ETV Bharat / state

ಲಂಚ ಪ್ರಕರಣ : ಪರಪ್ಪನ ಅಗ್ರಹಾರದಿಂದ ಮಾಡಾಳ್ ವಿರೂಪಾಕ್ಷಪ್ಪ ಬಿಡುಗಡೆ

ಲಂಚ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ.

madal-virupakshappa-is-released-from-parappana-agrahara
ಲಂಚ ಪ್ರಕರಣ : ಪರಪ್ಪನ ಅಗ್ರಹಾರದಿಂದ ಮಾಡಾಳ್ ವಿರೂಪಾಕ್ಷಪ್ಪ ಬಿಡುಗಡೆ
author img

By

Published : Apr 15, 2023, 10:55 PM IST

Updated : Apr 15, 2023, 11:03 PM IST

ಪರಪ್ಪನ ಅಗ್ರಹಾರದಿಂದ ಮಾಡಾಳ್ ವಿರೂಪಾಕ್ಷಪ್ಪ ಬಿಡುಗಡೆ

ಬೆಂಗಳೂರು : ಲಂಚ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಅವರು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ಶನಿವಾರ ಬೆಳಗ್ಗೆ ಮಾಡಾಳ್​ ವಿರೂಪಾಕ್ಷಪ್ಪ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶವನ್ನು ಹೊರಡಿಸಿತ್ತು. ಈ ಬೆನ್ನಲ್ಲೇ ಮಾಡಾಳ್​ ವಿರೂಪಾಕ್ಷಪ್ಪ ಅವರು ಬಿಡುಗಡೆಯಾಗಿದ್ದಾರೆ.

ಪ್ರತಿನಿಧಿ ನ್ಯಾಯಾಲಯವು ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯವು ಮಾಡಾಳ್​​ಗೆ, 5 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಮತ್ತು ಮೂರು ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗುವಂತೆ ತಿಳಿಸಿತ್ತು. ಜೊತೆಗೆ ತನಿಖಾಧಿಕಾರಿಗಳ ವಶಕ್ಕೆ ಪಾಸ್‌ಪೋರ್ಟ್ ನೀಡಬೇಕು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ಭೇಟಿ ನೀಡುವಂತಿಲ್ಲ, ಸಾಕ್ಷ್ಯಾಧಾರ ನಾಶಪಡಿಸಲು ಯತ್ನಿಸುವಂತಿಲ್ಲ ಎಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿತ್ತು. ಕಳೆದ ಮಾರ್ಚ್​ 27ರಂದು ಮಾಡಾಳು ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ : ಬಿಜೆಪಿ ಟಿಕೆಟ್​ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಮಾಡಾಳ್ ಪುತ್ರ ಮಲ್ಲಿಕಾರ್ಜುನ ಕಣಕ್ಕೆ?

ಪ್ರಕರಣದ ಹಿನ್ನೆಲೆ : ಚನ್ನಗಿರಿ ಕ್ಷೇತ್ರ ಶಾಸಕರೂ ಆಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರು ಕೆಎಸ್‌ಡಿಎಲ್‌ನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸಂಸ್ಥೆಗೆ ರಾಸಾಯನಿಕಗಳನ್ನು ಪೂರೈಸುವ ಗುತ್ತಿಗೆಯನ್ನು ಪಡೆದಿದ್ದ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ಲಂಚಕ್ಕೆ ಭೇಟಿ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಅಲ್ಲದೆ ಗುತ್ತಿಗೆದಾರರಿಗೆ 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪವೂ ಇವರ ಮೇಲೆ ಕೇಳಿ ಬಂದಿತ್ತು. ಈ ಲಂಚದ ಭಾಗವಾಗಿ 40 ಲಕ್ಷ ರೂಪಾಯಿಯನ್ನು ಮಾಡಾಳ್ ವಿರುಪಾಕ್ಷಪ್ಪ ಅವರ ಮಗ ಮಾಡಾಳ್ ಪ್ರಶಾಂತ್ ಮಾಡಾಳ್​​ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಬಳಿಕ ಹಣವನ್ನು ವಶಕ್ಕೆ ಪಡೆದು ಪ್ರಶಾಂತ್ ಅವರನ್ನು ಬಂಧಿಸಿದ್ದರು.

ಬಳಿಕ ವಿರುಪಾಕ್ಷಪ್ಪ ಮತ್ತು ಅವರ ಮಗನ ಬೆಂಗಳೂರಿನ ಕಚೇರಿಗಳು ಹಾಗೂ ಮನೆ ಮೇಲೆ ಜೊತೆಗೆ ಚನ್ನಗಿರಿಯ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಕೋಟ್ಯಂತರ ರೂಪಾಯಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದರು.

ಬಿಡುಗಡೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಡಾಳ್ ವಿರೂಪಾಕ್ಷಪ್ಪ, ಆರೋಪದಿಂದ ಮುಕ್ತನಾಗುವ ಭರವಸೆ ಇದೆ.ನಮ್ಮ ನ್ಯಾಯಾಂಗದ ಬಗ್ಗೆ ವಿಶ್ವಾಸ ಇದೆ ಎಂದು ಹೇಳಿದರು. ಮುಂದಿನ ರಾಜಕೀಯ ‌ನಡೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ನಾಲ್ಕು ಗೋಡೆಗಳ ನಡುವೆ ಇದ್ದೆ. ಅಲ್ಲಿ ಟಿವಿ ಪತ್ರಿಕೆ ಇರಲಿಲ್ಲ. ರಾಜಕಾರಣದಲ್ಲಿ ಏನು ನಡೆಯುತ್ತಿದೆ ಎಂಬುದು ನನಗೆ ತಿಳಿದಿಲ್ಲ. ಮನೆಗೆ ಹೋದ ಬಳಿಕ ಮಾಹಿತಿ ಪಡೆದು ಮುಂದಿನ ರಾಜಕೀಯ ನಡೆ ತಿಳಿಸುತ್ತೇನೆ. ಸದ್ಯ ನಾನು ಏನನ್ನು ಹೇಳುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ಇದನ್ನೂ ಓದಿ :ಲಂಚ ಪ್ರಕರಣ: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

Last Updated : Apr 15, 2023, 11:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.