂಧ?, ಕೆಎಸ್​ಡಿಎಲ್ ವಿಚಾರವಾಗಿ ಹಣ ಪಡೆಯುತ್ತಿರುವುದು ನಿಮಗೆ ಗೊತ್ತಿರಲಿಲ್ಲವೇ? ಮನೆಯಲ್ಲಿ ಸಿಕ್ಕ 6 ಕೋಟಿ ರೂಪಾಯಿ ಮೂಲವೇನು?, ಅಡಿಕೆಯಿಂದ ಬಂದ ಹಣವಾಗಿದ್ದರೆ ಅದಕ್ಕೆ ಸೂಕ್ತ ದಾಖಲೆಗಳೇನು? ಎಂಬೆಲ್ಲ ಪ್ರಶ್ನೆಗಳಿಗೆ ಮಾಡಾಳ್ ವಿರೂಪಾಕ್ಷಪ್ಪ ಉತ್ತರಿಸಬೇಕಿದೆ. ಇದನ್ನು ಹೊರತುಪಡಿಸಿ ದೂರುದಾರರು ಲೋಕಾಯುಕ್ತಗೆ ನೀಡಿರುವ ಸಾಕ್ಷಿಗಳೂ ಸಹ ಮಾಡಾಳ್‌ ಅವರಿಗೆ ಕಂಟಕವಾಗುವ ಸಾಧ್ಯತೆ ಇದೆ.

ನಿನ್ನೆ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ನೀಡಿದೆ. ಆದೇಶದ ಪ್ರತಿ ಸಿಕ್ಕ 48 ಗಂಟೆಗಳಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಐದು ಲಕ್ಷ ರೂಪಾಯಿಗಳ ಬಾಂಡ್ ನೀಡಬೇಕು. ಸಾಕ್ಷ್ಯಾಧಾರಗಳ ನಾಶಕ್ಕೆ ಮುಂದಾಗಬಾರದು ಎಂಬ ಷರತ್ತುಗಳನ್ನು ವಿಧಿಸಿದೆ.

ಪ್ರಕರಣದ ಹಿನ್ನೆಲೆ ಹೀಗಿದೆ..: ದಾವಣಗೆರೆಯ ಚನ್ನಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್​ಡಿಎ​ಲ್​​​ನ ಅಧ್ಯಕ್ಷರಾಗಿದ್ದರು. ಕೆಎಸ್‌ಡಿಎಲ್‌ಗೆ ರಾಸಾಯನಿಕ ಕಚ್ಚಾವಸ್ತುಗಳ ಪೂರೈಕೆಗಾಗಿ ಗುತ್ತಿಗೆ ಪಡೆದಿದ್ದ ಗುದ್ದಿಗೆದಾರರಿಗೆ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಗುರುತರ ಆರೋಪವನ್ನು ಇವರು ಎದುರಿಸುತ್ತಿದ್ದಾರೆ. ಇದೇ ಪ್ರಕರಣದಲ್ಲಿ ಇವರ ಮಗ BWSSBಯಲ್ಲಿ ಅಧಿಕಾರಿಯಾಗಿರುವ ಮಾಡಾಳ್​ ಪ್ರಶಾಂತ್​ ತಮ್ಮ ಕಚೇರಿಯಲ್ಲೇ 40 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ್ದರು.

ಇದಾದ ನಂತರ ವಿರೂಪಾಕ್ಷಪ್ಪ ಮತ್ತು ಪುತ್ರನ ಬೆಂಗಳೂರಿನ ಕಛೇರಿಗಳು, ಮನೆಗಳು ಹಾಗೂ ಚನ್ನಗಿರಿಯ ಮನೆಗಳ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತರು ಅಪಾರ ಪ್ರಮಾಣದ ನಗದು ಜಪ್ತಿ ಮಾಡಿ ತನಿಖೆ ಮುಂದುವರೆಸಿದ್ದರು. ಈ ಎಲ್ಲ ಬೆಳವಣೆಗೆಗಳ ಮಧ್ಯೆ ಕೆಎಸ್​ಡಿಎಲ್​ ಅಧ್ಯಕ್ಷ ಸ್ಥಾನಕ್ಕೆ ಮಾಡಳ್​ ವಿರೂಪಾಕ್ಷಪ್ಪ ರಾಜೀನಾಮೆ ಸಲ್ಲಿಸಿದ್ದರು. ನಿನ್ನೆ ಕೋರ್ಟ್‌ ಶಾಸಕರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಇಂದು ಶಾಸಕರು ಲೋಕಾಯುಕ್ತ ತನಿಖಾಧಿಕಾರಿಗಳ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಂಡುಬಂದಿದೆ.

ಇದನ್ನೂ ಓದಿ :ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಬೆಂಗಳೂರು, ದಾವಣಗೆರೆಯಲ್ಲಿ ಪೋಸ್ಟರ್ ಅಭಿಯಾನ

Last Updated : Mar 8, 2023, 10:55 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.