ETV Bharat / state

ಭಿಕ್ಷಾಟನೆಗೆ ಮಕ್ಕಳ ಬಳಕೆ ಹಿಂದೆ ಮಾಫಿಯಾ ಶಂಕೆ : ಹೈಕೋರ್ಟ್​ಗೆ ವರದಿ ಸಲ್ಲಿಕೆ - ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ

720 ಮಕ್ಕಳ ಪೈಕಿ, 492 ಮಕ್ಕಳು ಹತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನವರಿದ್ದಾರೆ. 219 ಮಕ್ಕಳು ಪೋಷಕರ ಕಷ್ಟಕ್ಕೆ ನೆರವಾಗಲು ಆಟಿಕೆ ಮಾರಾಟ ಹಾಗೂ ಭಿಕ್ಷಾಟನೆಯಲ್ಲಿ ತೊಡಗಿದ್ದರೆ, 76 ಮಕ್ಕಳು ತಾಯಂದಿರೊಂದಿಗೆ ಆಟಿಕೆ ಮಾರಾಟದಲ್ಲಿ ತೊಡಗಿದ್ದಾರೆ..

High Court
ಹೈಕೋರ್ಟ್​ಗೆ ವರದಿ ಸಲ್ಲಿಕೆ
author img

By

Published : Apr 21, 2021, 9:48 PM IST

ಬೆಂಗಳೂರು : ನಗರದ ರಸ್ತೆ ಬದಿ, ಸಿಗ್ನಲ್‌ಗಳಲ್ಲಿ ಆಟಿಕೆ ಮಾರಾಟ ಮಾಡುತ್ತಿರುವ 720 ಮಕ್ಕಳನ್ನು ಗುರುತಿಸಲಾಗಿದೆ. ಇವರಲ್ಲಿ 27 ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿದ್ದಾರೆ. ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡಿರುವುದರ ಹಿಂದೆ ಮಾಫಿಯಾ ಕೆಲಸ ಮಾಡುತ್ತಿರುವ ಸಾಧ್ಯತೆ ಇದೆ ಎಂದು ಹೈಕೋರ್ಟ್‌ಗೆ ವರದಿ ನೀಡಲಾಗಿದೆ.

ಓದಿ: ರಸ್ತೆ ಬದಿ ಆಟಿಕೆ ಮಾರುವ ಮಕ್ಕಳಿಗೆ ಬಸ್​​ಗಳಲ್ಲಿ ಶಾಲೆ: ಹೈಕೋರ್ಟ್​​ಗೆ ಬಿಬಿಎಂಪಿ ಮಾಹಿತಿ

ನಗರದ ರಸ್ತೆ ಬದಿಗಳಲ್ಲಿ ಹಾಗೂ ಸಿಗ್ನಲ್‌ಗಳಲ್ಲಿ ಆಟಿಕೆ ಮಾರಾಟ ಮಾಡುತ್ತಿರುವ ಹಾಗೂ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿರುವ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ವರದಿ ಸಲ್ಲಿಸಲಾಗಿದೆ.

ಶಾಲೆಯಿಂದ ದೂರ ಉಳಿದು, ಆಟಿಕೆ ಮಾರಾಟದಲ್ಲಿ ಹಾಗೂ ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಗುರುತಿಸುವಂತೆ ಹೈಕೋರ್ಟ್ ನಿರ್ದೇಶಿಸಿತ್ತು. ಅದರಂತೆ ಎನ್‌ಜಿಒಗಳ ಸಹಕಾರದೊಂದಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ನಡೆಸಿದ ಸಮೀಕ್ಷೆಯಲ್ಲಿ ಬಿಬಿಎಂಪಿಯ 8 ವಲಯಗಳಲ್ಲಿ 720 ಮಕ್ಕಳು ಭಿಕ್ಷಾಟನೆ ಮತ್ತು ಆಟಿಕೆ ಸಾಮಾನುಗಳ ಮಾರಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

720 ಮಕ್ಕಳ ಪೈಕಿ, 492 ಮಕ್ಕಳು ಹತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನವರಿದ್ದಾರೆ. 219 ಮಕ್ಕಳು ಪೋಷಕರ ಕಷ್ಟಕ್ಕೆ ನೆರವಾಗಲು ಆಟಿಕೆ ಮಾರಾಟ ಹಾಗೂ ಭಿಕ್ಷಾಟನೆಯಲ್ಲಿ ತೊಡಗಿದ್ದರೆ, 76 ಮಕ್ಕಳು ತಾಯಂದಿರೊಂದಿಗೆ ಆಟಿಕೆ ಮಾರಾಟದಲ್ಲಿ ತೊಡಗಿದ್ದಾರೆ.

ವಿವಿಧ ಭಾಷೆ ಮಾತನಾಡುವ 27 ಮಕ್ಕಳು ಪೂರ್ಣ ಪ್ರಮಾಣದಲ್ಲಿ ಭಿಕ್ಷಾಟನೆಯಲ್ಲಿ ತೊಡಗಿರುವುದು ಕಂಡು ಬಂದಿದೆ. ಇವರನ್ನು ಮಾಫಿಯಾ ನಿಯಂತ್ರಣ ಮಾಡುತ್ತಿರುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಶಂಕೆ ವ್ಯಕ್ತಪಡಿಸಲಾಗಿದೆ. ಅಲ್ಲದೇ, ಈ ಮಕ್ಕಳನ್ನು ನಿಯಂತ್ರಿಸುತ್ತಿರುವ ಮಾಫಿಯಾ ಪತ್ತೆ ಹಚ್ಚಲು ಸೂಕ್ತ ತನಿಖೆ ನಡೆಸುವ ಅಗತ್ಯವಿದೆ ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.