ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕ (ಒಬಿಸಿ)ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ.
![ಓಬಿಸಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಧು ಬಂಗಾರಪ್ಪ ನೇಮಕ](https://etvbharatimages.akamaized.net/etvbharat/prod-images/kn-bng-07-madhu-bangarappa-nemaka-script-7208077_14092022215355_1409f_1663172635_1057.jpg)
2021ರ ಜುಲೈ ತಿಂಗಳಲ್ಲಿ ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಧು ಬಂಗಾರಪ್ಪಗೆ ಪಕ್ಷದಲ್ಲೀಗ ಪ್ರಮುಖ ಸ್ಥಾನಮಾನ ಲಭಿಸಿದೆ. ಎಐಸಿಸಿಯ ಒಬಿಸಿ ಘಟಕದ ಅಧ್ಯಕ್ಷ ಕ್ಯಾಪ್ಟನ್ ಅಜಯ್ ಸಿಂಗ್ ಯಾದವ್ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಸೊರಬ ಕ್ಷೇತ್ರದ ಮಾಜಿ ಶಾಸಕರಾಗಿರುವ ಮಧು ಬಂಗಾರಪ್ಪ ಕಳೆದ ಚುನಾವಣೆಯಲ್ಲಿ ತಮ್ಮ ಸಹೋದರ ಕುಮಾರ ಬಂಗಾರಪ್ಪ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು.
ಜೆಡಿಎಸ್ ಪಕ್ಷದಲ್ಲಿ ತನಗೆ ಪ್ರಾಧಾನ್ಯತೆ ಸಿಕ್ಕಿಲ್ಲ ಎಂಬ ಕಾರಣ ನೀಡಿ ಪಕ್ಷ ತೊರೆದಿದ್ದ ಇವರಿಗೀಗ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಸ್ಥಾನ ಸಿಕ್ಕಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಇತ್ತೀಚೆಗಷ್ಟೇ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿ ನಾರಾಯಣ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಈಗ ಹೊಸ ನೇಮಕವಾಗಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ಭೇಟಿ ಮಾಡಿದ ಮಧು ಬಂಗಾರಪ್ಪ.. ಪಕ್ಷ ಬಲವರ್ಧನೆ ಬಗ್ಗೆ ಮಾತುಕತೆ