ETV Bharat / state

ಕಾಂಗ್ರೆಸ್ ಸೇರಲು ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಲಿದ್ದಾರೆ ಮಧು ಬಂಗಾರಪ್ಪ

author img

By

Published : Mar 11, 2021, 9:03 AM IST

ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನ ಕಳೆದುಕೊಂಡು ಜೆಡಿಎಸ್​​ನಲ್ಲಿ ಕೇವಲ ನೆಪಮಾತ್ರದ ನಾಯಕರಾಗಿ ಮಾತ್ರ ಉಳಿದುಕೊಂಡಿರುವ ಮಧು ಬಂಗಾರಪ್ಪ ಕೊನೆಗೂ ತೆನೆ ಇಳಿಸಲು ಸಜ್ಜಾಗಿದ್ದಾರೆ. ಇವರನ್ನ ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಅವರ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿಯನ್ನು ಇತ್ತೀಚೆಗೆ ನೇಮಕ ಮಾಡಲಾಗಿತ್ತು. ಇದರಿಂದ ಇನ್ನಷ್ಟು ಬೇಸರಗೊಂಡಿರುವ ಅವರು ಪಕ್ಷ ತ್ಯಜಿಸಲು ಮುಂದಾಗಿದ್ದಾರೆ.

madhu-bangarappa-to-meet-siddaramaiah-today
ಕಾಂಗ್ರೆಸ್ ಸೇರಲು ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಲಿದ್ದಾರೆ ಮಧುಬಂಗಾರಪ್ಪ

ಬೆಂಗಳೂರು: ಜೆಡಿಎಸ್​ನಿಂದ ಹೊರಗೆ ಕಾಲಿಟ್ಟಿರುವ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸಂಬಂಧ ಇಂದು ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನಿವಾಸಕ್ಕೆ ಆಗಮಿಸುವ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸಂಬಂಧ ಇನ್ನೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಕಳೆದ ಕೆಲ ತಿಂಗಳಿಂದ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ದಿ. ಎಸ್.ಬಂಗಾರಪ್ಪ ಅವರ ರಾಜಕೀಯ ಉತ್ತರಾಧಿಕಾರಿ ಎಂದೇ ಪ್ರತಿಬಿಂಬಿತರಾಗಿರುವ ಮಧುಬಂಗಾರಪ್ಪ ಅವರ ಸೇರ್ಪಡೆ ಮಲೆನಾಡು, ಕರಾವಳಿ‌ ಕರ್ನಾಟಕ ಭಾಗಗಳಲ್ಲಿ 'ಕೈ'ಗೆ ಶಕ್ತಿ ತುಂಬಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಹ ಇವರನ್ನು ಪಕ್ಷಕ್ಕೆ ಕರೆಸಿಕೊಳ್ಳಲು ಉತ್ಸುಕರಾಗಿದ್ದು ಇಂದಿನ ಭೇಟಿಯ ನಂತರ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ದಿನಾಂಕ ನಿಗದಿ ಆಗುವ ಸಾಧ್ಯತೆ ಇದೆ.

ಜೆಡಿಎಸ್​ನಿಂದ ದೂರ:

ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನ ಕಳೆದುಕೊಂಡು ಜೆಡಿಎಸ್​​ನಲ್ಲಿ ಕೇವಲ ನೆಪಮಾತ್ರದ ನಾಯಕರಾಗಿ ಮಾತ್ರ ಉಳಿದುಕೊಂಡಿರುವ ಮಧು ಬಂಗಾರಪ್ಪ ಕೊನೆಗೂ ತೆನೆ ಇಳಿಸಲು ಸಜ್ಜಾಗಿದ್ದಾರೆ. ಇವರನ್ನ ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಅವರ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿಯನ್ನು ಇತ್ತೀಚೆಗೆ ನೇಮಕ ಮಾಡಲಾಗಿತ್ತು. ಇದರಿಂದ ಇನ್ನಷ್ಟು ಬೇಸರಗೊಂಡಿರುವ ಅವರು ಪಕ್ಷ ತ್ಯಜಿಸಲು ಮುಂದಾಗಿದ್ದಾರೆ. ತಂದೆ ಹಾಗೂ ಮಾಜಿ ಸಿಎಂ ಆಗಿದ್ದ ಎಸ್ ಬಂಗಾರಪ್ಪ ಅವರಿಗೆ ರಾಜಕೀಯದಲ್ಲಿ ಸಾಕಷ್ಟು ಬೆಳೆಯುವ ಅವಕಾಶ ಕಲ್ಪಿಸಿದ್ದ ಕಾಂಗ್ರೆಸ್ ಪಕ್ಷದತ್ತ ಮಧುಬಂಗಾರಪ್ಪ ಮುಖ ಮಾಡಿದ್ದು, ಇಲ್ಲಿಯೇ ತಮ್ಮ ಮುಂದಿನ ರಾಜಕೀಯ ನೆಲೆ ಕಂಡುಕೊಳ್ಳಲು ತೀರ್ಮಾನಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ ಮತ್ತೊಮ್ಮೆ ರಾಜಕೀಯ ನೆಲೆ ಕಂಡುಕೊಳ್ಳುವ ಹಾಗೂ ಬಿಜೆಪಿ ಸೇರ್ಪಡೆಯಾಗಿ ಶಾಸಕರಾಗಿರುವ ಸೋದರ ಕುಮಾರ್ ಬಂಗಾರಪ್ಪ ವಿರುದ್ಧ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪ್ರಬಲ ಪ್ರತಿಸ್ಪರ್ಧಿಯಾಗಲು ಅನಿವಾರ್ಯವಾಗಿ ರಾಷ್ಟ್ರೀಯ ಪಕ್ಷವೊಂದರ ಕದ ತಟ್ಟಬೇಕಾಗಿದೆ. ಈಗಾಗಲೇ ಬಿಜೆಪಿಯಲ್ಲಿ ನೆಲೆಗೊಂಡಿರುವ ಕುಮಾರ್ ಬಂಗಾರಪ್ಪ ಜೊತೆ ವೈಯಕ್ತಿಕವಾಗಿ ಸಂಬಂಧ ಹಳಸಿದೆ. ಈ ಹಿನ್ನೆಲೆ ಜೆಡಿಎಸ್​​ನಲ್ಲಿ ಭವಿಷ್ಯ ಹುಡುಕಿಕೊಳ್ಳಲಾಗದೆ, ಮುಂದಿನ ಚುನಾವಣೆ ಹೊತ್ತಿಗೆ ಸುಭದ್ರ ನೆಲೆ ಕಂಡುಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ.

ಡಿಕೆಶಿ ಭೇಟಿ ಮಾಡಿದ್ದ ಮಧುಬಂಗಾರಪ್ಪ:

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಜೆಡಿಎಸ್ ನಾಯಕ ಮಧು ಬಂಗಾರಪ್ಪ ಸುದೀರ್ಘ ಚರ್ಚೆ ನಡೆಸಿದ್ದರು. ಡಿಕೆಶಿ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ತೊಡಗಿದ್ದ ಸಂದರ್ಭದಲ್ಲಿಯೇ ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿದ ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸಂಬಂಧ ಡಿಕೆಶಿ ಜೊತೆ ಚರ್ಚೆ ಮಾಡಿದ್ದರು.

ಲೋಕಸಭಾ ಚುನಾವಣೆ ಬಳಿಕ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಧು ಬಂಗಾರಪ್ಪ ಕೊನೆಗೂ ಕಾಂಗ್ರೆಸ್ ಪಕ್ಷದಲ್ಲಿ ನೆಲೆಕಂಡುಕೊಳ್ಳಲು ಮುಂದಾಗಿದ್ದು ಮಾಜಿ ಸಿಎಂ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಇಂದು ಮಹತ್ವದ ಮಾತುಕತೆ ನಡೆಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.