ಬೆಂಗಳೂರು: ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ಹಿನ್ನೆಲೆ ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ಶಾಸಕರು ದೇವನಹಳ್ಳಿ ಸಮೀಪದ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಕಾಂಗ್ರೆಸ್ ಶಾಸಕರ ರೆಸಾರ್ಟ್ ವಾಸ್ತವ್ಯ ಮುಂದುವರೆದಿದ್ದು, ಜ್ಯೋತಿರಾದಿತ್ಯ ಸಿಂಧಿಯಾ ಇಂದು ಬಿಜೆಪಿ ಸೇರ್ಪಡೆ ಹಿನ್ನೆಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಬಳಿಯ ಪ್ರೆಸ್ಟೀಜ್ ಗಾಲ್ಪ್ ಶೈರ್ ರೆಸಾರ್ಟ್ನಲ್ಲಿರೋ ಶಾಸಕರ ಮುಂದಿನ ಬೆಳವಣಿಗೆ ಗೊತ್ತಾಗಲಿದೆ.
ನಿನ್ನೆ ಸಂಜೆಯಿಂದ ತಡರಾತ್ರಿವರೆಗೂ ಹೋಳಿ ಮತ್ತು ಪಾರ್ಟಿ ಮಾಡಿ ಫುಲ್ ರಿಲ್ಯಾಕ್ಸ್ ಮೂಡನಲ್ಲಿರೋ ಶಾಸಕರು ಇಂದು ಎಂದಿನಂತೆ ರೆಸಾರ್ಟ್ನಲ್ಲಿ ವಾಕಿಂಗ್, ಜಾಗಿಂಗ್ ಮಾಡಿ ಬೆಳಗಿನ ಉಪಹಾರ ಮುಗಿಸಿ ಟಿವಿ ಮುಂದೆ ಕುಳಿತು ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆ ಗಮನಿಸುತ್ತಿದ್ದಾರೆ.
ಮಧ್ಯಪ್ರದೇಶದ 17 ಜನ ಶಾಸಕರ ತಂಡ ತಂಗಿರುವ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.